ಆರೋಗ್ಯ ಸಚಿವರೇ ವಿರೋಧಿಸುತ್ತಿರುವಾಗ SSLC ಪರೀಕ್ಷೆ ಏಕೆ: ಸಿದ್ದರಾಮಯ್ಯ

varthajala
0

 ಮೈಸೂರು: ರಾಜ್ಯದ ಇವತ್ತಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸಬಾರದು. ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದರು. ಪಿಯುಸಿ ಪರೀಕ್ಷೆ ರದ್ದಾದ ಮೇಲೆ SSlC ಪರೀಕ್ಷೆ ಯಾಕೆ ಮಾಡುತ್ತಿದ್ದೀರಿ. SSLC ಪರೀಕ್ಷೆ ನಡೆಸುವ ಬಗ್ಗೆ ಆರೋಗ್ಯ ಸಚಿವರೇ ವಿರೋಧ ಮಾಡಿದ್ದಾರೆ. ಆದರು ಯಾಕೆ SSlC ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.


ಲಸಿಕೆ ವಿತರಣೆ ವಿಚಾರವಾಗಿ ಆರೋಗ್ಯ ಸಚಿವ ಕೆ.ಸುಧಾಕರ್​​ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಾಕ್ಸಿನ್ ವಿಚಾರದಲ್ಲಿ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ. ವಾಕ್ಸಿನ್ ಸ್ಟಾಕ್ ಇದ್ದರೆ ಜನ ಯಾಕೆ ವಾಕ್ಸಿನ್ ಗಾಗಿ ಕ್ಯೂ ನಿಲ್ಲುತ್ತಿದ್ದರು. ವಾಕ್ಸಿನ್ ಗಾಗಿ ಜನರು ಪರದಾಡುತ್ತಿದ್ದು, ಸರ್ಕಾರಕ್ಕೆ ವಾಕ್ಸಿನ್ ಪೂರೈಸಲು ಆಗುತ್ತಿಲ್ಲ. ಸರ್ಕಾರದಲ್ಲಿ ಸಚಿವರ ನಡುವೆ ಸಮನ್ವಯತೆ ಇಲ್ಲ. ವಾಕ್ಸಿನ್ ಹಂಚಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರ್ಕಾರ ವಿಫಲವಾಗಿವೆ‌. ಸರಿಯಾದ ಪ್ಲ್ಯಾನ್ ಮಾಡದೆ ವಾಕ್ಸಿನ್ ಗಾಗಿ ಜನ ಅಲೆಯುವಂತೆ ಮಾಡಿದೆ ಎಂದು ಕಿಡಿಕಾರಿದರು.
ತುರ್ತಾಗಿ ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ಕರೆಯಬೇಕು. ಇಂತಹ ತುರ್ತು ಪರಿಸ್ಥಿತಿಯಲ್ಲಿ ಅಧಿವೇಶನ ಕರೆಯದೆ. ಇನ್ನು ಯಾವ ಸಂದರ್ಭದಲ್ಲಿ ಅಧಿವೇಶನ ಕರೆಯುತ್ತಾರೆ. ವಿರೋಧ ಪಕ್ಷಗಳನ್ನ ಎದುರಿಸಲು ಆಡಳಿತ ಪಕ್ಷಕ್ಕೆ ಭಯವಿದೆ. ಈಗಾಗಿಯೇ ಅಧಿವೇಶನ ಕರೆಯುತ್ತಿಲ್ಲ. ಅಧಿವೇಶನ ಕರೆದರೆ ಸರ್ಕಾರದ ಬಣ್ಣ ಬದಲಾಗುತ್ತೆ ಎಂಬುದು ಅವರಿಗೆ ಗೊತ್ತಿದೆ. ಪ್ರಜಾಪ್ರಭುತ್ವದ ಮೇಲೆ ಅವರಿಗೆ ನಂಬಿಕೆ ಇದ್ದರೆ ಅಧಿವೇಶನ ಕರೆಯಬೇಕು. ತುರ್ತಾಗಿ ಮುಂಗಾರು ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.

ADVERTISEMENT :


Post a Comment

0Comments

Post a Comment (0)