ಬೆಂಗಳೂರು, ಸೆಪ್ಟಂಬರ್ 27 (ಕರ್ನಾಟಕ ವಾರ್ತೆ):ಬೆಂಗಳೂರು ಪರೀಕ್ಷಾ ಪ್ರಾಧಿಕಾರ ಮಂಡಳಿಯ ಔಷಧ ನಿಯಂತ್ರಣ ಇಲಾಖೆಯ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿನ ಬೆಂಗಳೂರು ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ ಮತ್ತು ಕರ್ನಾಟಕ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ. ಫಾರ್ಮಾ ಕೋರ್ಸಿನ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದ್ವಿತೀಯ ಪಿ.ಯು.ಸಿ ಪಿ.ಸಿ.ಎಂ, ಪಿ.ಸಿ.ಬಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರ ಮಂಡಳಿಯ ವೆಬ್‍ಸೈಟ್ www.beadpharmacy.org ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ನೇರ ಅಥವಾ ಅಂಚೆ ಮೂಲಕ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿಗಳನ್ನು ಅಕ್ಟೋಬರ್ 3 ರಿಂದ ಅಕ್ಟೋಬರ್ 13ರ ಮಧ್ಯರಾತ್ರಿ 12 ಗಂಟೆಯವರೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪರೀಕ್ಷಾ ಪ್ರಾಧಿಕಾರ ಮಂಡಳಿಯ ವೆಬ್‍ಸೈಟ್ www.beadpharmacy.org ಅಥವಾ ದೂರವಾಣಿ ಸಂಖ್ಯೆ 080-22483465/ 080-22222681 ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಪರೀಕ್ಷಾ ಪ್ರಾಧಿಕಾರ ಮಂಡಳಿಯ ಔಷಧ ನಿಯಂತ್ರಣ ಇಲಾಖೆಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.