Breaking News: ರೌಡಿ ಶೀಟರ್ ಕಾಲಿಗೆ ಸಿದ್ದಾಪುರ ಪೊಲೀಸ್ ಇನ್ಸ್ ಪೆಕ್ಟರ್ ರಾಜು ಅಂಡ್ ಟೀಮ್ ಗುಂಡು ಇಳಿಸಿದ್ದಾರೆ.

varthajala
0

ಬೆಂಗಳೂರು, ಜ 06: ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಸಿದ್ದಾಪುರ ಪೊಲೀಸ್ ಇನ್ಸ್ ಪೆಕ್ಟರ್ ರಾಜು ಅಂಡ್ ಟೀಮ್  ಗುಂಡು ಇಳಿಸಿದ್ದಾರೆ. 

ಬೆಂಗಳೂರಿನ ಸಿದ್ದಾಪುರದ ರೌಡಿ ಶೀಟರ್ ಫರ್ವೇಜ್ ಪಾಷ @ ಮಹಮ್ಮದ್ ಜೈನ್ ಎಂಬಾತನೇ  ಗುಂಡೇಟು ತಿಂದು ಬಂಧನಕ್ಕೆ ಒಳಗಾದ ಆರೋಪಿ. ಈತ ರಾತ್ರಿ ವೇಳೆ ಲಾಲ್ ಬಾಗ್ ಸುತ್ತಾ ಮುತ್ತ  ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ. ಈ ಕುರಿತು ಹಲವು ದೂರು ದಾಖಲಾಗಿದ್ದವು. ಪ್ರಕರಣ ಸಂಬಂಧ ತಲಘಟ್ಟಪುರದಲ್ಲಿದ್ದ ಫರ್ವೇಜ್‌ನನ್ನು ಬಂಧಿಸಲು ಹೋದಾಗ, ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಆತ್ಮ ರಕ್ಷಣೆಗಾಗಿ ಸಿದ್ದಾಪುರ ಪೊಲೀಸ್ ಇನ್ಸ್‌ಸ್ಪೆಕ್ಟರ್ ರಾಜು ಅವರು ಗುಂಡು ಹಾರಿಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೆಪಿನಗರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಸಾರ್ವಜನಿಕರಿಂದ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ. ಪಾದರಾಯನಪುರ ಗಲಾಟೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ಬೆಂಗಳೂರು ದಕ್ಷಿಣ ಉಪ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಅವರು ತಿಳಿಸಿದ್ದಾರೆ. 

ಇಷ್ಟೇ ಅಲ್ಲದೆ ಆತನ ಮೇಲೆ ವಿವಿಧ ಠಾಣೆಗಳಲ್ಲಿ 10 ಪ್ರಕರಣಗಳು ದಾಖಲಾಗಿದ್ದು ಪ್ರಕರಣಗಳ ವಿಚಾರಣೆ ನೆಡೆಯುತ್ತಿದೆ. ಸುಲಿಗೆ, ಕೊಲೆಗೆ ಪ್ರಯತ್ನ ಸೇರಿದಂತೆ ಅನೇಕ ಕಾನೂನು ಬಾಹಿರ ಕೃತ್ಯಗಳ ಕರ್ತೃ ಈ ಪರ್ವೇಜ್ ಎನ್ನುವುದು ಸಾಬೀತಾಗಿದೆ. ಅಲ್ಲದೇ ತಲಘಟ್ಟ ಪುರ ಪೊಲೀಸ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ.

ಪೊಲೀಸ್ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ದಕ್ಷಿಣ ವಿಭಾಗದ ಉಪ ಪೊಲೀಸ್ ಕಮಿಷನರ್ ಹರೀಶ್ ಪಾಂಡೆ ಅವರ ನಿರ್ದೇಶನದಲ್ಲಿ ಜಯನಗರ ಉಪವಿಭಾಗದ ಎಸಿಪಿ ಶ್ರೀನಿವಾಸ ಅವರ ಮಾರ್ಗದರ್ಶನದಲ್ಲಿ  ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾಜು ಅವರ ನೇತೃತ್ವದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಮತ್ತು ಸಲ್ಮಾನ್ ಅರಳಿಕಟ್ಟೆ ಸಿಬ್ಬಂದಿಗಳಾದ ಶಿವಕುಮಾರ್, ನಾಗರಾಜ್, ಪರಮೇಶ್ವರ್ ಮಬ್ರುಕರ್, ಭೀಮಾಶಂಕರ್, ಆನಂದ್ ಕೊಕಟನೂರು, ಚಂದ್ರುಶೇಖರ್ ನಯಕ್ ಮತ್ತು  ತಂಡ ಆರೋಪಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯನ್ನು  ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಹಾಗೂ ಪಶ್ಚಿಮ ವಿಭಾಗದ ಅಪಾರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

Varthajala Daily, Bengaluru

Tags

Post a Comment

0Comments

Post a Comment (0)