ರಾಷ್ಟ್ರೀಯ ಶಿಕ್ಷಣ ನೀತಿ-2020 ನ್ನು ಅನುಷ್ಠಾನಗೊಳಿಸುವ ಸಂಬಂಧ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯವು ಒಂದು ದಿನದ ಕಾರ್ಯಾಗಾರವನ್ನು ಅಕ್ಟೋಬರ್ 13 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಪಿ.ಪ್ರದೀಪ್, ಐ.ಎ.ಎಸ್ ಅವರು ಕಾರ್ಯಾಗಾರದ ಉದ್ಘಾಟನೆ ಮಾಡಲಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಲ್. ಗೋಮತಿ ದೇವಿಯವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸುವರು.ರಾಷ್ಟ್ರೀಯ ಶಿಕ್ಷಣ ನೀತಿ ಕರಡು ತಯಾರಕ ಸಮಿತಿಯ ಸದಸ್ಯರು ಹಾಗೂ ಆಂಧ್ರ ಪ್ರದೇಶದ ಕೇಂದ್ರ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ತೇಜಸ್ವಿ ಕಟ್ಟಿಮನಿ ಅವರು ಕಾರ್ಯಾಗಾರದ ಪೂರ್ವಾಹ್ನದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಬೋಧಕ ವರ್ಗ, ಆಡಳಿತ ವರ್ಗ ಮತ್ತು ವಿದ್ಯಾರ್ಥಿಗಳಿಗೆ ಹೊಸ ಶಿಕ್ಷಣ ನೀತಿಯ ಅನುಷ್ಠಾನದಿಂದ ಆಗಬಹುದಾದ ಶೈಕ್ಷಣಿಕ ಉನ್ನತಿಯ ಬಗ್ಗೆ ತಿಳಿಸಲಿದ್ದಾರೆ.
ತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ವೈ. ಎಸ್. ಸಿದ್ದೇಗೌಡ ಅವರು ಅಪರಾಹ್ನದಲ್ಲಿ ಶಿಕ್ಷಣ ನೀತಿಯ ಅನುಷ್ಠಾನವನ್ನು ಸುಗಮಗೊಳಿಸುವ ಬಗ್ಗೆ ಪ್ರವಚನ ನೀಡಲಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಹೆಚ್. ರಾಮಕೃಷ್ಣಯ್ಯ ಅವರು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ನೂತನ ಶಿಕ್ಷಣ ನೀತಿಯ ಜಾರಿಗೊಳಿಸುವಿಕೆಯ ಅನೇಕ ಮಜಲುಗಳ ಬಗ್ಗೆ ಕಿರು-ಭಾಷಣವನ್ನು ನೀಡಲಿದ್ದಾರೆ.