ಬೆಂಗಳೂರು, ಮಾರ್ಚ್ 20, (ಕರ್ನಾಟಕ ವಾರ್ತೆ): ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2022-23ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು, ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಲ್ಲೇಶ್ವರಂನ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ. ಪ್ರವೇಶಾತಿಯು ಮಾರ್ಚ್ 31 ಅಂತಿಮ ದಿನಾಂಕವಾಗಿದೆ. ವಿದ್ಯಾರ್ಥಿಗಳು ಏಕಕಾಲದಲ್ಲಿ ಎರಡು ಕಾರ್ಯಕ್ರಮಗಳನ್ನು ಅಧ್ಯಯನ ಮಾಡÀಬಹುದು. ಕಲಿಕಾರ್ಥಿಯು ಏಕಕಾಲದಲ್ಲಿ ಒಂದು ಪದÀವಿಯನ್ನು ಸಾಂಪ್ರದಾಯಿಕ ವಿಶ್ವವಿದ್ಯಾನಿಲಯದಲ್ಲೂ ಇನ್ನೊಂದನ್ನು ಮುಕ್ತ ದೂರಶಿಕ್ಷಣದಲ್ಲೂ ಪಡೆಯಬಹುದು. ಅಂತೆಯೇ ಏಕ ಕಾಲದಲ್ಲಿ ಎರಡು ಪದವಿಗಳನ್ನು ದೂರಶಿಕ್ಷಣದಲ್ಲೇ ವ್ಯಾಸಂಗ ಮಾಡಬಹುದು,
ಅರ್ಜಿಗಳನ್ನು ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ KSOU Admission Portal ಮೂಲಕ ಪದವಿಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಲು ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜೆ. ಶಶಿಕಲಾ, ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯ ರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03 ಹಾಗೂ ಕಛೇರಿ ದೂರವಾಣಿ ಸಂಖ್ಯೆ - 080 23448811, 9741197921, 9620395584, 7760848564ನ್ನು ಸಂಪರ್ಕಿಸಬಹುದಾಗಿದೆ.