ಕಾರ್ಮಿಕ ಮಕ್ಕಳಿಗೆ ನೇರ ವಿದ್ಯಾರ್ಥಿ ವೇತನ ವರ್ಗಾವಣೆ: ಮುಖ್ಯಮಂತ್ರಿ ಹರ್ಷ

varthajala
0
ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಳಸ್ಥರದ ಜನರಿಗೆ ನೀಡಲಾಗುವ ಈ ಮೊತ್ತವು ಅವರ ಬದುಕಿನ ಸಾಕಷ್ಟು ಬದಲಾವಣೆಗಳಿಗೆ ಕಾರಣವಾಗಲಿದೆ. ಅವರಿಗೆ ಆಸರೆ ಆಗಲಿದೆ. ಹಲವಾರು ಜನರ ಬದುಕಿನ ಮುಖದಲ್ಲಿ ನಗೆ ತರಿಸುವಂತಹ ದೊಡ್ಡ ಬದಲಾವಣೆಗೆ ಇದು ದಾರಿ ಮಾಡಲಾಗಿದೆ. ಇಂತಹ ಕೆಲಸಕ್ಕೆ ಕಾರ್ಮಿಕ ಇಲಾಖೆ ಮುಂದಾಗಿರುವುದು ಅತ್ಯುತ್ತಮವಾದ ಕೆಲಸ ಎಂದು ಶ್ಲಾಘಿಸಿದರು.
ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ, ನೇರವಾಗಿ ಅವರ ಖಾತೆಗಳಿಗೆ ವಿದ್ಯಾರ್ಥಿ ವೇತನ ಜಮೆ ಆಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮುಖ್ಯಮಂತ್ರಿಗಳು, ಇದಕ್ಕಾಗಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮತ್ತು ಇಲಾಖೆ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ಹೇಳಿದರು.
ರಾಜ್ಯ ಉದ್ಯೋಗ ನೀತಿಯಿಂದ ರಾಜ್ಯದ ಯುವಕರ ಬದುಕು ಹಸನಾಗಲಿದೆ. ಕೆಳಸ್ತರದ ದುಡಿಯುವ ವರ್ಗಕ್ಕೆ ಸಹಾಯಧನ ಬಹಳ ದೊಡ್ಡ ಆಸರೆಯಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಈ ಕಾರ್ಯಕ್ರಮದಿಂದ ಮಕ್ಕಳು ಉತ್ತಮ ಶಿಕ್ಷಣ ಪಡೆದು, ವಿವಿಧ ಉದ್ಯೋಗಳಲ್ಲಿ ತೊಡಗಿಕೊಂಡು ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದು ತಿಳಿಸಿದರು.
ದೇಶದ ಆರ್ಥಿಕತೆಯನ್ನು ಮುನ್ನೆಡೆಸುವವರು ದುಡಿಯುವ ವರ್ಗ. ದೇವರು ರೈತರ ಶ್ರಮ ಹಾಗೂ ಕಾರ್ಮಿಕರ ಬೆವರಿನಲ್ಲಿದ್ದಾನೆ ಎಂದು ಕವಿ ರವೀಂದ್ರನಾಥ ಟ್ಯಾಗೋರ್ ಅವರು ತಿಳಿಸಿದಂತೆ ದುಡಿಯುವ ವರ್ಗವನ್ನು ದೈವತ್ವಕ್ಕೆ ಹೋಲಿಸುವ ಸಂಸ್ಕೃತಿ ಭಾರತ ದೇಶದಲ್ಲಿದೆ ಎಂದು ಅವರು ತಿಳಿಸಿದರು.
ಸಮಾಜದಲ್ಲಿ ಕಾಯಕದ ನಿಷ್ಟೆ, ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ದೇಶದ ಜನ ಶ್ರೀಮಂತವಾಗಿದ್ದರೆ, ದೇಶ ಅಭಿವೃದ್ಧಿಯಾದಂತೆ. ರಾಜ್ಯದಲ್ಲಿ ದುಡಿಯುವ ವರ್ಗಕ್ಕೆ ಆರ್ಥಿಕ ಶಕ್ತಿಯನ್ನು ನೀಡಿದರೆ, ರಾಜ್ಯದ ಆರ್ಥಿಕ ಶಕ್ತಿ ವೃದ್ಧಿಸುತ್ತದೆ. ಕಟ್ಟಡ ಕಾರ್ಮಿಕರು, ವಲಸೆ ಬಂದಿರುವವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವುದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.
ಇದೇ ವೇಳೆ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ್, ಪ್ರಸ್ತುತ ಪೋರ್ಟಲ್ ಮುಖಾಂತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ 92,061 ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 1,45,524 ಅರ್ಜಿಗಳು ಸ್ವೀಕೃತವಾಗಿದೆ ಎಂದರು.
ಇAದು ಸುಮಾರು 39 ಸಾವಿರ ಪ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ 50 ಸಾವಿರ ಸ್ವೀಕೃತ ಅರ್ಜಿಗಳ ದಾಖಲಾತಿಗಳು ಆಧಾರ್ ಮತ್ತು ಬ್ಯಾಂಕ್ ಲಿಂಕ್ ಆಗಿರುವುದು ಸರಿಯಾಗಿದ್ದು, ಸದರಿ 89,000 ಅರ್ಜಿಗಳಿಗೆ ಮಂಜೂರಾತಿ ನೀಡಿ ನೇರ ನಗದು ವರ್ಗಾವಣಿ (ಡಿಬಿಟಿ) ಮುಖಾಂತರ ಫಲಾನುಭವಿಗಳ ಖಾತೆಗೆ ನೇರವಾಗಿ ಸುಮಾರು ರೂ. 150 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಮುಖ್ಯಮಂತ್ರಿಗಳಾದ ಬಸವರಾಜ್ ಎಸ್. ಬೊಮ್ಮಾಯಿ ರವರು ಚಾಲನೆ ನೀಡಿದ್ದಾರೆ ಎಂದರು.
ಬಾಕಿ ಉಳಿದಿರುವ ವಿದ್ಯಾರ್ಥಿ ವೇತನ ಅರ್ಜಿಗಳಿಗೆ ಫೆಬ್ರವರಿ ಅಂತ್ಯದೊಳಗೆ, ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆಗೆ ಲಿಂಕ್ ಒದಗಿಸಿ ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿಗಳ ಸಾಂಸ್ಥಿಕ ಪರಿಶೀಲನೆ ನಂತರ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಸಹಾಯಧನವನ್ನು ವರ್ಗಾಯಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ರಾಮದಾಸ್, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ, ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಎಂ.ಪಿ. ಗುರುಪ್ರಸಾದ್ ಹಾಗೂ ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಶಿವಪುತ್ರ ಬಾಬುರಾವ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

89,000 ಸಾವಿರ ಅರ್ಜಿಗಳಿಗೆ ಮಂಜೂರಾತಿ; 150 ಕೋಟಿ ವಿತರಣೆ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಸಹಾಯಧನವನ್ನು ಈ ಹಿಂದೆ ಸೇವಾ ಸಿಂಧು ತಂತ್ರಾAಶದ ಮುಖಾಂತರ ನೀಡಲಾಗುತ್ತಿತ್ತು. ಸದರಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ ನೈಜಫಲಾನುಭವಿಗೆ ವಿದ್ಯಾರ್ಥಿ ವೇತನ ದೊರಕಿಸುವಂತೆ ಮಾಡಲು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೆಬ್ಬಾರ್ ನಿರ್ದೇಶನದಂತೆ ಕಾರ್ಮಿಕರ ಮಕ್ಕಳಿಗೆ ನೀಡುತ್ತಿರುವ ಎಲ್ಲಾ ಶೈಕ್ಷಣಿಕ ಸಹಾಯಧನವನ್ನು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಪ್ಲಾಟ್‌ಫಾರಂ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿ ನೇರ ವರ್ಗಾವಣೆ (ಡಿಬಿಟಿ) ಮುಖಾಂತರ ಬಿಡುಗಡೆ ಮಾಡಲು ಕ್ರಮವಹಿಸಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಗೃಹ ಕಚೇರಿಯಲ್ಲಿ ಇಲಾಖೆ ಸಚಿವ ಶಿವರಾಮ ಹೆಬ್ಬಾರ್ ಅವರ ಜೊತೆಗೂಡಿ ಸದರಿ 89,000 ಅರ್ಜಿಗಳಿಗೆ ಮಂಜೂರಾತಿ ನೀಡಿ ನೇರ ನಗದು ವರ್ಗಾವಣೆ (ಡಿಬಿಟಿ) ಮುಖಾಂತರ ಫಲಾನುಭವಿಗಳ ಖಾತೆಗೆ ನೇರವಾಗಿ ಸುಮಾರು ರೂ. 150 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು.
ನಂತರ ಕಾರ್ಮಿಕ ಅದಾಲತ್ ಯಶಸ್ವಿ ಮಾಹಿತಿಯನ್ನು ಹೊಂದಿರುವ ಕಿರುಹೊತ್ತಿಗೆ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆಗೊಳಿಸಿ, ಸಚಿವರಾದ ಶಿವರಾಮ ಹೆಬ್ಬಾರ್ ಅವರ ನಾಯಕತ್ವ ಅಡಿಯಲ್ಲಿ ಕಾರ್ಮಿಕ ಇಲಾಖೆ ಸಮರ್ಥವಾಗಿ ಮುನ್ನಡೆಯುತ್ತಿದ್ದೆ ಎಂದರು.

Post a Comment

0Comments

Post a Comment (0)