ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 29(ಕರ್ನಾಟಕ ವಾರ್ತೆ): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಸೇರ ಬಯಸುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನಿಗದಿಪಡಿಸಿದ ಗುರಿಗಳನ್ವಯ ಪರಿಶಿಷ್ಟ ಪಂಗಡದ 19 ಪ್ರತಿಭಾವಂತ ನವೀನ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಷರತ್ತುಗಳು, ಅರ್ಜಿ ನಮೂನೆಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು 2021ರ ಅಕ್ಟೋಬರ್ 16 ಕೊನೆಯ ದಿನವಾಗಿದೆ.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-297874478, ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕುವಾರು ಸಹಾಯಕ ನಿರ್ದೇಶಕರ ಕಚೇರಿ, ದೇವನಹಳ್ಳಿ ತಾಲ್ಲೂಕು, ದೂ.ಸಂ.: 080-27681784, ದೊಡ್ಡಬಳ್ಳಾಪುರ ತಾಲ್ಲೂಕು, ದೂ.ಸಂ.: 080-27623682, ಹೊಸಕೋಟೆ ತಾಲ್ಲೂಕು, ದೂ.ಸಂ.: 080-27931528, ನೆಲಮಂಗಲ ತಾಲ್ಲೂಕು, ದೂ.ಸಂ.: 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.