ಬೆಂಗಳೂರು, ಸೆಪ್ಟೆಂಬರ್ 17, (ಕರ್ನಾಟಕ ವಾರ್ತೆ) ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಮಾನ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ ಕಲಾಪದ ವೇಳೆ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಧಾರವಾಡ ವಿಶ್ವವಿದ್ಯಾಲಯವು ಒಳಗೊಂಡಂತೆ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ 264 ಬೋಧಕ ಹುದ್ದ ಹಾಗೂ 2600 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಆದಷ್ಟು ಬೇಗ ಶೇಕಟ 50 ರಷ್ಟು ಹುದ್ದೆಗಳನ್ನು ತುಂಬಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಸದನದಲ್ಲಿ ತಿಳಿಸಿದರು.