“Statistical Data Analysis for Research Work” ಕುರಿತು ಕಾರ್ಯಾಗಾರ

varthajala
0

ಬೆಂಗಳೂರು, ಜನವರಿ 08 (ಕರ್ನಾಟಕ ವಾರ್ತೆ):  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Statistical Data Analysis for Research Work” ಎಂಬ ವಿಷಯದ ಮೇಲೆ ಜನವರಿ 18 ರಿಂದ 22 ರವರೆಗೆ  ಐದು ದಿನಗಳ ಕಾರ್ಯಾಗಾರವನ್ನು ಪೆÇ್ರ. ಯು. ಆರ್. ರಾವ್ ವಿಜ್ಞಾನ ಭವನ, ಮೇ. ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ದೊಡ್ಡ ಬೆಟ್ಟಹಳ್ಳಿ ಲೇಔಟ್, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097 ಇಲ್ಲಿ ಹಮ್ಮಿಕೊಂಡಿದ್ದು, ಕಾರ್ಯಾಗಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದಾರೆ.

ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಆಸಕ್ತರು ಜನವರಿ 16 ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಜಾಲತಾಣ http://www.kstacademy.in  ಹಾಗೂ ವೈಜ್ಞಾನಿಕಾಧಿಕಾರಿಯಾದ ವಿ.ಕೆ.ಶ್ರೀನಿವಾಸು ಮೊ.ಸಂ: 9620767819 ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)