ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಅಂತಾರಾಷ್ಟ್ರೀಯ ಸಿರಿ ಧಾನ್ಯಗಳ ವರ್ಷ -2023ರ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 17, 2021 ರಂದು ಬೆಳಿಗ್ಗೆ 10.00 ಗಂಟೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿರುವ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯದ ರಾಜ್ಯ ಮಂತ್ರಿಗಳಾದ ಕೈಲಾಶ ಚೌಧರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಸ್.ರಾಜೇಂದ್ರ ಪ್ರಸಾದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರಾದ ಡಾ. ಕೆ.ಸಿ.ನಾರಾಯಣಸ್ವಾಮಿ, ವಿಸ್ತರಣಾ ನಿರ್ದೇಶಕರಾದ ಡಾ.ಎನ್. ದೇವಕುಮಾರ್, ಸಂಶೋಧನಾ ನಿರ್ದೇಶಕರಾದ ಡಾ.ವೈ.ಜಿ. ಷಡಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜೂಮ್ ಸಭೆಯ ಲಿಂಕ್ :
ಸಭೆಯ ಐ.ಡಿ. 86105563485 ಪಾಸ್‍ಕೋಡ್ : 123
ಹೆಚ್ಚಿನ ಮಾಹಿತಿಗಾಗಿ ಡಾ. ಕೆ. ಶಿವರಾಮು, ಪ್ರಾಧ್ಯಾಪಕರು, ಹಾಗೂ ಹಿರಿಯ ವಾರ್ತಾತಜ್ಞರು, ಮೊಬೈಲ್ ಸಂ. 9972035456 ಮತ್ತು ಡಾ. ಎಂ.ಎ. ಮೂರ್ತಿ, ಸಹಾಯಕ ಪ್ರಾಧ್ಯಾಪಕರು ಮೊಬೈಲ್ ಸಂ. 9535355329 ಇವರನ್ನು ಸಂಪರ್ಕಿಸುವುದು.