ಬೆಂಗಳೂರು, ಆಗಸ್ಟ್ 02 (ಕರ್ನಾಟಕ ವಾರ್ತೆ): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2021-22 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.1000/- ರಿಂದ 1,200/- ರವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 16, 2021 ಕೊನೆಯ ದಿನಾಂಕವಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-582102 ಇವರಿಗೆ ಸಲ್ಲಿಸಬೇಕು. ಒಟ್ಟು 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ದಿನಾಂಕ: 01-07-2021ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು.
ಡಿಪ್ಲೋಮಾ ಕೋರ್ಸಿಗೆ ಲಭ್ಯವಿರುವ ಸಂಸ್ಥೆಗಳು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) - 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) – 03 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಒಟ್ಟು 44 ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕೌನ್ಸಿಲಿಂಗ್ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 080-23561628/23566082/23568223 ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ ದೂರವಾಣಿ ಸಂಖ್ಯೆ: 08372-297221 ಅಥವಾ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು/ ಉಪ ನಿರ್ದೇಶಕರು/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.