ಕೆಎಸ್‍ಒಯು - ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಜೂನ್ 30, (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ನೇ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

  ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ,  ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ,  ಪಿಜಿ ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಯುಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಕ.ರಾ.ಮು.ವಿ ಬೆಂಗಳೂರು ಪ್ರಾದೇಶಿಕ ಕೇಂದ್ರ-04 ರಲ್ಲಿ ಜೂನ್ 20, 2022 ರಿಂದ ಪ್ರ್ರವೇಶಾತಿ ಆರಂಭವಾಗಿದ್ದು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಎಕ್ಸ್‍ಸರ್ವೀಸ್‍ಮನ್ ವಿದ್ಯಾರ್ಥಿಗಳು, ಆಟೋ / ಕ್ಯಾಬ್‍ಡ್ರೈವರ್ಸ್ ಮತ್ತು ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ. ಕೋವಿಡ್‍ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್ ಮತ್ತು ಎಂ.ಬಿ.ಎ ಹೊರತು ಪಡಿಸಿ) ಹಾಗು ತೃತೀಯ ಲಿಂಗಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇದ್ದು, ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

 ಕರಾಮುವಿಯ ಅಧಿಕೃತ ವೆಬ್‍ಸೈಟ್: www.ksoumysuru.ac.in ನಲ್ಲಿ ksou Admission portal ಮೂಲಕ ಆನ್‍ಲೈನ್ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಬೇಟಿ ನೀಡಿ ಅರ್ಜಿಯನ್ನು ಪರಿಶೀಲಿಸಿಕೊಂಡು ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಗಿರೀಶ್ ಹೆಚ್.ಎನ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-04, ನಂ-3/3 ಬೇಗೂರು ಮುಖ್ಯರಸ್ತೆ, ಲೋರ ಬಿಸೆನೆಸ್ ಅಕಾಡೆಮಿ ಕಟ್ಟಡ, 2ನೇ ಮಹಡಿ, ಹೊಂಗಸಂದ್ರ, ಬೊಮ್ಮನಹಳ್ಳಿ, ಬೆಂಗಳೂರು -560068, ಹಾಗೂ ದೂರವಾಣಿ ಸಂಖ್ಯೆ:-080-23158888, 9448668880, 9538733169, 7483783174 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)