ಸೆಪ್ಟೆಂಬರ್ 18 ರಂದು “ಜಲ ಸ್ಪಂದನ” ಕಾರ್ಯಕ್ರಮ

varthajala
0

ಬೆಂಗಳೂರು, ಸೆಪ್ಟೆಂಬರ್ 16, (ಕರ್ನಾಟಕ ವಾರ್ತೆ):

ಬೆಂಗಳೂರು ಜಲಮಂಡಳಿಯು ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಲು ಪ್ರತಿ ಮೂರನೇ ಶನಿವಾರ ಜನ ಸ್ನೇಹಿ ಹೆಜ್ಜೆಯಾದ “ಜಲ ಸ್ಪಂದನ” ಕಾರ್ಯಕ್ರಮವನ್ನು ದೂರವಾಣಿ ಮುಖಾಂತರ ಆಯೋಜಿಸಿದ್ದು, ಸೆಪ್ಟೆಂಬರ್ 18 ರಂದು ಬೆಳಿಗ್ಗೆ: 10:00 ರಿಂದ ಮಧ್ಯಾಹ್ನ 01:00 ರವರೆಗೆ 16 ವಿವಿಧ ಸ್ಥಳಗಳಲ್ಲಿ ಪ್ರಧಾನ ಮುಖ್ಯ ಅಭಿಯಂತರರು ಮತ್ತು ಅಪರ ಮುಖ್ಯ ಅಭಿಯಂತರರÀ ಸಮ್ಮುಖದಲ್ಲಿ “ಜಲ ಸ್ಪಂದನ”  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ:  bwssb.gov.in  ನಲ್ಲಿ ಪಡೆದುಕೊಳ್ಳಬಹುದು. ಬೆಂಗಳೂರು ಜಲಮಂಡಳಿ ನೀರು ಮತ್ತು ಒಳಚರಂಡಿ ಮಂಡಳಿಯ  ಸಹಾಯವಾಣಿ ಸಂಖ್ಯೆ: 1916 ಹಾಗೂ ವಾಟ್ಸ್‍ಆಪ್ ಸಂಖ್ಯೆ:8762228888 ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮನೆಯಂಗಳದಲ್ಲಿ ಮಾತುಕತೆ 216 ನೇ ಸಂಚಿಕೆ ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯವು ಮನೆಯಂಗಳದಲ್ಲಿ ಮಾತುಕತೆ ಎಂಬ ವೈಶಿಷ್ಟ್ಯಪೂರ್ಣ ಕಾರ್ಯಕ್ರಮವನ್ನು ಸೆಪ್ಟೆಂಬರ್ 18 ರಂದು ಶನಿವಾರ ಸಂಜೆ 4.00 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ತಿಂಗಳ ಅತಿಥಿಗಳಾಗಿ ಖ್ಯಾತ ರಂಗಭೂಮಿ ಕಲಾವಿದರಾದ ಡಾ.ಬಿ.ವಿ.ರಾಜಾರಾಂ ಅವರು ಆಗಮಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಅಂತಾರಾಷ್ಟ್ರೀಯ ಸಿರಿ ಧಾನ್ಯಗಳ ವರ್ಷ -2023ರ ಉದ್ಘಾಟನಾ ಸಮಾರಂಭ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಅಂತಾರಾಷ್ಟ್ರೀಯ ಸಿರಿ ಧಾನ್ಯಗಳ ವರ್ಷ -2023ರ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 17, 2021 ರಂದು ಬೆಳಿಗ್ಗೆ 10.00 ಗಂಟೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿರುವ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯದ ರಾಜ್ಯ ಮಂತ್ರಿಗಳಾದ ಕೈಲಾಶ ಚೌಧರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಸ್.ರಾಜೇಂದ್ರ ಪ್ರಸಾದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರಾದ ಡಾ. ಕೆ.ಸಿ.ನಾರಾಯಣಸ್ವಾಮಿ, ವಿಸ್ತರಣಾ ನಿರ್ದೇಶಕರಾದ ಡಾ.ಎನ್. ದೇವಕುಮಾರ್, ಸಂಶೋಧನಾ ನಿರ್ದೇಶಕರಾದ ಡಾ.ವೈ.ಜಿ. ಷಡಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಜೂಮ್ ಸಭೆಯ ಲಿಂಕ್ :

https://us02web.zoom.us/1/86105563485pwd=NnZMNWZvZU955tvNnRWETFVU2htdz09

ಸಭೆಯ ಐ.ಡಿ. 86105563485 ಪಾಸ್‍ಕೋಡ್ : 123
ಹೆಚ್ಚಿನ ಮಾಹಿತಿಗಾಗಿ ಡಾ. ಕೆ. ಶಿವರಾಮು, ಪ್ರಾಧ್ಯಾಪಕರು, ಹಾಗೂ ಹಿರಿಯ ವಾರ್ತಾತಜ್ಞರು, ಮೊಬೈಲ್ ಸಂ. 9972035456 ಮತ್ತು ಡಾ. ಎಂ.ಎ. ಮೂರ್ತಿ, ಸಹಾಯಕ ಪ್ರಾಧ್ಯಾಪಕರು ಮೊಬೈಲ್ ಸಂ. 9535355329 ಇವರನ್ನು ಸಂಪರ್ಕಿಸುವುದು.
Tags

Post a Comment

0Comments

Post a Comment (0)