ಬೆಂಗಳೂರು, ಜ, 7; ಕಂಪೆನಿಗಳ ಸಾಮಾಜಿಕ ಜವಾಬ್ದಾರಿ ಎಂದರೆ ಪಿಎಂ ಕೇರ್ಸ್ ನಂತಹ ನಿಧಿಗಳಿಗೆ ತನ್ನ ಪಾಲಿನ ದೇಣಿಗೆ ನೀಡಿ ಸುಮ್ಮನಾಗುವುದು ಸೂಕ್ತವಲ್ಲ. ಬದಲಿಗೆ ಸಿ.ಎಸ್.ಆರ್. ನಿಧಿಯನ್ನು ಅತ್ಯಂತ ರಚನಾತ್ಮಕವಾಗಿ ಅಭಿವೃದ್ಧಿ ಉದ್ದೇಶಗಳಿಗೆ ಬಳಸಿದರೆ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ಮೈಸೂರಿನ ಯದುವಿರ್ ಕೃಷ್ಣದತ್ತ ಚಾ
ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿ
ಕಂಪೆನಿಗಳು ಸಿಎಸ್ಆರ್ ನಿಧಿಯನ್ನು ಪರಿಸರ ಸಂರಕ್ಷಣೆಗಾಗಿ ಹೆಚ್ಚಿನ ರೀತಿಯಲ್ಲಿ ಬಳಸಿಕೊಳ್ಳಬೇಕು. ಪರಿಸರ ಸಮತೋಲನ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮೈಸೂರು ಮಹಾರಾಜರ ಕಾಲದಲ್ಲಿ ಕಟ್ಟಿದ ಅಣೆಕಟ್ಟುಗಳು ಮತ್ತಿತರ ನಿರ್ಮಾಣ ಕಾಮಗಾರಿಗಳಿಂದ ಅಗಾಧವಾಗಿ ಅನುಕೂಲವಾಗುತ್ತಿದ್ದು, ಆಣೆಕಟ್ಟೆ ವ್ಯಾಪ್ತಿಯಲ್ಲಿ ನಾನಾ ವಿದಧ ಕಾರ್ಖಾನೆಗಳು ತಲೆ ಎತ್ತಿವೆ. ಆದರೆ ಇದೇ ಕಾಲಕ್ಕೆ ಪರಿಸರದ ಮೇಲೂ ಪ್ರತಿಕೂಲ ಪರಿಣಾಮಗಳಾಗುತ್ತಿವೆ ಎಂಬ ಆಕ್ಷೇಪವೂ ಇದೆ. ಪ್ರತಿಯೊಂದು ಕಂಪೆನಿ ತನ್ನ ಆದಾಯ ಹೆಚ್ಚಿಸಿಕೊಳ್ಳಲು, ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗುತ್ತವೆ. ಇದೇ ರೀತಿ ತನ್ನ ಜವಾಬ್ದಾರಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸುವುದುನ್ನು ಮರೆಯಬಾರದು ಎಂದರು.
ಪರಿಸರ ಸಂರಕ್ಷಣೆ, ಸಿಎಸ್ಆರ್ ಚಟುವಟಿಕೆ ಎನ್ನುವುದು ಈಗಿನ ಪರಿಕಲ್ಪನೆಯಲ್ಲ. ಭಾರತೀಯ ಸಂಸ್ಕೃತಿಯಲ್ಲೇ ಅಂತರ್ಗತವಾಗಿದೆ. ಈ ನಿಟ್ಟಿನಲ್ಲಿ ಎನ್.ಜಿ.ಓಗಳು ಸಹ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವಂತಾಗಬೇಕು ಎಂದು ಯದುವಿರ್ ಕೃಷ್ಣದತ್ತ ಚಾಮರಾಜ ಒಡೆ