ಶಿವಮೊಗ್ಗ : ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಅರ್ಜಿ ಆಹ್ವಾನ

varthajala
0

ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ  ಖಾಲಿ ಇರುವ ಪ್ರೋಸೆಸ್ ಜಾರಿಕಾರ ಒಟ್ಟು 07 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/shivamogga-onlinerecruitment  ಅಥವಾ http://karnatakajudiciary.kar.nic.in/districtrecruitment.asp     ಲಿಂಕ್ ಮೂಲಕ ಆನ್ ಲೈನ್‍ನಲ್ಲಿ ಅರ್ಜಿಗಳನ್ನು  ಸಲ್ಲಿಸಬಹುದಾಗಿದ್ದು, ದಿನಾಂಕ: 30-12-2021 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಾಹನ ಚಾಲನೆಯ ಲೈಸನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ ಪ್ರವರ್ಗ 2-ಎ, 2-ಬಿ, 3-ಎ ಮತ್ತು 3-ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ. ಹೆಚ್ಚಿನ ಮಾಹಿತಿಯನ್ನು https://districts.ecourts.gov.in/shivamogga-onlinerecruitment    ವೆಬ್‍ಸೈಟ್‍ಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Tags

Post a Comment

0Comments

Post a Comment (0)