ಬೆಂಗಳೂರು, ಮೇ 30 (ಕರ್ನಾಟಕ ವಾರ್ತೆ) : 2022-23 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)-22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಸೇಲಂ (ತಮಿಳುನಾಡು)- 17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ ಆಂಧ್ರಪ್ರದೇಶ)- - 03 ಅಭ್ಯರ್ಥಿಗಳು ಮತ್ತು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) - 02 ಅಭ್ಯರ್ಥಿಗಳು ಹೀಗೆ ಒಟ್ಟು 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು ರೂ. 2500/- ರಂತೆ ಶಿಷ್ಯವೇತನ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿ ಆಧಾರದ ಮೇಲೆ ಕಲ್ಪಿಸಲಾಗುವುದು.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಆಂಗ್ಲಭಾಷೆಯನ್ನು ಒಮದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ಜುಲೈ 01, 2022 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು.
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ದೂರವಾಣಿ ಸಂಖ್ಯೆ 080-23561628 / 23566082 ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ- ಬೆಟಗೇರಿ ದೂರವಾಣಿ ಸಂಖ್ಯೆ- 08372-297221, ಮೊಬೈಲ್ ಸಂಖ್ಯೆ-9449189170 ಅಥವಾ ಆಯಾ ಜಿಲ್ಲೆಯ ಜಂಟಿ / ಉಪ / ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಇವರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ಅರ್ಜಿಗಳನ್ನು ಆನ್‍ಲೈನ್ ಲಿಂಕ್https://khtigadag.ac.in/AdmissionForm.pdf ಮೂಲಕವೂ ಡೌನ್‍ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 20, 2022 ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ- ಬೆಟಗೇರಿ ಇವರಿಗೆ ಸಲ್ಲಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.