ಬೆಂಗಳೂರು, ಸೆಪ್ಟಂಬರ್ 27 (ಕರ್ನಾಟಕ ವಾರ್ತೆ):
ಕರ್ನಾಟಕ ಬಂದ್ ಪ್ರಯುಕ್ತ ಸೆಪ್ಟೆಂಬರ್ 29 ರಂದು ನಿಗಧಿಪಡಿಸಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ 2 ಮತ್ತು ನಾಲ್ಕನೇ ಸೆಮಿಸ್ಟರ್ (ಎನ್‍ಇಪಿ) ಸ್ನಾತಕ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದರಿ ಪರೀಕ್ಷೆಗಳನ್ನು ಸೆಪ್ಟೆಂಬರ್ 30 ಕ್ಕೆ ಮರು ನಿಗಧಿಪಡಿಸಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.