66 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳು

varthajala
0

ಬೆಂಗಳೂರು, ಜೂನ್ 23, (ಕರ್ನಾಟಕ ವಾರ್ತೆ) :ಸ್ಕೂಲ್ ಗೇಮ್ ಫೆಡರೇಷನ್ ಆಪ್ ಇಂಡಿಯಾದವರು ನಡೆಸಿದ 66ನೇ ರಾಷ್ಟ್ರೀಯ


ಕ್ರ್ರೀಡಾಕೂಟದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 56 ಕ್ರೀಡಾ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.


ಈಜು, ಟೇಬಲ್ ಟೆನ್ನಿಸ್ ಹಾಗೂ ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಕ್ರೀಡೆಗಳಲ್ಲಿ ಗೆದ್ದು ಕರ್ನಾಟಕ ತಂಡ ಹಾಗೂ ಶಿಕ್ಷಣ ಇಲಾಖೆಗೆ ಕೀರ್ತಿ ತಂದಿರುತ್ತಾರೆ. ಈಜು ಸ್ಪರ್ಧೆಯ ಬಾಲಕರ ವಿಭಾಗದಲ್ಲಿ ತಂಡ ಪ್ರಶಸ್ತಿ, ಟೇಬಲ್ ಟೆನ್ನಿಸ್ ಸ್ಪರ್ಧೆ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ, ಟೇಬಲ್ ಟೆನ್ನಿಸ್ ಸ್ಪರ್ಧೆ ಬಾಲಕರ ವಿಬಾಗದಲ್ಲಿ ಆಕಾಶ್ ಶೆಟ್ಟಿ ವೈಯಕ್ತಿಕ ಪ್ರಶಸ್ತಿ, ಶಟಲ್ ಬ್ಯಾಡ್ಮಿಂಟನ್ ಬಾಲಕರ ವಿಭಾಗದಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

ದೆಹಲಿ, ಗ್ವಾಲಿಯರ್ ಹಾಗೂ ಭೂಪಾಲ್‍ನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ತಂಡ ಪ್ರಶಸ್ತಿಯನ್ನು ಗೆದ್ದುಕೊಂಡ ಕ್ರೀಡಾಪಟುಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಸಿಂಧು ಬಿ.ರೂಪೇಶ್ ರವರಿಗೆ ಹಸ್ತಾಂತರಿಸಿದರು.

ಪೋಷಕರು, ಕ್ರೀಡಾಭಿಮಾನಿಗಳು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ವೈಯಕ್ತಿಕ ಹಾಗೂ ಗುಂಪು ಕ್ರೀಡೆಗಳಲ್ಲಿ ಸಾಧನೆ ಮಾಡಿದ ಕರ್ನಾಟಕ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Post a Comment

0Comments

Post a Comment (0)