ಮಹಿಳೆಯರ ಬದುಕು ಬೆಳಗಿಸುವ ಜ್ಞಾನ ವಿಕಾಸ

varthajala
0

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್

ವಾರ್ತಾಜಾಲ, ಶಿಡ್ಲಘಟ್ಟ

ಜ್ಞಾನ ವಿಕಾಸ ಕಾರ್ಯಕ್ರಮಗ  ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಅವರ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತಹ ಅನೇಕ ವಿಷಯಗಳ ಕುರಿತು ಮಾಹಿತಿಗಳನ್ನು ನೀಡಲಾಗುವುದು ಎಂದು  ಯೋಜನಾಧಿಕಾರಿಗಳಾದ ಸುರೇಶ್ ಗೌಡ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಶಿಡ್ಲಘಟ್ಟ ಇವರ ವತಿಯಿಂದ ತಾಲೂಕಿನ ಭೈರಸಂದ್ರ ಗ್ರಾಮದಲ್ಲಿ ಬೃಂದಾವನ ಹೆಸರಿನ ಹೊಸ ಜ್ಞಾನ ವಿಕಾಸ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಜ್ಞಾನ ವಿಕಾಸ್ ಕಾರ್ಯಕ್ರಮ ಎನ್ನುವುದು ಮಾತೃಶ್ರೀ ಡಾ, ಹೇಮಾವತಿ ವಿ ಹೆಗ್ಗಡೆ,ಅಮ್ಮನವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕಾರ್ಯಕ್ರಮವಾಗಿದ್ದು ಮಹಿಳೆಯರಿಗಾಗಿಯೇ ಜಾರಿಗೆ ತರಲಾಗಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲೆಯಾದ್ಯಂತ ಸಹಸ್ರಾರು ಸಂಘಗಳನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕೇವಲ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸಾಲದ ಸುಳಿಯಲ್ಲಿ ಸಿಲುಕಿಸುವ ಗುರಿ ನಮ್ಮದಲ್ಲ. ಮಹಿಳೆಯರಲ್ಲಿ ಉಳಿತಾಯ ಮನೋಭಾವನೆ, ಕುಟುಂಬ ನಿರ್ವಹಣೆ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಮಹಿಳೆಯರಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ ಸರ್ವಾಂಗೀಣ ಅಭಿವೃದ್ಧಿ ಸಾಧಿಸುವಂತೆ ಮಾಡುವುದೇ ಇದರ ಮೂಲ ಉದ್ದೇಶವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾಧ್ಯಾಯ ನಾರಾಯಣಸ್ವಾಮಿ, ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರವಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಅರುಣಾ, ವಲಯ ಮೇಲ್ವಿಚಾರಕ ಸ್ವಾಮಿ, ಒಕ್ಕೂಟದ ಅಧ್ಯಕ್ಷರು, ಸೇವಾಪ್ರತಿನಿಧಿಗಳು,ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Post a Comment

0Comments

Post a Comment (0)