ಶಿಷ್ಯವೇತನಕ್ಕಾಗಿ ಅರ್ಜಿಗಳ ಆಹ್ವಾನ

varthajala
0

ಬೆಂಗಳೂರು, ಜೂನ್ 22, (ಕರ್ನಾಟಕ ವಾರ್ತೆ) : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ - ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ  16 ರಿಂದ 24  ವರ್ಷ ವಯೋಮಾನದ  ಒಳಗಿರುವ  ಅಭ್ಯರ್ಥಿಗಳಿಗೆ 2022-23ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000-00 ಗಳನ್ನು ಶಿಷ್ಯವೇತನವಾಗಿ ನೀಡಲಾಗುವುದು.  ಒಬ್ಬ ಅಭ್ಯರ್ಥಿ ಒಮ್ಮೆ ಮಾತ್ರ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅಕಾಡೆಮಿಯ ಕಛೇರಿ ವೇಳೆಯಲ್ಲಿ (ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆವರೆಗೆ) ಉಚಿತವಾಗಿ ಪಡೆಯಬಹುದು.  

ಅಕಾಡೆಮಿ ಅಂರ್ತಜಾಲ ತಾಣ  https://sangeetanrityaacademy.karnataka.gov.in  ಮೂಲಕ ಪಡೆದು ಸಲ್ಲಿಸಬಹುದಾಗಿದೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಹೆಸರಿನ ಫೇಸ್‍ಬುಕ್ ಪುಟದಲ್ಲೂ ಅರ್ಜಿಗಳನ್ನು ಪಡೆಯಬಹುದಾಗಿದೆ

ಬೇರೆ ಬೇರೆಜಿಲ್ಲೆಯ ಅಭ್ಯರ್ಥಿಗಳು ಆಯಾಜಿಲ್ಲೆಯಕನ್ನಡ ಮತ್ತು ಸಂಸ್ಕøತಿಇಲಾಖೆಯ ಸಹಾಯಕ. ನಿರ್ದೇಶಕರಕಚೇರಿಯಲ್ಲಿಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ.

ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ.10-00 (ರೂಪಾಯಿ ಹತ್ತುಗಳು ಮಾತ್ರ) ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಇಲ್ಲಿಗೆ ಕಳುಹಿಸಿ ಕೊಡಬೇಕು

ಭರ್ತಿಮಾಡಿದ  ಅರ್ಜಿಗಳನ್ನು ಸಲ್ಲಿಸಲು ಕೊನೆಯ ಜುಲೈ 25, 2022.  ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)