ಬೆಂಗಳೂರು, ಜನವರಿ 08 (ಕರ್ನಾಟಕ ವಾರ್ತೆ): ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಶೈಕ್ಷಣಿಕ ವರ್ಷ 2023-24ನೇ ಸಾಲಿನ ಪ್ರಥಮ ವರ್ಷದ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಎನ್‍ಆರ್‍ಐ ಕೋಟಾದಡಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ ಜನವರಿ 11ರವರೆಗೆ ಅರ್ಜಿಗಳನ್ನು ಕರೆಯಲಾಗಿದ್ದು, ಜನವರಿ 13 ರಂದು ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುವುದು.
ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಪೂರ್ಣ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ ಅಧಿಕೃತ ಅಂತರ್ಜಾಲದಿಂದ: www.uasbangalore.edu.in ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಪಟ್ಟ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು ದೃಡೀಕರಿಸಿ ಜನವರಿ 11 ರ ಸಂಜೆ 4 ಗಂಟೆಯೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರಿಗೆ ಕಛೇರಿಯ ಸಮಯದೊಳಗೆ ಸಲ್ಲಿಸಿ ನೊಂದಾಯಿಸಿಕೊಳ್ಳಬೇಕು. ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.