ಕೆಎಸ್‍ಒಯು ಪ್ರಾದೇಶಿಕ ಕೇಂದ್ರ ಪ್ರವೇಶಾತಿ ದಿನಾಂಕ ವಿಸ್ತರಣೆ

varthajala
0

ಬೆಂಗಳೂರು, ಅ. 18 (ಕರ್ನಾಟಕ ವಾರ್ತೆ) :

ಮೈಸೂರಿನ ಕರಾಮುವಿಯು ಪ್ರಸಕ್ತ 2022-23ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಲಾಗಿದ್ದು, ಸ್ನಾತಕ / ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ /ಬಿ.ಕಾಂ /ಬಿ.ಬಿ.ಎ /ಬಿ.ಸಿ.ಎ /ಬಿ.ಎಸ್ಸಿ., ಎಂ.ಎ /ಎಂ.ಸಿ.ಜೆ /ಎಂ.ಕಾಂ., ಬಿ.ಎಲ್.ಐ.ಎಸ್ಸಿ.,  ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್.,  ಡಿಪ್ಲೋಮಾ ಪ್ರೋಗ್ರಾಮ್ಸ್.,  ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿ ದಿನಾಂಕವನ್ನು ಆಕ್ಟೋಬರ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ.

 ಕರಾಮುವಿಯು ಮಲ್ಲೇಶ್ವರಂನ  ಪ್ರಾದೇಶಿಕ ಕೇಂದ್ರದಲ್ಲಿ ಪ್ರಥಮ ವರ್ಷದ ಕೋರ್ಸ್‍ಗಳ ಪ್ರವೇಶಾತಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ.

ಆಸಕ್ತ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ  ಪದವಿಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಲು ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಶಿಕಲಾ ಜೆ, ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ಕಛೇರಿ ದೂರವಾಣಿ ಸಂಖ್ಯೆ:- 080 23448811, 9741197921, 9620395584, 7760848564 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)