ಬೆಂಗಳೂರು, ಜುಲೈ.28: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಪ್ರತಿನಿತ್ಯ ಏರಿಕೆಯಾಗುತ್ತಿದೆ. 2019-20ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಪುನಾರಂಭಗೊಳ್ಳುತ್ತವೆಯೇ ಇಲ್ಲವೇ ಎನ್ನುವುದು ತೀವ್ರ ಚರ್ಚೆಯಾಗುತ್ತಿದೆ.
ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ಪುನಾರಂಭಿಸಬೇಕೇ ಅಥವಾ ಬೇಡವೇ ಎನ್ನುವುದರ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಜುಲೈ.31ರಂದು ಅನ್ ಲಾಕ್-2 ಅವಧಿ ಅಂತ್ಯಗೊಳ್ಳಲಿದೆ. ಆಗಸ್ಟ್.01ರಂದು ದೇಶಾದ್ಯಂತ ಲಾಕ್ ಡೌನ್-3ರ ಹೊಸ ಮಾರ್ಗಸೂಚಿಗಳು ಯಾವ ರೀತಿಯಲ್ಲಿ ಇರಬೇಕು ಎನ್ನುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದರು. ಈ ವೇಳೆ ಶಾಲಾ-ಕಾಲೇಜುಗಳ ಪುನಾರಂಭಕ್ಕೆ ವಿರೋಧ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.