ಬೆಂಗಳೂರು: ನಗರದಲ್ಲಿ ಮತ್ತೊಂದು ನಕಲಿ ಅಂಕಪಟ್ಟಿ ಹಗರಣ ಬೆಳಕಿಗೆ ಬಂದಿದ್ದು, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಬರೋಬ್ಬರಿ 91 ಮಂದಿ ನಕಲಿ ಅಂಕಪಟ್ಟಿ ನೀಡಿ ಸರಕಾರಿ ಉದ್ಯೋಗ ಪಡೆದುಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಸಂಬ0ಧ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಜಂಟಿ ನಿರ್ದೇಶಕ ಬಿ.ಎಲ್. ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ 91 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ನಕಲಿ ಅಂಕಪಟ್ಟಿ ಪ್ರಕರಣದಲ್ಲಿ ಬೆಂಗಳೂರು ವಿವಿ ಪಾತ್ರವಿಲ್ಲ: ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ
ಇತ್ತೀಚೆಗೆ ಇಲಾಖೆಯ ಪರೀಕ್ಷಾ ವಿಭಾಗಕ್ಕೆ ರಾಜ್ಯ ಸರಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು ಹಾಗೂ ವಿವಿಧ ನೇಮಕಾತಿ ಪ್ರಾಧಿಕಾರಗಳಿಂದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಪಡೆದುಕೊಂಡು ಉತ್ತೀರ್ಣರಾದ ಅಭ್ಯರ್ಥಿಗಳ ಅಂಕಪಟ್ಟಿ ನೈಜತೆ ಪರಿಶೀಲನೆಗೆ ಕಳುಹಿಸಲಾಗಿತ್ತು. ಈ ವೇಳೆ ಪರಿಶೀಲಿಸಿದಾಗ ಬೆಂಗಳೂರು, ಮಂಡ್ಯ, ಮೈಸೂರು, ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳ ಸುಮಾರು 91 ಮಂದಿ ಇಲಾಖೆಯ ಸಿಬ್ಬಂದಿ ಜತೆ ಸೇರಿಕೊಂಡು ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿಕೊಂಡು ಸರಕಾರಿ ಉದ್ಯೋಗ ಪಡೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ. ಈ ಸಂಬAಧ 91 ಮಂದಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ದಾಖಲೆ ಸಮೇತ ಚಂದ್ರಶೇಖರ್ ದೂರು ನೀಡಿದ್ದಾರೆ.
ನಕಲಿ ಅಂಕಪಟ್ಟಿ ಪಡೆದು ವಿದೇಶಕ್ಕೆ ಹಾರಲು ಯತ್ನ: ಆರೋಪಿ ಹಾಗೂ ಏಜೆಂಟ್ ಇಬ್ಬರೂ ಖಾಕಿ ಬಲೆಗೆ..!
ಈ ಕುರಿತು ಪ್ರತಿಕ್ರಿಯೆ ನೀಡಿದ ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ, ''ನಕಲಿ ಅಂಕಪಟ್ಟಿ ಪಡೆದುಕೊಂಡು ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ. ಬೆಂಗಳೂರು ಮೂಲದ ವ್ಯಕ್ತಿಯೇ ನಕಲಿ ಅಂಕಪಟ್ಟಿ ಡೀಲ್ ಮಾಡಿದ್ದಾನೆ. ಆತನಿಗಾಗಿ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಇದರೊಂದಿಗೆ ಆತನಿಗೆ ಬಹಳಷ್ಟು ಮಂದಿ ಸಹಕಾರ ನೀಡಿದ್ದಾರೆ ಎಂಬ ಅನುಮಾನವಿದ್ದು, ಪ್ರಾಥಮಿಕವಾಗಿ 30 ಮಂದಿಯಿAದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ನಕಲಿ ಅಂಕಪಟ್ಟಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಹೆಚ್ಚಿನ ತನಿಖೆ ನಡೆಸಲಾಗುತ್ತದೆ,'' ಎಂದು ಮಾಹಿತಿ ನೀಡಿದರು.