ರೈತರಿಂದ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

varthajala
0
ಬೆಂಗಳೂರು, ನವೆಂಬರ್ 19 (ಕರ್ನಾಟಕ ವಾರ್ತೆ) : ಕೃಷಿ ಇಲಾಖೆ ವತಿಯಿಂದ 2021-22ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿ (ಬೆಳೆ ಸ್ಪರ್ಧೆ)ಗಾಗಿ ಭಾಗವಹಿಸಲಿಚ್ಚಿಸುವ ರೈತರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ಅನ್ವಯಿಸುವಂತೆ ನಿಗಧಿತ ನಮೂನೆಯಲ್ಲಿ ಒಂದೇ ಅರ್ಜಿಯನ್ನು ಸಲ್ಲಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ರೈತರಿಗೆ ರೂ 25 ಮತ್ತು ಸಾಮಾನ್ಯ ರೈತರಿಗೆ ರೂ.100 ನಿಗಧಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30, 2021 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ವಿಸ್ತರಣಾ ಕಾರ್ಯಕರ್ತರನ್ನಾಗಲಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನಾಗಲಿ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Tags

Post a Comment

0Comments

Post a Comment (0)