ಬೆಂಗಳೂರು ಜನವರಿ 03, (ಕರ್ನಾಟಕ ವಾರ್ತೆ) : 2022ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ 2022ರಲ್ಲಿ ಪ್ರಕಟವಾದ ಕನ್ನಡ. ಆಂಗ್ಲ ಮತ್ತು ಭಾರತೀಯ ಇತರೆ ಭಾಷೆ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ದಿನಾಂಕ: 31-01-2023ರ ಒಳಗಾಗಿ ಕಾಫಿರೈಟ್ ಮಾಡಿಸಿರತಕ್ಕದ್ದು, ಕಾಫಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಹಾಗೂ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಸಾರ್ವಜನಿಕ ಓದುಗರಿಗೆ ಒದಗಿಸಲು ಅನುಕೂಲವಾಗುವಂತೆ ಸ್ವ-ಇಚ್ಛೆ / ಆಸಕ್ತಿಯುಳ್ಳ ಲೇಖಕರು, ಲೇಖಕ - ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳು ಪುಸ್ತಕವನ್ನು ಆಯ್ಕೆಗೆ ಸಲ್ಲಿಸುವಾಗ ತಮ್ಮ ಅನುಮತಿ ಪತ್ರದೊಂದಿಗೆ ಸದರಿ ಪುಸ್ತಕದ ಸಾಪ್ಟ್ ಕಾಫಿಯನ್ನು ಸಿ.ಡಿ ರೂಪದಲ್ಲಿ (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯಗೋಪುರ, 4ನೇ ಮಹಡಿ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ದಿನಾಂಕ: 31-01-2023ರಂದು ಸಂಜೆ 5.30 ಗಂಟೆಯೊಳಗೆ ಸಲ್ಲಿಸುವುದು.
ತದನಂತರ ಬಂದ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಮಾಹಿತಿಗಾಗಿ ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ / ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು / ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ 080-22864990, 22867358 ಸಂಪರ್ಕಿಸುವಂತೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ. ಸತೀಶ್ ಕುಮಾರ್ ಎಸ್ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.