ಫೆಬ್ರವರಿ 1 ರಂದು ಐಎಎಸ್/ಕೆಎಎಸ್ (IAS/KAS) ಶಿಭಿರಾರ್ಥಿಗಳ ತರಬೇತಿ ಸಮಾರೋಪ ಸಮಾರಂಭ

varthajala
0

ಬೆಂಗಳೂರು, ಜನವರಿ 29 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಆಯೋಜಿಸಿದ್ದು, 2014ನೇ ಬ್ಯಾಚ್‍ನ ಐಎಎಸ್ ಅಧಿಕಾರಿ, ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀಮತಿ ಶಿಲ್ಪಾನಾಗ್ ಅವರು ಫೆಬ್ರವರಿ 1 ರಂದು ಬೆಳಿಗ್ಗೆ  11 ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಿರುವ ಸಮಾರೋಪ ಸಮಾರಂಭದಲ್ಲಿ ಐಎಎಸ್ / ಕೆಎಎಸ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿ ಸಂವಾದ ನಡೆಸಲಿದ್ದಾರೆ.

 2011 ನೇ ಸಾಲಿನ ಐಎಫ್‍ಎಸ್ ಅಧಿಕಾರಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಿ. ಮಹೇಶ್ ಕುಮಾರ್ ಅವರು ಮುಕ್ತ ಭಂಡಾರ ಅಧ್ಯಯನ ಪುಸ್ತಕವನ್ನು ಬಿಡುಗಡೆ ಮಾಡಿ ಶಿಬಿರಾರ್ಥಿಗಳಿಗೆ ಶುಭ ಕೋರಲಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ  ಶರಣಪ್ಪ ವಿ. ಹಲಸೆ ಅಧ್ಯಕ್ಷತೆ  ವಹಿಸಲಿದ್ದಾರೆ. ಕುಲಸಚಿವ ಕೆ. ಎಲ್. ಎನ್ ಮೂರ್ತಿ ಉಪಸ್ಥಿತರಿರುವರು.

ಕುಲಪತಿಗಳ ಮಾರ್ಗದರ್ಶನದಲ್ಲಿ ಡಿಸೆಂಬರ್ 08 ರಂದು ಪ್ರಾರಂಭವಾದ ಈ ತರಬೇತಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ 529 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡು ತರಬೇತಿ ಪಡೆಯುತ್ತಿದ್ದಾರೆ ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)