28 ನೇ ಮಕ್ಕಳ ವಿಜ್ಞಾನ ಸಮಾವೇಶ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಾಲವಿಜ್ಞಾನಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು, ಆಗಸ್ಟ್ 13, (ಕರ್ನಾಟಕ ವಾರ್ತೆ) : ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಭಾರತ ಸರ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯದಲ್ಲಿ ಮಕ್ಕಳ ವಿಜ್ಞಾನ ಸಮಾವೇಶವನ್ನು ಸಂಘಟಿಸಲಾಗಿದೆ ಎಂದು ಕರ್ನಾಟಕ ರಾಜ್ಯವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಸಿ.ಕೃಷ್ಣೇಗೌಡ ಅವರು ತಿಳಿಸಿದ್ದಾರೆ.
ಭವಿಷ್ಯದ ಬಾಲವಿಜ್ಞಾನಿಗಳನ್ನು ರೂಪಿಸಲು ನೆರವಾಗಿರುವ ಸಮಾವೇಶದಲ್ಲಿ ವಿದ್ಯಾರ್ಥಿಗಳು ಸಮಾವೇಶದ ಕೇಂದ್ರ ವಿಷಯ ‘ಸುಸ್ಥಿರ ಜೀವನಕ್ಕಾಗಿ ವಿಜ್ಞಾನ’ ಎಂಬ ವಿಷಯದಡಿ ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ತಾವೇ ಸ್ವತಃ ರೂಪಿಸಿರುವ ವೈಜ್ಞಾನಿಕ ವಿಶ್ಲೇಷಣೆ / ಅವಲೋಕನದಿಂದ ಅಧ್ಯಯನ ಕೈಗೊಂಡ ಯೋಜನಾ ವರದಿಯನ್ನು ಮಂಡಿಸಬೇಕಾಗುತ್ತದೆ. ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಮುಖ್ಯ ಉದ್ದೇಶ 10-17 ವರ್ಷ ವಯೋಮಾನದ ಮಕ್ಕಳಿಗೆ ಸೂಕ್ತ ವೇದಿಕೆಯನ್ನು ಒದಗಿಸಿಕೊಡುವುದು. ಭವಿಷ್ಯದ ಬಾಲವಿಜ್ಞಾನಿಗಳನ್ನು ರೂಪಿಸಲು ನೆರವಾಗಲು ಈ ಯೋಜನೆ ಸಹಕಾರಿಯಾಗುತ್ತದೆ.
ಈ ಸಮಾವೇಶದಲ್ಲಿ 10 ರಿಂದ 17 ವರ್ಷ ವಯೋಮಾನದ ಯಾವುದೇ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಒಂದು ತಂಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಈ ಸಮಾವೇಶದಲ್ಲಿ ಶಾಲೆ ಬಿಟ್ಟ ಮಕ್ಕಳೂ ಕೂಡ ಭಾಗವಹಿಸಲು ಅವಕಾಶವಿದೆ. ಈ ಸಮಾವೇಶವು ಜಿಲ್ಲಾಮಟ್ಟ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟ 03 ಹಂತದಲ್ಲಿ ಜರುಗಲಿದೆ. ಕಿರಿಯರು 10 ರಿಂದ 14 ವಯೋಮಾನದವರು ಹಾಗೂ ಹಿರಿಯರು 14 ರಿಂದ 17 ವಯೋಮಾನದವರು ಇರಬಹುದಾಗಿದೆ.
ಈ ಯೋಜನೆಗಳಲ್ಲಿ ಅತ್ಯುತ್ತಮವಾದ 10 ಯೋಜನೆಗಳನ್ನು ಪ್ರತಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಒಟ್ಟು 300 ಯೋಜನೆಗಳನ್ನು ರಾಜ್ಯಮಟ್ಟದಲ್ಲಿ ಆನ್‍ಲೈನ್‍ನಲ್ಲಿ ವಿದ್ಯಾರ್ಥಿಗಳು ಯೋಜನೆಯನ್ನು ಮಂಡಿಸಿರುತ್ತಾರೆ. ಇದರಲ್ಲಿ ಅತ್ಯುತ್ತಮವಾದ 30 ಯೋಜನೆಗಳನ್ನು ಮೌಲ್ಯಮಾಪಕರು ಆಯ್ಕೆ ಮಾಡಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು.
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ 30 ಬಾಲವಿಜ್ಞಾನಿಗಳಿಗೆ ಆಗಸ್ಟ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಪ್ರೊ. ಎಂ.ಎ. ಸೇತುರಾವ್ ಸಭಾಂಗಣದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಸಂಸ್ಥಾನಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದ ಮಹಾ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಬಾಲವಿಜ್ಞಾನಿಗಳಿಗೆ ಆಶೀರ್ವಚನ ನೀಡಲಿದ್ದಾರೆ. ಉನ್ನತ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಡಾ.ಅಶ್ವತ್ಥನಾರಾಯಣ ಅವರು ಪ್ರಶಸ್ತಿ ಪ್ರಧಾನ ಮಾಡುವರು.
ಡಿ.ಆರ್.ಡಿ.ಒ ವಿಶ್ರಾಂತ ಮುಖ್ಯಸ್ಥರು ಹಾಗೂ ಹಿರಿಯ ವಿಜ್ಞಾನಿಗಳು ಇವರು ಮೂಲ ವಿಜ್ಞಾನದ ಕುರಿತು ಉಪನ್ಯಾಸ ನೀಡುವರು. ವಿಧಾನ ಪರಿಷತ್ತಿನ ಶಾಸಕರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎಸ್.ವಿ.ಸಂಕನೂರ ಕೆ-ಸ್ಟೆಪ್ಸ್‍ನ ವ್ಯವಸ್ಥಾಪಕ ನಿರ್ದೇಶಕರಾದ ಎ.ಬಿ.ಬಸವರಾಜು, ಅದಮ್ಯ ಚೇತನದ ಮುಖ್ಯಸ್ಥರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಅಧ್ಯಕ್ಷರು ಗಿರೀಶ ಕಡ್ಲೇವಾಡ, ಮಕ್ಕಳ ವಿಜ್ಞಾನ ಸಮಾವೇಶ 2020ರ ರಾಜ್ಯ ಶೈಕ್ಷಣಿಕ ಸಂಯೋಜಕರು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.