ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಜುಲೈ 04 (ಕರ್ನಾಟಕ ವಾರ್ತೆ) : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾಪಟುಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರು ನಿರುದ್ಯೋಗಿಗಳಾಗಿದ್ದು, ಸ್ವಯಂ ಉದ್ಯೋಗ ಹೊಂದಲು ಘಟಕ ವೆಚ್ಚದಲ್ಲಿ ಶೇಕಡಾ 75 ರಷ್ಟು ರೂ. 15 ಲಕ್ಷಗಳನ್ನು ಇಲಾಖೆ ವತಿಯಿಂದ ಭರಿಸಲಾಗುವುದು ಹಾಗೂ ಶೇಕಡಾ 25 ರಷ್ಟು ವೆಚ್ಚವನ್ನು ಸ್ವಯಂ ಫಲಾನುಭವಿಗಳು ಭರಿಸುವ ಷರತ್ತಿಗೆ ಬದ್ದರಾಗಿರಬೇಕು.

ಕರ್ನಾಟಕದ ಕ್ರೀಡಾಪಟುಗಳ ವಿವರಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಆಯಾ ಜಿಲ್ಲೆಯ ಉಪ/ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರಿಗೆ ಜುಲೈ 15 ರೊಳಗೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ನೇರವಾಗಿ ಕೇಂದ್ರ ಕಚೇರಿಯಲ್ಲಿ ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉಪ / ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)