ಬೆಂಗಳೂರು, ಸೆಪ್ಟೆಂಬರ್ 05 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು 2022-23ನೇ ಸಾಲಿಗೆ ನೂತನ ಶಿಕ್ಷಣ ನೀತಿ ಪ್ರಕಾರ- (ಎನ್ಇಪಿ) ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿ ದಿನಾಂಕವನ್ನು ಸೆಪ್ಟೆಂಬರ್ 30, 2022ರ ವರೆಗೆ ಮುಂದೂಡಲಾಗಿದ್ದು, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಆನ್ಲೈನ್ ಹಾಗೂ ನೇರವಾಗಿ ವಿಶ್ವವಿದ್ಯಾಲಯದ ಹೆಲ್ಪ ಡೆಸ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು,
1.ಬಿ.ಪಿ.ಎ ಹಾನರ್ಸ್ (Bachelor of Performing Arts): ನಾಲ್ಕು ವರ್ಷಗಳ ಕೋರ್ಸ್, ಹೊಸ ಶಿಕ್ಷಣ ನೀತಿ ಮಾದರಿಯಲ್ಲಿ ಐಚ್ಛಿಕ ವಿಷಯಗಳು: ನಾಟಕ, ಭರತನಾಟ್ಯ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ತಬಲಾ, ಮೃದಂಗ, ವೀಣಾ, ಪಿಟೀಲು, ಭಾಷಾ ಪತ್ರಿಕೆ: ಕನ್ನಡ / ಐಚ್ಛಿಕ ಕನ್ನಡ ಸಂಸ್ಕೃತ ಮತ್ತು ಇಂಗ್ಲೀಷ್, ಅರ್ಹತೆ: ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
2. ಎಂ.ಪಿ.ಎ : ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ (ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಮತ್ತು ವಿಶ್ವವಿದ್ಯಾಲಯದ ಮೌಖಿಕ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು)
3. ಡಿ.ಲಿಟ್ (D.Litt) : ಸಂಗೀತ, ನೃತ್ಯ, ನಾಟಕ ಹಾಗೂ ಪ್ರದರ್ಶಕ ಕಲೆಗಳಲ್ಲಿ ಅಧ್ಯಯನ ನಡೆಸಿ ಉನ್ನತ ಮಟ್ಟದ ಪರಿಣಿತಿ ಹೊಂದಿರಬೇಕು.
4. ಸರ್ಟಿಫಿಕೇಟ್ ಕೋರ್ಸ್ (6ತಿಂಗಳು) : ಭಕ್ತಿಸಂಗೀತ, ಸುಗಮ ಸಂಗೀತ, ಜಾನಪದ ಸಂಗೀತ, ರಂಗ ಸಂಗೀತ, ಭರತನಾಟ್ಯ, ನಾಟಕ, ಹಾರ್ಮೋನಿಯಂ, ತಬಲ, ಯೋಗ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಯಕ್ಷಗಾನ, ಗಮಕ.
5. ಡಿಪ್ಲೋಮಾ 1 ವರ್ಷ: ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ ಮತ್ತು ಯೋಗ (ಪಿಯುಸಿ ತೇರ್ಗಡೆ ಹೊಂದಿರಬೇಕು).
6. ಪಿ.ಜೆ ಡಿಪ್ಲೋಮಾ 1 ವರ್ಷ: ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ ಮತ್ತು ಯೋಗ (ಯಾವುದೇ ಪದವಿ ಅಥವಾ ತತ್ಸಮಾನ)
ಅರ್ಜಿ ಸಲ್ಲಿಸುವವರು ವಿಶ್ವವಿದ್ಯಾಲಯದ https://www.musicuniversity.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇ-ಮೇಲ್: musicuniversity.ac.in or registrar@musicuniversity.ac.