ಬೆಂಗಳೂರು, ಡಿಸೆಂಬರ್ 09 (ಕರ್ನಾಟಕ ವಾರ್ತೆ): ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿ ವತಿಯಿಂದ 2021-22 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಪಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟಾದಡಿಯಲ್ಲಿ ಪ್ರಥಮ ಡಿ.ಫಾರ್ಮಾ ಕೋರ್ಸಿನ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಪರೀಕ್ಷಾ ಪ್ರಾಧಿಕಾರ ಮಂಡಳಿಯ ವೆಬ್‍ಸೈಟ್‍ನ www.beadpharmacy.org ಮೂಲಕ ಸಲ್ಲಿಸಬೇಕು. ನೇರ ಅಥವಾ ಅಂಚೆ ಮೂಲಕ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಅರ್ಜಿಗಳನ್ನು ಸಲ್ಲಿಸಲು 2021, ಡಿಸೆಂಬರ್ 21, ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ಪಿಸಿಎಂ/ಪಿಸಿಬಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22483465, 080-22222681 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.