ಬೆಂಗಳೂರು, ನವೆಂಬರ್ 25 (ಕರ್ನಾಟಕ ವಾರ್ತೆ):
ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ 9-12 ನೇ ವರ್ಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಎಳೆಯ ವಯಸ್ಸಿನಲ್ಲೇ `ವೈಜ್ಞಾನಿಕ ವಿಧಾನ'ದ ಮನವರಿಕೆ ಮಾಡುವ, ಅವರನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವ, ರಾಜ್ಯದ/ರಾಷ್ಟ್ರದ ವೈಜ್ಞಾನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುವ ಹಾಗೂ ಮೂಲ ವಿe್ಞÁನ ವಿಷಯಗಳಲ್ಲಿ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹಾಗೂ ಚಿಂತನ ಕೌಶಲ್ಯವನ್ನು ವರ್ಧಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿµತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ರಾಜ್ಯಾದ್ಯಂತ ಸಂಘಟಿಸುತ್ತಿದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಕರಾವಿಪದಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಡಿಸೆಂಬರ್ 4 ರೊಳಗಾಗಿ ಅಂಚೆ, ಕೋರಿಯರ್, ಇ-ಮೇಲೆ (ಞಡಿvಠಿ.iಟಿಜಿo@gmಚಿiಟ.ಛಿom) ಅಥವಾ ವಾಟ್ಸಪ್ (ನಂ.9483549159) ಮೂಲಕ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಯುವ ವಿಜ್ಞಾನಿ ವಿಬಾಗ, ವಿಜ್ಞಾನ ಭವನ, ನಂ.24/2, 21 ನೇ ಮುಖ್ಯ ರಸ್ತೆ, ಬನಶಂಕರಿ 2 ನೇ ಹಂತ, ಬೆಂಗಳೂರು ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮೊದಲು ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಡಿಸೆಂಬರ್ 14 ರಂದು ಏಕಕಾಲದಲ್ಲಿ ಆಯೋಜಿಸಲಾಗುತ್ತದೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆಯುವ ವಿದ್ಯಾರ್ಥಿಗೆ ರೂ. 5000/-ಹಾಗೂ ದ್ವಿತೀಯ ಬಹುಮಾನ ಪಡೆಯುವ ವಿದ್ಯಾರ್ಥಿಗೆ ರೂ. 3000/-ಗಳ ನಗದು ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಹಂತದಲ್ಲಿ ನಗದು ಬಹುಮಾನದೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ 4 ಯುವ ವಿಜ್ಞಾನಿಗಳಿಗೆ ತಲಾ ರೂ. 10,000/- ಗಳ ನಗದು ಬಹುಮಾನದೊಂದಿಗೆ ಸ್ಮರಣಿಕೆ ಮತ್ತು ಯುವ ವಿಜ್ಞಾನಿ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ರಾಜ್ಯ ಸಂಯೋಜಕರಾದ ಮೀನಾಕ್ಷಿ ಶಿವಾನಂದ ಕುಡಸೋಮಣ್ಣವರ ಮೊ : 7353960666 ಇವರನ್ನು ಸಂಪರ್ಕಿಸಬಹ್ಮದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.