ಪತ್ರಿಕೋದ್ಯಮ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ

varthajala
1 minute read
0

ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ  (ಎಸ್.ಸಿ.ಪಿ./ ಟಿ.ಎಸ್.ಪಿ) ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎರಡು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ವಿಶೇಷ ಘಟಕ ಯೋಜನೆ (ಪರಿಶಿಷ್ಟ ಜಾತಿ) 22 ಮಂದಿ ಹಾಗೂ ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡ) 08 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ಮಾಹೆಯಾನ ರೂ. 15,000/- ಗಳ ಸ್ಟೈಫಂಡ್ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ  ಇ-ಮೇಲ್ ವಿಳಾಸ traineekma2022@gmail.com     ಮೂಲಕ ಅಥವಾ ಅಂಚೆ ಮೂಲಕ ದಿನಾಂಕ : 27-01-2022 ರ ಒಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)
Today | 30, March 2025