ವಿವಿಧ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ

varthajala
0

ಬೆಂಗಳೂರು ನಗರ ಜಿಲ್ಲೆ, ಸೆ.21 (ಕರ್ನಾಟಕ ವಾರ್ತೆ) : 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು, ನಾದಸ್ವರ ಮತ್ತು ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

          ತರಬೇತಿಯು 4 ವರ್ಷಗಳ ಕಾಲ ನಡೆಯಲಿದ್ದು, ಉಚಿತ ಊಟ , ವಸತಿ , ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ , ಬೆಂಗಳೂರು ನಗರ ಜಿಲ್ಲೆಯಿಂದ ಪಡೆದು, ಭರ್ತಿ ಮಾಡಿ ದಿನಾಂಕ:16/10/2021 ರೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ , ಬೆಂಗಳೂರು ನಗರ ಜಿಲ್ಲೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್‌ www.backwardclasses.kar.nic.in ಗೆ ಭೇಟಿ ನೀಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ನೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Post a Comment

0Comments

Post a Comment (0)