ಬೆಂಗಳೂರು, ಮಾರ್ಚ್ 20(ಕರ್ನಾಟಕ ವಾರ್ತೆ):
ಮಾರ್ಚ್ 27 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸದರಿ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಛಿಸಿದ್ದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ/ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಆನ್ ಲೈನ್/ವೀಡಿಯೋ ಕಾನ್ಫರೆನ್ಸ್/ಈ-ಮೇಲ್/ಎಸ್.ಎಮ್.ಎಸ್ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಉಚ್ಛ ನ್ಯಾಯಾಲಯ ಕಾನೂನು ಸೇವೆಗಳ ಸಮಿತಿಯನ್ನು, ಜಿಲ್ಲಾ ಕಾನೂನು ಸ್ಭೆವೆಗಳ ಪ್ರಾಧಿಕಾರಗಳನ್ನು ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಅಥವಾ ಖಾಯಂ ಜನತಾ ನ್ಯಾಯಾಲಯಗಳನ್ನು ಆನ್ ಲೈನ್/ವೀಡಿಯೋ ಕಾನ್ಫರೆನ್ಸ್ / ಈ-ಮೇಲ್/ ಎಸ್.ಎಮ್.ಎಸ್./ವಾಟ್ಸ್ ಆಪ್/ಎಲೆಕ್ಟ್ರಾನಿಕ್/ಮೋಡ್ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ: ನ್ಯಾಯ ಸಂಯೋಗ, ಕಾನೂನು ನೆರವು ಘಟಕ (ಬಹುವಿಧ ಸೇವೆಗಳು - ಒಂದೇ ಸೂರಿನ ಅಡಿಯಲ್ಲಿ) ‘ನ್ಯಾಯ ದೇಗುಲ’, ಮೊದಲನೆ ಮಹಡಿ, ಹೆಚ್.ಸಿದ್ಧಯ್ಯ ರಸ್ತೆ, ಬೆಂಗಳೂರು-560027, ದೂರವಾಣಿ ಸಂಖ್ಯೆ: 080-22111730 website : www.kslsa.kar.nic.in ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಹಾಯವಾಣಿ ಸಂಖ್ಯೆ: 1800-425-90900 ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ದೃಶ್ಯ ಕಲಾ ವಿಭಾಗದಲ್ಲಿ ಪಿ.ಹೆಚ್.ಡಿ. ಅಧ್ಯಯನಮಾಡುತ್ತಿರುವ
ಸಾಮಾನ್ಯ ವರ್ಗ/ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನ
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಠಿಯಿಂದ ದಶ್ಯಕಲಾ ವಿಭಾಗದಲ್ಲಿ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವ ಸಾಮಾನ್ಯ ವರ್ಗ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಕರೆಯಲಾಗಿದೆ.
ಕರ್ನಾಟಕದ ಚಿತ್ರಕಲೆಗೆ ಸಂಬಂಧಪಟ್ಟಂತೆ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಕರ್ನಾಟಕದವರಾಗಿದ್ದು ವಿಶ್ವ ವಿದ್ಯಾನಿಯಲದ ಮಾರ್ಗದರ್ಶಕರಿಂದ ದೃಢೀಕರಿಸಿದ ಪೂರ್ವಬಾವಿ ಫಲಶೃತಿಯನ್ನು ಕಡ್ಡಾಯವಾಗಿ ಲಗತ್ತಿಸಿರಬೆಕು. ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.ಅರ್ಜಿಯನ್ನು –ರಿಜಿಸ್ಟಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಇವರಿಂದ ಪಡೆದು ದಿನಾಂಕ: 28.03.2021ರ ಒಳಗೆ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ದೂರವಾಣಿ ಸಂಖ್ಯೆ: 080-22480297 ಅಥವಾ ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.