ಅರ್ಜಿ ಆಹ್ವಾನ

varthajala
0

Department of School Education & Literacy,  ನವದೆಹಲಿ ರವರ ಮಾರ್ಗಸೂಚಿಯಂತೆ NMMS  ಪರೀಕ್ಷೆಯನ್ನು ಫೆಬ್ರವರಿ 27, 2022 ರಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅರ್ಜಿಯನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.

 NMMS  ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ   8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ಪರೀಕ್ಷೆಯ ಆನ್‍ಲೈನ್ ಅರ್ಜಿಯು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ https://sslc.karnataka.gov.in    ವೆಬ್‍ಸೈಟ್‍ನಲ್ಲಿ ಲಭ್ಯವಿದೆ.

ಶಾಲಾ ಮುಖ್ಯಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಮಂಡಳಿಯ ವೆಬ್‍ಸೈಟ್‍ನಲ್ಲಿ ಲಭ್ಯವಿರುವ NMMS   ಲಾಗಿನ್‍ನಲ್ಲಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜನವರಿ 20, 2022 ರಂದು ಕೊನೆಯ ದಿನಾಂಕವಾಗಿರುತ್ತದೆ.
 ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‍ಸೈಟ್ https://sslc.karnataka.gov.in  ನಲ್ಲಿ ಗಮನಿಸುವುದು ಹಾಗೂ ಕೆ.ಎಸ್.ಕ್ಯು.ಎ.ಎ.ಸಿ ಕಛೇರಿಯ ದೂರವಾಣಿ ಸಂಖ್ಯೆ: 080-23341615 ಅನ್ನು ಸಂಪರ್ಕಿಸುವುದು.
ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಾಗೂ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಮುಖ್ಯ ಶಿಕ್ಷಕರ ಸಭೆ ಕರೆದು ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಂಬಂಧ ಸೂಕ್ತ ಮಾರ್ಗದರ್ಶನ ನೀಡಲು ತಿಳಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)