ಬಳ್ಳಾರಿ ಫೆ 03. ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಸರಳಾದೇವಿ ಕಾಲೇಜಿನ ವಿದ್ಯಾರ್ಥಿಗಳು ಇತರೆ ಎಲ್ಲಾ ಸರ್ಕಾರಿ ಕಾಲೇಜುಗಳಂತೆ ತಮ್ಮ ಪರೀಕ್ಷಾ ಶುಲ್ಕಕ್ಕೆ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಬಳ್ಳಾರಿ ನಗರದಲ್ಲಿರುವ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು 150ರೂ.ಗಳನ್ನು ಮಾತ್ರ ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳಬೇಕಿದ್ದ ಕಾಲೇಜಿನ ಪರೀಕ್ಷಾಂಗ ವಿಭಾಗವು 1050(ಬಿ.ಎ.), 1150(ಬಿ.ಕಾಂ.), ಮತ್ತು (ಬಿ.ಎಸ್.ಸಿ)1200ರೂ.ಗಳನ್ನು ಪರೀಕ್ಷಾ ಶುಲ್ಕವನ್ನಾಗಿ ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳುತ್ತಿದೆ.
ಈ ಕುರಿತು ಎಐಡಿಎಸ್‌ಓ ನ ಜಿಲ್ಲಾ ಕಾರ್ಯದರ್ಶಿ ರವಿಕಿರಣ್.ಜೆ.ಪಿ ರವರು ಮಾತನಾಡುತ್ತಾ.., "ಒಂದು ಸರ್ಕಾರಿ ಕಾಲೇಜಿನಲ್ಲಿ ಓದಲು ಬರುವು ವಿದ್ಯಾರ್ಥಿಗಳೆಲ್ಲರೂ ಅತ್ಯಂತ ಬಡ ವಿದ್ಯಾರ್ಥಿಗಳಾಗಿದ್ದು, ಆರ್ಥಿಕವಾಗಿ ಹಿಂದುಳಿದವರಾಗಿರುವುದರಿAದ ಅವರಿಗೆ ಸಾವಿರಾರು ರೂಪಾಯಿಗಳ ಶುಲ್ಕವನ್ನು ಕಟ್ಟಲು ಆಗುವುದಿಲ್ಲ. ಆದ್ದರಿಂದಲೇ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆಯಿರುವ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನಿಡಲಾಗುತ್ತಿದೆ. ಆದರೆ ಸರಳಾದೇವಿ ಕಾಲೇಜಿನಲ್ಲಿ ಈ ಶುಲ್ಕ ವಿನಾಯಿತಿಯನ್ನು ನೀಡದೆಯೇ ಸಂಪೂರ್ಣ ಶುಲ್ಕವನ್ನು ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳಲಾಗುತ್ತಿದೆ. ಇದು ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಿದ್ದು, ತಮ್ಮ ಶಿಕ್ಷಣಕ್ಕಾಗಿ ಸರ್ಕಾರಿ ಕಾಲೇಜುಗಳ ಮೇಲೆಯೇ ಅವಲಂಬಿತವಾಗಿರುವ ಇಂತಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಭರಿಸಲಾಗದೆ ವಿದ್ಯಾಭ್ಯಾಸಕ್ಕೆ ಕುತ್ತು ಬರುತ್ತದೆ. ಈ ಕುರಿತಾಗಿ ಇದೇ ತಿಂಗಳು ಒಂದನೇ ತಾರೀಖಿನಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಕಾಲೇಜಿನ ಪ್ರಾಂಶುಪಾಲರು ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಕಾಲೇಜಿಗೆ ಬರಬೇಕಿದ್ದ ಶುಲ್ಕ ವಿನಾಯಿತಿ ಪಡೆಯುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವು ಕಳೆದ ವರ್ಷದಿಂದ ಬರುತ್ತಿಲ್ಲವಾದ್ದರಿಂದ ನಾವು ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ ಜಿಲ್ಲೆಯ ಸಿಟಿ ಕಾಲೇಜು, ಬಳ್ಳಾರಿ ಹಾಗೂ ಕುರುಗೋಡು, ಕಂಪ್ಲಿ, ಸಿರುಗುಪ್ಪ ಇತರೆ ತಾಲ್ಲೂಕುಗಳಲ್ಲಿರುವ ಇತರೆ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಿ ಕೇವಲ 150ರೂ.ಗಳನ್ನು ಮಾತ್ರ ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳಲಾಗುತ್ತಿದೆ. ಈ ಪ್ರಶ್ನೆಯನ್ನು ಎತ್ತಿದಾಗ ಸರಳಾದೇವಿ ಕಾಲೇಜು ಸ್ವಾಯತ್ತ ಕಾಲೇಜಾಗಿದ್ದು ಇತರೆ ಸರ್ಕಾರಿ ಕಾಲೇಜುಗಳಿಗೆ ಬಂದAತೆ ಸರಳಾದೇವಿ ಕಾಲೇಜಿಗೆ ಇಲಾಖೆಗಳಂದ ಹಣ ಬಿಡುಗಡೆಯಾಗುತ್ತಿಲ್ಲ ಎಂಬುದು ಕಾಲೇಜಿನ ಪ್ರಾಂಶುಪಾಲರ ಉತ್ತರವಾಗಿದೆ. ಆದರೆ ಪಕ್ಕದ ಚಿತ್ರದುರ್ಗ ಜಿಲ್ಲೆಯಲ್ಲಿರುವ ಸರ್ಕಾರಿ ಕಲಾ ಕಾಲೇಜು(ಸ್ವಾಯತ್ತ) ಸಹ ಸ್ವಾಯತ್ತ ಕಾಲೇಜಾಗಿದ್ದು ಅಲ್ಲಿಯೂ ಬಡ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಿ ಕೇವಲ 165 ರೂ.ಗಳನ್ನು ಮಾತ್ರ ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳುತ್ತಿದ್ದಾರೆ. ಆದರೆ ಸರಳಾದೇವಿ ಕಾಲೇಜಿನ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಮಾತ್ರ ಈ ಅನ್ಯಾಯವಾಗುತ್ತಿದೆ" ಎಂದು ಹೇಳಿದರು.
ಎಐಡಿಎಸ್‌ಓ ಜಿಲ್ಲಾಧ್ಯಕ್ಷರಾದ ಗುರಳ್ಳಿ ರಾಜ ರವರು ಮಾತನಾಡುತ್ತಾ.., "2019-20ನೇ ಸಾಲಿನವರೆಗೆ ಶುಲ್ಕ ವಿನಾಯಿತಿಯ ಮೊತ್ತವು ಇಲಾಖೆಗಳಿಂದ ನೇರವಾಗಿ ಕಾಲೇಜಿಗೆ ನೀಡುತ್ತಿದ್ದಿದ್ದರಿಂದ ಸರಳಾದೇವಿ ಕಾಲೇಜಿನಲ್ಲಿಯೂ ಶುಲ್ಕ ವಿನಾಯಿತಿ ನೀಡಲಾಗುತ್ತಿತ್ತು. ಈ ಹಿಂದಿನ ವ್ಯವಸ್ಥೆಯಂತೆ ಈಗಲೂ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು" ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಸಹಾಯಕ ಆಯುಕ್ತರು(ಅಸಿಸ್‌ಟ್ಯಾಂಟ್ ಕಮಿಷನರ್) ರವರು "ಬಡ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲು ಸಂಬAಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಭರವಸೆ ನೀಡಿದರು. ನಂತರ ಸಮಾಜ ಕಲ್ಯಾಣ ಇಲಾಖೆಯ ಕಛೇರಿ ವ್ಯವಸ್ಥಾಪಕರಾದ ವೇದಾವತಿ.ಕೆ.ಜೆ ರವರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಿಗೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಿಗೆ ಇತರೆ ಸರ್ಕಾರಿ ಪದವಿ ಕಾಲೇಜುಗಳಿಲ್ಲಿ ಶುಲ್ಕ ವಿನಾಯಿತಿ ನೀಡುವಂತೆ ಸರಳಾದೇವಿ ಕಾಲೇಜಿನ ವಿದ್ಯಾರ್ಥಿಗಳಿಗೂ ಶುಲ್ಕ ವಿನಾಯಿತಿ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳಿಗೆ ನೀಡಿದ ಭರವಸೆಯಂತೆ ಕಾಲೇಜಿಗೆ ಆಗಮಿಸಿದ ಮಾನ್ಯ ಶಾಸಕರಾದ ಸೋಮಶೇಖರ್ ರೆಡ್ಡಿಯವರು "ಕಾಲೇಜಿನ ಪ್ರಾಂಶುಪಾಲರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸಂಬAಧಿತ ಅಧಿಕಾರಿಗಳನ್ನು ಇಂದು(ಗುರುವಾರ) ಸಂಜೆ ಕಾಲೇಜಿಗೆ ಕರೆಸಿ ಅವರೊಂದಿಗೆ ಚರ್ಚಿಸಿ ಬಡ ವಿದ್ಯಾರ್ಥಿಳಿಗೆ ಅನ್ಯಾಯವಾಗದಂತೆ ಶುಲ್ಕ ವಿನಾಯಿತಿ ನೀಡಲು ಕ್ರಮ ಕೈಗೊಳ್ಳಲಾಗುವುದೆಂದು" ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಐಡಿಎಸ್‌ಓ ನ ಜಿಲ್ಲಾ ಉಪಾಧ್ಯಕ್ಷರಾದ ಜೆ.ಸೌಮ್ಯ, ಜಿಲ್ಲಾ ಕಛೇರಿ ಕಾರ್ಯದರ್ಶಿ ಕೆ.ಈರಣ್ಣ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಶಾಂತಿ, ಮಂಜು, ಸಿದ್ದು, ಅನುಪಮ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು.