ಬೆಂಗಳೂರು, ಮಾರ್ಚ್ 3 (ಕರ್ನಾಟಕ ವಾರ್ತೆ): ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 09 ರಿಂದ 29ರವರೆಗೆ ನಡೆಯಲಿರುವುದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಪರೀಕ್ಷೆ ಪ್ರವೇಶ ಪತ್ರ” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
To facilitate II PUC students who are appearing for annual exams. KSRTC has decided to allow these students to travel free in its buses (City, suburban, Ordinary and Express buses) between their Residence and allotted Examination Centers on production of Admission ticket during the examination period between from 09.03.2023 to 29.03.2023.