ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ; ಉರ್ದು ಶಿಕ್ಷಕರಿಗೆ ಅನ್ಯಾಯ ಐಟಾ ಆರೋಪ

varthajala
0



ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದಿಂದ ೨೦ ಹಾಗೂ ಪ್ರೌಢಶಾಲಾ ವಿಭಾಗದಿಂದ ೧೧ ಶಿಕ್ಷಕರನ್ನು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಇದರಲ್ಲಿ ಉರ್ದು ಮಾದ್ಯಮ ಶಿಕ್ಷಕರನ್ನು ಕಡೆಗಣಿಸಲಾಗಿದೆ ಎಂದು ಆಲ್ ಇಂಡಿಯಾ ಐಡಿಯಲ್ ಟೀರ‍್ಸ್ ಅಸೋಸಿಯೇಶನ್ ಆರೋಪಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆಗೊಳಿಸಿರುವ ಐಟಾ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಸರ್ಕಾರ ಕನ್ನಡ, ಹಿಂದಿ, ಚಿತ್ರಕಲೆ ಸೇರಿದಂತೆ ಎಲ್ಲ ವಿಭಾಗದಿಂದ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿದೆ. ಆದರೆ ಉರ್ದು ಮಾಧ್ಯಮದ ಶಿಕ್ಷಕಕರನ್ನು ಕಡೆಗಣಿಸಿ ಅನ್ಯಾಯ ಮಾಡಿದಂತಾಗಿದೆ ಎಂದು ಆರೋಪಿಸಿದ್ದು ಮುಂದಿನ ವರ್ಷದಲ್ಲಿ ಸರ್ಕಾರ ಈ ಕುರಿತಂತೆ ಪರಿಶೀಲನೆ ನಡೆಸಿ ಕನಿಷ್ಠ ಪಕ್ಷ ಪ್ರತಿ ವಿಭಾಗದಿಂದ ಇಬ್ಬರು ಶಿಕ್ಷಕರನ್ನಾದರೂ ಪ್ರಶಸ್ತಿಗೆ ಪರಿಗಣಿಸಬೇಕೆಂದು ಅವರು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಲ್ಲಿ ಹಾಗೂ ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ.

Tags

Post a Comment

0Comments

Post a Comment (0)