ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರದ ಆಧಾರದ ಮೇಲೆ ಪ್ರಯಾಣಿಸಲು ಅನುಮತಿ

varthajala
0

ಬೆಂಗಳೂರು ಆಗಸ್ಟ್ 16 (ಕರ್ನಾಟಕ ವಾರ್ತೆ) : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ.


ಆದರೆ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ದಿನಾಂಕಗಳಂದು ಅಂದರೆ ದಿನಾಂಕ:19.08.2021 ರಿಂದ 03.09.2021 ರವರೆಗೆ ಎಲ್ಲಾ  ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಬಸ್ಸಿನಲ್ಲಿ ಪ್ರಯಾಣಿಸುವಾಗ ದ್ವಿತೀಯ ಪಿ.ಯು.ಸಿ ಪ್ರವೇಶ ಪತ್ರವನ್ನು (ಅಡ್ಮೀಷನ್ ಟಿಕೇಟ್) ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ. ಬಿ.ಎಂ.ಟಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tags

Post a Comment

0Comments

Post a Comment (0)