ಬೆಂಗಳೂರು, ಜೂನ್ ೧೭, (ಕರ್ನಾಟಕ ವಾರ್ತೆ) : ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಕ ಮಾಡಿಕೊಳ್ಳಲು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಪ್ರೊ.ಭೀಮಸೇನ .ಆರ್ ಅವರು ಆಗ್ರಹಿಸಿದ್ದಾರೆ.
ಕರ್ನಾಟಕ ಅಧಿಕೃತ ರಂಗ ಶಿಕ್ಷಣ ಕೇಂದ್ರಗಳಲ್ಲಿಯ ರಂಗ ಪದವೀಧರರು ಕಠಿಣ ಪರಿಶ್ರಮಿಗಳೂ, ಕೌಶಲ್ಯಭರಿತರೂ ಆಗಿದ್ದು ಪ್ರತಿಭಾವಂತರಾಗಿದ್ದಾರೆ. ಪ್ರತಿ ವರ್ಷ ೨೦೦ ಕ್ಕೂ ಹೆಚ್ಚು ರಂಗ ಪದವೀಧರರು ಸಮಾಜಕರ್ಪಿತವಾಗುತ್ತಿದ್ದಾರೆ. ಅಂತಹವರನ್ನು ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳುವ ಮೂಲಕ ಕೋವಿಡ್ ಸಂಕಷ್ಟದಲ್ಲಿ ಸರಿಯಾದ ಶಿಸ್ತು, ಶಿಕ್ಷಣವಿಲ್ಲದ ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಬೇಕೆಂದು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರು ಹಾಗೂ ಸದಸ್ಯರು ವಿನಂತಿಸಿದ್ದಾರೆ.