ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ

varthajala
0

ಬೆಂಗಳೂರು, ಮೇ 31 (ಕರ್ನಾಟಕ ವಾರ್ತೆ) : 2021-22 ನೇ ಸಾಲಿನ ಮಾರ್ಚ್ / ಏಪ್ರಿಲ್ – 2022 ರ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆದು ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಹಾಗೂ ಈ ಹಿಂದಿನ ಸಾಲುಗಳಲ್ಲಿ ಅನುತ್ತೀರ್ಣರಾದ ಎಲ್ಲಾ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಗೆ ಜೂನ್ -2022 ರಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆ ಅಭ್ಯರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮುಖಾಂತರ ನೋಂದಾಯಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕ ವಿಸ್ತರಿಸಲಾಗಿದೆ.

ಮಂಡಳಿ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‍ಲೋಡ್ ಮಾಡಲು ವಿಸ್ತರಣೆ ಮಾಡಿದ ದಿನಾಂಕ : 02-06-2022, ಮಂಡಳಿ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ವಿಸ್ತರಿಸಿದ ದಿನಾಂಕ: 03-06-2022 ರಿಂದ  06-06-2022, ಕ್ರಮ. ಸಂಖ್ಯೆ -2 ರಂತೆ ಚಲನ್ ಮುದ್ರಿಸಿಕೊಂಡು ಬ್ಯಾಂಕ್‍ಗೆ ಜಮೆ ಮಾಡಲು ನಿಗಧಿಪಡಿಸಿದ ಅಂತಿಮ ದಿನಾಂಕ: 03-06-2022 ರಿಂದ 07-06-2022, 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ಪುನರಾವರ್ತಿತ ಅಭ್ಯರ್ಥಿಗಳ (NSR & NSPR) ಪರೀಕ್ಷಾ ಶುಲ್ಕವನ್ನು ಹಳೆಯ ಪದ್ದತಿಯಂತೆ ಮಂಡಳಿಯ ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ನಿಗದಿಪಡಿಸಿದ ಅಂತಿಮ ದಿನಾಂಕ: 07-06-2022, ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನೊಳಗೊಂಡಂತೆ ಶಾಲಾ ಲಾಗಿನ್‍ನಲ್ಲಿ ಸೃಜಿಸಲಾಗುವ ಚಲನ್ ಬಳಸಿಕೊಂಡು ಶುಲ್ಕ ಪಾವತಿಸಿದ ಮೂಲ ಚಲನ್ ಮತ್ತು 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳ (NSR & NSPR) ಎಂಎಸ್‍ಎ ಮತ್ತು ಹಿಂದಿನ ಪದ್ದತಿಯಂತೆ ಮಂಡಳಿ ನೆಫ್ಟ್ ಚಲನ್ ಮೂಲಕ ಶುಲ್ಕ ಪಾವತಿಸಿದ ಮೂಲ ಚಲನ್ ನಾಮಿನಲ್‍ರೋಲ್ ಮತ್ತು ಸಂಬಂಧಿಸಿದ ಇತರೆ ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ದಿನಾಂಕ: 10-06-2022 ನಿಗದಿಪಡಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)