ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

varthajala
0
ಬೆಂಗಳೂರು, ಆಗಸ್ಟ್ 26 (ಕರ್ನಾಟಕ ವಾರ್ತೆ) : ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ (M.H.R.D), ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಸರ್ಕಾರ, ನವದೆಹಲಿ ಇವರು, 2022ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಅಗ್ರ 20 ಶ್ರೇಣಿಯ ಅಥವಾ ಶೇ. 80% ಗಿಂತ ಹೆಚ್ಚು ಅಂಕಗಳಿಸಿ ತೇರ್ಗಡೆ ಹೊಂದಿದ ಹಾಗೂ ತಮ್ಮ ವಿದ್ಯಾಭ್ಯಾಸವನ್ನು ಕಡ್ಡಾಯವಾಗಿ ಉನ್ನತ ಶಿಕ್ಷಣದಲ್ಲಿ ಮುಂದುವರಿಸಿರುವಂತಹ (ಕನಿಷ್ಠ 03 ವರ್ಷದ ಪದವಿ ತರಗತಿಗೆ ದಾಖಲಾಗಿರುವ) ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಕೇಂದ್ರ ವಲಯದ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
 ಕೇಂದ್ರ ಸರ್ಕಾರದ ವತಿಯಿಂದ ವೆಬ್‍ಸೈಟ್  www.scholarships.gov.in ನ  National e-Scholarship Portal ನಲ್ಲಿ ಹೊಸ ತಂತ್ರಾಂಶ ಅಳವಡಿಸಲಾಗಿದ್ದು, ಈ ಪೋರ್ಟಲ್‍ನಲ್ಲಿಯೇ 2022ರ Fresh Batch ನ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕು. (Link for submission of application website:www.scholarship.gov.in =» New User(Register). ಪ್ರಸ್ತುತ ಪೋರ್ಟಲ್‍ನಲ್ಲಿ ಹೊಸ ಬ್ಯಾಚ್‍ನ ಕಾರ್ಯ ಚಾಲ್ತಿಯಲ್ಲಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಪೋರ್ಟಲ್‍ನಲ್ಲಿ ಲಭ್ಯವಿರುವ ಮಾರ್ಗಸೂಚಿಗಳನ್ನು ಖಡ್ಡಾಯವಾಗಿ ಓದಿ ಅರ್ಥೈಸಿಕೊಂಡು ನಿಗದಿ ಪಡಿಸಿರುವ ಸೆಪ್ಟೆಂಬರ್ 10, 2022ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.    
      
2022ನೇ ಸಾಲಿನಲ್ಲಿ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ (ಹೊಸ ಹಾಗೂ ನವೀಕರಣಗಳಿಗೆ) ಅರ್ಜಿ ಸಲ್ಲಿಸಲಿಚ್ಚಿಸುವ ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೋಂದಣಿ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕಿರುತ್ತದೆ. ಆದಕಾರಣ, ಆಸಕ್ತ ವಿದ್ಯಾರ್ಥಿಗಳು ಆಧಾರ್ ನೊಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲನೆಗಾಗಿ ತಾವು ಅಧ್ಯಯನ ಮಾಡುತ್ತಿರುವ ಕಾಲೇಜುಗಳ ಪ್ರಾಚಾರ್ಯರುಗಳಿಗೆ ಕೇಂದ್ರ ಸರ್ಕಾರದಿಂದ ನಿಗದಿಪಡಿಸುವ ದಿನಾಂಕದೊಳಗಾಗಿ ಸಲ್ಲಿಸುವುದು.

ಪ್ರಾಚಾರ್ಯರುಗಳು, ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಕೂಲಂಕುಷವಾಗಿ ಪರಿಶೀಲಿಸಿ, ವಿದ್ಯಾರ್ಥಿಯು ತಮ್ಮ ಕಾಲೇಜಿನಲ್ಲಿ ದಾಖಲಾಗಿ, ವಿದ್ಯಾಭ್ಯಾಸ ಮುಂದುವರಿಸಿರುವ ಬಗ್ಗೆ ಹಾಗೂ ವಿದ್ಯಾರ್ಥಿಯು ವಿದ್ಯಾರ್ಥಿ ವೇತನದ ಉದ್ದೇಶಕ್ಕಾಗಿ ಖಾತೆ ತೆರೆದಿರುವ ಬ್ಯಾಂಕ್‍ನ ವಿವರಗಳನ್ನು ಪರಿಶೀಲಿಸಿ, ಮಾಹಿತಿಯನ್ನು ಆನ್‍ಲೈನ್ ಮೂಲಕವೇ ಕೇಂದ್ರ ಸರ್ಕಾರದ ವತಿಯಿಂದ ನಿಗದಿ ಪಡಿಸಿರುವ ನವೆಂಬರ್ 30, 2022 ರೊಳಗೆ ಇಲಾಖೆಗೆ ಸಲ್ಲಿಸಬೇಕು.  ನೈಜ ವಿದ್ಯಾರ್ಥಿಯ ಹೊರತು ಆಯ್ಕೆಯಾಗದ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ಜಮೆಯಾಗದಂತೆ ನೋಡಿಕೊಳ್ಳುವುದು ಪ್ರಾಚಾರ್ಯರ ಜವಾಬ್ದಾರಿಯಾಗಿರುತ್ತದೆ.  

ಹೆಚ್ಚಿನ ಮಾಹಿತಿಗೆ ಕೇಂದ್ರ ಕಛೇರಿಯ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನದ ಶಾಖೆಯನ್ನು ಸಂಪರ್ಕಿಸಬಹುದು. ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‍ಸೈಟ್ : http://pue.karnataka.gov.in =» Scholarship =» MHRD Scholarship =» MHRD Scholarship 2022-Fresh batch ನಿಂದ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.  

Post a Comment

0Comments

Post a Comment (0)