ಶಿಕ್ಷಣದಿಂದ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ: ರಾಜ್ಯಪಾಲರು

varthajala
0

ಬೆಂಗಳೂರು- ಹಾಸನ, ಜೂನ್ 03 (ಕರ್ನಾಟಕ ವಾರ್ತೆ) :
 ವ್ಯಕ್ತಿಯ ನಿರ್ಮಾಣ ಮತ್ತು ಸಮಾಜದ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
 
ನಗರದಲ್ಲಿ ಸೆಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಇಡೀ ಸಮಾಜ ಮತ್ತು ದೇಶದಲ್ಲಿ ನೈತಿಕತೆಯನ್ನು ಮೂಡಿಸುವ ಮತ್ತು ಆಧುನಿಕ ಜ್ಞಾನದ ಜೊತೆಗೆ ಸಂಸ್ಕತಿಯ ಸಂರಕ್ಷಣೆ, ರಾಷ್ಟ್ರದ ಏಕತೆ-ಸಮಗ್ರತೆ ಮತ್ತು ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಂತಹ ಶಿಕ್ಷಣದ ಅವಶ್ಯಕತೆ ಇಂದು ಇದೆ ಎಂದರು.

ಸ್ವಾಮಿ ವಿವೇಕಾನಂದರ ಪ್ರಕಾರ, "ಶಿಕ್ಷಣದಿಂದ ವ್ಯಕ್ತಿತ್ವವು ರೂಪುಗೊಳ್ಳುತ್ತದೆ, ಮಾನಸಿಕ ಬೆಳವಣಿಗೆಯಾಗುತ್ತದೆ, ಬುದ್ಧಿವಂತಿಕೆಯು ಬೆಳೆಯುತ್ತದೆ ಮತ್ತು ಮನುಷ್ಯ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುತ್ತಾನೆ" ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಹೊಸ ಭಾರತ, ಶ್ರೇಷ್ಠ ಭಾರತವನ್ನು ನಿರ್ಮಿಸುವ ದೃಷ್ಟಿಯಲ್ಲಿ ಜೆಸ್ಯೂಟ್ ಸಂಸ್ಥೆಗಳು ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

ಸೆÉಂಟ್ ಜೋಸೆಫ್ ವಿದ್ಯಾಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಜೊತೆಗೆ ಸುಸಜ್ಜಿತ ವಾತವರಣವನ್ನು ವಿದ್ಯಾಲಯದಲ್ಲಿ ಕಲ್ಪಿಸಿದೆ ಎಂದರು.

ಈ ಸಂಸ್ಥೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನ ಅಧ್ಯಯನ ಅವಕಾಶಗಳು ಮತ್ತು ಶಿಸ್ತುಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿದು ಸಂತೋಷವಾಗಿದೆ. ಈ ಕಾಲೇಜಿನ ಉದ್ದೇಶವು ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಯತ್ತ ಗಮನಹರಿಸುವುದು ಮತ್ತು ಈ ಕಾಲೇಜು ಆಧುನಿಕತೆಯನ್ನು ಅಳವಡಿಸಿಕೊಂಡು, ಶಿಕ್ಷಣ ಕ್ಷೇತ್ರದ ಅತ್ಯಾಧುನಿಕ ಅವಶ್ಯಕತೆಗಳನ್ನು ಒದಗಿಸುತ್ತಿದೆ, ಇದರಿಂದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಈ ಸಂಸ್ಥೆಯು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಸಾಧಿಸುವ ಮೂಲಕ ವಿವಿಧ ಚಟುವಟಿಕೆಗಳಲ್ಲಿ ಅನೇಕ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವುದು ಶ್ಲಾಘನೀಯ. ಸೇಂಟ್ ಜೋಸೆಫ್ಸ್ ರಾಷ್ಟ್ರಕ್ಕೆ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು, ಭಾರತೀಯ ನ್ಯಾಯಾಂಗಕ್ಕೆ ಅನೇಕ ದಿಗ್ಗಜರನ್ನು, ನಾಗರಿಕ ಸೇವಕರು, ವಿಜ್ಞಾನಿಗಳು, ಕ್ರೀಡಾಪಟುಗಳು, ರಾಜಕಾರಣಿಗಳು ಮತ್ತು ಸೇನಾ ಅಧಿಕಾರಿಗಳನ್ನು ನೀಡಿದೆ.

ಭಾರತ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಇದನ್ನು ಅಳವಡಿಸಿಕೊಂಡಿರುವ ಸೆಂಟ್ ಜೋಸೆಫ್ ವಿದ್ಯಾ ಸಂಸ್ಥೆ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಒಳಗೊಳ್ಳುವ, ಗುಣಮಟ್ಟ, ಮಾನವೀಯ ಮತ್ತು ಉತ್ತಮ ಚಿಂತನೆ, ಮೌಲ್ಯಯುತ ಶಿಕ್ಷಣವನ್ನು ಒದಗಿಸಲು ಕೆಲಸ ಮಾಡುತ್ತದೆ ಎಂದು ಹೇಳಿದರು.

ಶಾಸಕರಾದ ಸ್ವರೂಪ್ ಪ್ರಕಾಶ್, ಹಾಸನ ವಿಶ್ವವಿದ್ಯಾಲಯದ ಕುಲಪತಿ ಪೆÇ್ರಫೆಸರ್ ತಾರಾನಾಥ್, ಹಾಸನ ಜಿಲ್ಲಾಧಿಕಾರಿ ಐಎಎಸ್ ಶ್ರೀಮತಿ ಅರ್ಚನಾ, ಪೆÇಲೀಸ್ ವರಿಷ್ಠಾಧಿಕಾರಿ ಹರಿಹರನ್ ಶಂಕರ್, ಫಾರ್ ಡಿಯೋನಿಸಿಯಸ್ ವಾಜ್, ಹಸನ್ ಜೆಸ್ಯೂಟ್ ಎಜುಕೇಷÀನ್ ಸೊಸೈಟಿಯ ಅಧ್ಯಕ್ಷ, ಡೇನಿಯಲ್ ಫೆರ್ನಾಂಡಿಸ್, ಪ್ರಾಂಶುಪಾಲರು, ಹಾಸನ ಜೆಸ್ಯೂಟ್ ಎಜುಕೇಷನ್ ಸೊಸೈಟಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.


Governor Thaawarchand Gehlot Inaugurates New Building at St. Joseph's College, Hassan, Emphasizes Importance of Education

Bengaluru- Hassan, June 03, (Karnataka Information):
 Governor Thaawarchand Gehlot graced the inauguration ceremony of the new building at St. Joseph's College in Hassan, where he reiterated the paramount significance of education in personal growth and societal advancement. The event marked the college's commitment to providing a conducive environment for learning and holistic development.

Governor Gehlot lauded St. Joseph's College for its remarkable contributions in the field of education. With a focus on fostering moral values and equipping students with essential skills, the college aims to shape a new and prosperous India.

In his address, Governor Gehlot quoted Swami Vivekananda, stating, "Education builds personality, fosters mental development, and enables individuals to stand on their own feet." He commended the college for its efforts to align education with modern knowledge while upholding the rich cultural heritage, unity, integrity, equality, and harmony of the nation.

The new education policy implemented by the Government of India has found resonance at St. Joseph's College. By embracing this policy, the college seeks to provide inclusive, quality, and transformative education that nurtures entrepreneurial spirit and enlightenment among students.

The ceremony was attended by distinguished dignitaries, including MLA Shri Swaroop Prakash, Hassan University VC Dr. Taranath, Hassan DC IAS Smt. Archana, Fr Dionysius Vaz, President, Provincial of the Karnataka Jesuit province, Fr. Daniel Fernandes, Principal of St. Joseph's College, Hassan.

Post a Comment

0Comments

Post a Comment (0)