ಕೃಷಿ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

varthajala
0

 ಬೆಂಗಳೂರು, ಜೂನ್ 01 (ಕರ್ನಾಟಕ ವಾರ್ತೆ) :ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಕೃಷಿ ಮಹಾವಿದ್ಯಾಲಯ, ವಿ.ಸಿ. ಫಾರಂ, ಮಂಡ್ಯ , ರೇಷ್ಮೆ ಕೃಷಿ ಮಹಾವಿದ್ಯಾಲಯ, ಚಿಂತಾಮಣಿಯಲ್ಲಿ 2022-23ನೇ ಸಾಲಿನ ಎರಡು ವರ್ಷಗಳ ಡಿಪ್ಲೋಮಾ (ಕೃಷಿ) / ಡಿಪ್ಲೋಮಾ (ರೇಷ್ಮೆ ಕೃಷಿ) ಕೋರ್ಸ್‍ಗಳಿಗೆ  ಜೂನ್ 2 ರಿಂದ  ಅರ್ಜಿಗಳನ್ನು ಆಹ್ವಾನಿಸಿದೆ.

 ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿ (ಪ.ಜಾ./ಪ.ಪಂ./ಪ್ರವರ್ಗ-I ರವರುಗಳಿಗೆ ಕನಿಷ್ಠ ಶೇ.40 ಅಂಕಗಳು). ಏಪ್ರಿಲ್, 2022 ರಂದು 19 ವರ್ಷ ಮೀರಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗು ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.500/- ಪ.ಜಾ./ಪ.ಪಂ./ಪ್ರವರ್ಗ- I ರವರಿಗೆ ರೂ. 250/- ರಾಷ್ಟೀಕೃತ ಬ್ಯಾಂಕ್‍ಗಳಲ್ಲಿ (Nationalised Bank) ಡಿ.ಡಿ.ಯನ್ನು Comptroller, UAS, GKVK, Bangalore--560065 ಇವರ ಹೆಸರಿನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು-560065 ರವರಿಗೆ ದಿನಾಂಕ: 02.07.2022 ರೊಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು.

ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೃಷಿ ವಿಶ್ವವಿದ್ಯಾನಿಲಯ ಜಿ.ಕೆ.ವಿ.ಕೆ., ಬೆಂಗಳೂರು-560065 ವೆಬ್‍ಸೈಟ್  www.uasbangalore.edu.inನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ  ಸಂಖ್ಯೆ: 080-23330149ಕ್ಕೆ  ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)