ವಾರ್ತಾ ಜಾಲ ದೇವನಹಳ್ಳಿ : ಮೆಡಿಕಲ್ ಪೂರೈಸಿದ ವಿದ್ಯಾರ್ಥಿಗಳು ಸೇವಾಮನೋಭಾವದಿಂದ ಕೆಲಸ ನಿರ್ವಹಿಸಿ ತಾವು ಸಲ್ಲಿಸುವ ಸೇವೆಯಲ್ಲಿ ಪ್ರತಿನಿತ್ಯ 2-3 ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಪಟ್ಟಣದ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಮತ್ತು ರಿಸರ್ಚ್ ಸೆಂಟರ್‌ನಲ್ಲಿ ಪ್ರಥಮ ವರ್ಷದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ನಡೆಯುತ್ತಿರುವ ಘಟಿಕೋತ್ಸವ ಕಾರ್ಯಕ್ರಮ ಜೀವನದಲ್ಲಿ ಮರೆಯಲಾರದ ದಿನವಾಗಿದೆ. ಗ್ರಾಮಾಂತರ ಜಿಲ್ಲೆಯಲ್ಲಿ ಆಕಾಶ್ ಮೆಡಿಕಲ್ ಕಾಲೇಜು ಗುಣಮಟ್ಟದ ವಿದ್ಯಾಭ್ಯಾಸ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಉತ್ತಮ ಸಂಸ್ಥೆಯಾಗಿ ಹೊರಹೊಮ್ಮುತ್ತಿದೆ. ಕೊರೊನ ಸಂದರ್ಭದಲ್ಲಿ ಅಸ್ಪತ್ರೆಯಲ್ಲಿ ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಆಕಾಶ್ ಸಂಸ್ಥೆಯ ಸಂಸ್ಥಾಪಕರಾದ ಮುನಿರಾಜು ಅವರು ಅನೇಕ ಬಡರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಗ್ರಾಮಾಂತರ ಜಿಲ್ಲೆಯಲ್ಲಿ ಆಸ್ಪತ್ರೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾದ್ಯವಾಯಿತು ವಿವಿಧ ರಾಜ್ಯಗಳಿಂದ ಬಂದAತಹ ವಿದ್ಯಾರ್ಥಿಗಳಿಗೆ ಅವರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನೀಡಿ ಅವರನ್ನು ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಂಸ್ಥೆಯ ಅನೇಕರ ಪರಿಶ್ರಮವಿದೆ ಎಂದರು.
ಆಕಾಶ್ ಮೆಡಿಕಲ್ ಕಾಲೇಜಿನ ಕಾರ್ಯದರ್ಶಿ ಅಮರ್‌ಗೌಡ ಮಾತನಾಡಿ 2016-17ನೇ ಸಾಲಿನಲ್ಲಿ ದಾಖಲಾಗಿದ್ದ 150 ಮೆಡಿಕಲ್ ವಿದ್ಯಾರ್ಥಿಗಳ ಪೈಕಿ 119 ವಿದ್ಯಾರ್ಥಿಗಳಿಗೆ ಪಧÀವಿ ಪ್ರಮಾಣ ಪತ್ರ ನೀಡಲಾಗಿದೆ. 3 ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ 6 ವರ್ಷದ ಸತತ ಪರಿಶ್ರಮದ ಫಲ ಅವರಿಗೆ ಲಭಿಸಿದೆ. ಅವರಿಗೆ ಮಾರ್ಗದರ್ಶನ ನೀಡಿದ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಇದೇ ವೇಳೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ,ರಮೇಶ್, ಆಕಾಶ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಪ್ರಕಾಶ್ ಸಂಸ್ಥಾಪಕ ಅಧ್ಯಕ್ಷ ಮುನಿರಾಜು, ಪುಷ್ಪಮುನಿರಾಜು, ಆಕಾಶ್ ಮೆಡಿಕಲ್ ಕಾಲೇಜಿನ ವೈದ್ಯರಾದ ಡಾ.ಬ್ರಿಜೇಶ್,