ಬೆಂಗಳೂರು, ಫೆಬ್ರವರಿ 27 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರ ಮಟ್ಟದ ಸಹಾಯಕ ಪ್ರಾಧ್ಯಾಪಕರ ಮತ್ತು ಕಿರಿಯ ಸಂಶೋಧನಾ ಸಹಾಯಕರ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಹಾಗೂ ಕರ್ನಾಟಕ ಸರ್ಕಾರ ನಡೆಸಲಿರುವ ರಾಜ್ಯ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ (ಕೆ-ಸೆಟ್) ಪರೀಕ್ಷೆಗಳಿಗೆ 45 ದಿನದ ತರಬೇತಿ ಶಿಬಿರವನ್ನು ಗುಲ್ಬರ್ಗ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪೆÇ್ರ. ಈ.ಟಿ. ಪುಟ್ಟಯ್ಯ ಉದ್ಘಾಟಿಸಿ ಮುಖ್ಯ ಭಾಷಣ ಮಾಡುವರು.
ತರಬೇತಿಯು ಮಾರ್ಚ್ 02 ರ ಗುರುವಾರ ಬೆಳಗ್ಗೆ 11 ಗಂಟೆಗೆ ಕರಾಮುವಿ ಆವರಣದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದು, ಕುಲಪತಿಗಳಾದ ಪೆÇ್ರ.ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸಿ ಅಭ್ಯರ್ಥಿಗಳಿಗೆ ಶುಭಹಾರೈಸುವರು. ಕುಲಸಚಿವ ಪೆÇ್ರ.ಕೆ.ಎಲ್.ಎನ್. ಮೂರ್ತಿ ಉಪಸ್ಥಿತರಿರುವರು. ಆಸಕ್ತರು ಈಗಲೂ ತರಬೇತಿಗೆ ಸೇರಲು ಅವಕಾಶವಿದೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 0821 2515944/9964760090 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.