ವಿಜಯಪುರದ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) : ವಿಜಯಪುರದ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಬೆರಳಚ್ಚು ನಕಲುಗಾರರ 02 ಹುದ್ದೆ,  ಜವಾನ 20 ಹುದ್ದೆಗಳು, ಆದೇಶ ಜಾರಿಕಾರ 06 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆರಳಚ್ಚು ನಕಲುಗಾರರ ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೆರಳಚ್ಚು ಕಿರಿಯ ಶ್ರೇಣಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜವಾನ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು. ಆದೇಶ ಜಾರಿಕಾರರ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಭಾರಿ / ಲಘುವಾಹನ ಚಾಲನೆ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಜುಲೈ 24, 2022 ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ https://districts.ecourts.gov.in/vijayapura-online recruitment ನಲ್ಲಿ ನೋಡಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)