ಬೆಂಗಳೂರು, ಫೆಬ್ರವರಿ 16, (ಕರ್ನಾಟಕ ವಾರ್ತೆ) : ಇಂದು ವಿಧಾನಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಿದರು.
ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃμÁ್ಟಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು ನಮಗೆ ಪ್ರೇರಣೆಯಾಗಿದೆ. ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಶರಣರ ಚಿಂತನೆ, ಸಮಾಜದಲ್ಲಿ ಸಂಪತ್ತಿನ ನ್ಯಾಯಯುತ ಹಂಚಿಕೆ ಮಾಡುವ ನಮ್ಮ ಆಶಯಕ್ಕೆ ಆಧಾರವಾಗಿದೆ ಎಂದ ಮುಖ್ಯಮಂತ್ರಿಗಳು
ಆಗದು ಎಂದು, ಕೈಲಾಗದು ಎಂದು, ಕೈಕಟ್ಟಿ ಕುಳಿತರೆ, ಸಾಗದು ಕೆಲಸವು ಮುಂದೆ, ಮನಸೊಂದಿದ್ದರೆ ಮಾರ್ಗವು ಉಂಟು, ಕೆಚ್ಚೆದೆ ಇರಬೇಕೆಂದು, ಎಂದು ವರನಟ ಡಾ.ರಾಜ್‍ಕುಮಾರ್ ಅಭಿನಯದ ಹಾಗೂ ಆರ್.ಎನ್.ಜಯಗೋಪಾಲ್ ರಚಿಸಿದ ಬಂಗಾರದ ಮನುಷ್ಯ ಚಿತ್ರದ ಈ ಹಾಡಿನಂತೆ ದೇಶದ ಯಾವುದೇ ಸರ್ಕಾರ ಜಾರಿಗೊಳಿಸದ ಅತ್ಯಂತ ಬೃಹತ್ ಪ್ರಮಾಣದ ನೇರ ನೆರವು ನೀಡುವ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಿದ ಶ್ರೇಯ ನಮ್ಮದಾಗಿದೆ ಎಂದು ತಿಳಿಸಿದರು.
ನಮ್ಮ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳು ಜನರ ಆಶೋತ್ತರಗಳನ್ನು ಆಧರಿಸಿವೆ. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ನಮ್ಮ ಯುಪಿಎ ಸರ್ಕಾರವು ಜನರ ಆಹಾರ, ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ವಾಸದ ಭದ್ರತೆಗಾಗಿ ವಿವಿಧ ಜನಕೇಂದ್ರಿತ ಯೋಜನೆಗಳು ಹಾಗೂ ಕಾನೂನುಗಳನ್ನು ರೂಪಿಸಿ ಬಡಜನರಿಗೆ ನ್ಯಾಯ ಒದಗಿಸುವ ಕಾರ್ಯಗಳನ್ನು ಕೈಗೊಂಡಿತ್ತು. ಆದರೆ, ಹಿಂದಿನ 10 ವರ್ಷಗಳ ಅವಧಿಯಲ್ಲಿನ ಕೇಂದ್ರ ಸರ್ಕಾರದ ಜನವಿರೋಧಿ ನಿಲುವುಗಳಿಂದಾಗಿ ಅಸಮಾನತೆ ಹೆಚ್ಚಳ, ಕೆಲವೇ ಜನರ ಬಳಿ ಸಂಪತ್ತಿನ ಶೇಖರಣೆ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಹೆಚ್ಚುತ್ತಿರುವ ಪ್ರಭಾವ ಮುಂತಾದ ಅನಪೇಕ್ಷಿತ ಬೆಳೆವಣಿಗೆಗಳಿಗೆ ಎಡೆ ಮಾಡಿದೆ ಎಂದರು.
ತನ್ನ ಹೊಣೆಗಾರಿಕೆಯಿಂದ ನುಣುಚಿಕೊಂಡ ಕೇಂದ್ರ ಸರ್ಕಾರ ಮಾಡದ ಕೆಲಸವನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ನಾವು ರೂಪಿಸಿದ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಜನಾಭಿಪ್ರಾಯದ ಫಲವಾಗಿದೆ. ಇದು ಉದ್ಯೋಗ ಸೃಜಿಸಿ, ಜನರ ಕೊಳ್ಳುವ ಸಾಮಥ್ರ್ಯ ಹೆಚ್ಚಿಸುವ ಪ್ರಯತ್ನವಾಗಿದೆ. ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವ ಕಾರ್ಯಕ್ರಮಗಳು ಇವಾಗಿವೆ.ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಲ್ಲೂ ತಾಂಡವವಾಡಬೇಕು. ಮತ ಮತಗಳಲ್ಲಿ, ಸಾಹಿತ್ಯ ಸಾಹಿತ್ಯಗಳಲ್ಲಿ ಸಮಾಜ ಸಮಾಜಗಳಲ್ಲಿ – ಅμÉ್ಟೀ ಏಕೆ? ರಾಜಕೀಯ ಕ್ಷೇತ್ರದಲ್ಲಿ ಆರ್ಥಿಕ ಕ್ಷೇತ್ರದಲ್ಲಿ, ಸರ್ವತ್ರ ಅದು ವ್ಯಾಪಿಸಬೇಕು. ಅತ್ಯಂತ ಕೀಳಾದವನಿಗೂ ಮೇಲಾಗುವ ಅವಕಾಶವಾಗಬೇಕು. ಇವೆರಡನ್ನೂ ಒಳಗೊಂಡ ಆಧ್ಯಾತ್ಮಿಕ ದೃಷ್ಟಿಯೇ ಪೂರ್ಣದೃಷ್ಟಿ ಎಂದು ತಿಳಿಸಿದರು.
2024-25 ರಲ್ಲಿ 52,000 ಕೋಟಿ ರೂ. ಗಳನ್ನು ಐದು ಗ್ಯಾರಂಟಿಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಾಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50,000 ದಿಂದ 55,000 ರೂ. ಗಳನ್ನು ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ. ಸಮಯ ಕಳೆದಂತೆ ಇದರ ಆರ್ಥಿಕ ಮತ್ತು ಸಾಮಾಜಿಕ ಅನುಕೂಲಗಳು ಇನ್ನಷ್ಟು ಸ್ಪಷ್ಟವಾಗಿ ಗೋಚರಿಸಲಿವೆ. ಹಲವು ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ನಮ್ಮ ಕೆಲಸದ ಅಧ್ಯಯನ ನಡೆಸಿ, ಶ್ಲಾಘಿಸಿವೆ. ಆದರೆ ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆ ದೃಢವಾಗಲು ಕೇವಲ ಈ ಅಧ್ಯಯನಗಳμÉ್ಟೀ ಕಾರಣವಲ್ಲ. ಬಸ್ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ, ಯುವನಿಧಿಯಡಿ ನೆರವು ಪಡೆದ ನಿರುದ್ಯೋಗಿ ಯುವಕನ ಆನಂದಬಾಷ್ಪ- ಇವು ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆಯನ್ನು ಇನ್ನಷ್ಟು ಬಲಪಡಿಸಿದೆ. ಅಭಿವೃದ್ಧಿಯ ಫಲವನ್ನು ಅದರ ಹಕ್ಕುದಾರರಾದ ಜನಸಾಮಾನ್ಯರಿಗೆ ಹಿಂತಿರುಗಿಸುವುದರಲ್ಲಿ ಅನನ್ಯವಾದ ಸಂತೃಪ್ತಿಯಿದೆ ಎಂದು ತಿಳಿಸಿದರು.
ವಿರೋಧಿಗಳು ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಬಣ್ಣಿಸಿ ರಾಜ್ಯ ದಿವಾಳಿಯಾಗಿದೆ, ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನಮ್ಮ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಸಂಕಷ್ಟಗಳಿಗೆ ಸ್ಪಂದಿಸಲಾಗದವರು ತಮ್ಮ ಹುಳುಕನ್ನು ಮುಚ್ಚಿಹಾಕಲು ಇಂತಹ ಟೀಕೆಗಳನ್ನು ಮಾಡುತ್ತಿದ್ದಾರೆ. ಇನ್ನೊಂದೆಡೆ ನಮ್ಮ ಗ್ಯಾರಂಟಿಗಳನ್ನು ಕದ್ದು ಅವರ ಗ್ಯಾರಂಟಿಗಳೆಂದು ನಂಬಿಸಲು ಹೆಣಗಾಡುತ್ತಿರುವುದು ವಿಪರ್ಯಾಸ. ಇಂತಹ ಟೀಕೆಗಳಿಗೆ ನಾನಲ್ಲ. ಶರಣರೇ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.
ಭವಿಷ್ಯದ ಕುರಿತ ನಮ್ಮ ದೂರದೃಷ್ಟಿ ಗ್ಯಾರಂಟಿ ಯೋಜನೆಗಳಿಗμÉ್ಟೀ ಸಿಮೀತವಾಗಿರುವುದಿಲ್ಲ. ಇಷ್ಟು ದೊಡ್ಡ ಮಟ್ಟದ ಗ್ಯಾರಂಟಿ ಯೋಜನೆಗಳ ಮಧ್ಯೆಯೂ ನಮ್ಮ ಸರ್ಕಾರದ ಒಂಭತ್ತು ತಿಂಗಳ ಅವಧಿಯಲ್ಲಿ ಸುಮಾರು 21,168 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಚಿವ ಸಂಪುಟದ ಅನುಮೋದನೆ ನೀಡಿದ್ದೇವೆ ಮತ್ತು ಹಿಂದೆ ಅನುಮೋದನೆಗೊಂಡ ಕಾಮಗಾರಿಗಳ 2,230 ಕೋಟಿ ರೂ.ಗಳ ಪರಿಷ್ಕøತ ಅಂದಾಜಿಗೆ ಅನುಮೋದನೆ ನೀಡಿದ್ದೇವೆ.
2,188 ಕೋಟಿ ರೂ.ಗಳ ಕ್ರಿಯಾ ಯೋಜನೆಗೂ ಅನುಮೋದನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಹಾಗೂ ತ್ವರಿತ ಆರ್ಥಿಕ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣಕ್ಕೆ ನಾವು ಒತ್ತು ನೀಡಿದ್ದೇವೆ. ಆರ್ಥಿಕ ಅಭಿವೃದ್ಧಿಗೆ ಪೂರಕ ಮೂಲಸೌಕರ್ಯಗಳಾದ ಎಕ್ಸ್‍ಪ್ರೆಸ್‍ವೇ, ಅತ್ಯುತ್ತಮ ಗ್ರಾಮೀಣ ರಸ್ತೆಗಳು, ವಿಶ್ವದರ್ಜೆಯ ವಿಮಾನ ನಿಲ್ದಾಣಗಳು, ಕೈಗಾರಿಕಾ ಕಾರಿಡಾರ್‍ಗಳು ಮತ್ತು ನಗರ ಪ್ರದೇಶಗಳಲ್ಲಿ ಅತ್ಯುತ್ತಮ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರೂಪಿಸಲು ಅಗತ್ಯ ಸಂಪನ್ಮೂಲ ಕ್ರೋಢೀಕರಿಸಲಾಗುವುದು. ವಿದ್ಯುತ್ ಉತ್ಪಾದನೆಯಲ್ಲಿ ಮತ್ತೆ ಮುಂಚೂಣಿಯ ರಾಜ್ಯವಾಗಿ ಹೊರಹೊಮ್ಮಲು ಇಂಧನ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡಲಾಗುವುದು. ಬೆಂಗಳೂರು ನಗರವನ್ನು ವಿಶ್ವದರ್ಜೆಯ ಮೂಲಸೌಕರ್ಯ ಒದಗಿಸುವ ಮೂಲಕ ಜಾಗತಿಕ ಮಟ್ಟದ ನಗರವಾಗಿ ಅಭಿವೃದ್ಧಿಪಡಿಸಲಾಗುವುದು. ಐಟಿ ಮತ್ತು ಬಿಟಿ ವಲಯ, ಕೃತಕ ಬುದ್ಧಿಮತ್ತೆ, ರೊಬೊಟಿಕ್ಸ್, ಸೆಮಿ-ಕಂಡಕ್ಟರ್, ಆಟೋಮೊಬೈಲ್ ಮತ್ತು ಇತರ ಪ್ರವರ್ಧಮಾನಕ್ಕೆ ಬರುತ್ತಿರುವ ವಲಯಗಳ ಜಾಗತಿಕ ಪ್ರತಿಭೆಗಳನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು. ಈ ವಿಷಯದಲ್ಲಿ ನಾವು ದೇಶಕ್ಕೇ ಮಾದರಿಯಾಗಿ ಕಾರ್ಯನಿರ್ವಹಿಸಲಿದ್ದೇವೆ. ಇದು ನಮ್ಮ ಕಾಯಕ. ಎಂದು ತಿಳಿಸಿದರು.
ಮಾನವ ಸಂಪನ್ಮೂಲ ಅಭಿವೃದ್ಧಿಗೆ ತಳಪಾಯವಾದ ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅತ್ಯುತ್ತಮ ಗುಣಮಟ್ಟದ ಶಾಲೆಗಳನ್ನು ಅಭಿವೃದ್ಧಿಪಡಿಸಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ, ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆ ರೂಪಿಸಲಿದೆ. ನಮ್ಮ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಸ್ಥಳೀಯವಾಗಿಯೇ ಅತ್ಯುತ್ತಮ ಪ್ರಾಥಮಿಕ ಆರೋಗ್ಯ ಸೇವೆಗಳು ಹಾಗೂ ಸೂಪರ್-ಸ್ಪೆμÁಲಿಟಿ ಆಸ್ಪತ್ರೆಗಳ ಸೇವೆಗಳನ್ನು ದೊರಕಿಸಲಿದೆ. ಕೌಶಲ್ಯಾಭಿವೃದ್ಧಿ ವಲಯದಲ್ಲಿ ಯುವನಿಧಿ ಮತ್ತು ಯುವನಿಧಿ ಪ್ಲಸ್ ಉಪಕ್ರಮಗಳ ಜೊತೆಗೆ ಮುಂದಿನ 5 ವರ್ಷಗಳಲ್ಲಿ ಯುವಜನರು ಉದ್ಯಮದ ಬೇಡಿಕೆಗೆ ತಕ್ಕಂತ ಉದ್ಯೋಗಗಳಿಗೆ ಸಜ್ಜಾಗಲಿದ್ದಾರೆ. ಈ ಉಪಕ್ರಮಗಳಿಗೆ ನಮ್ಮ ಬದ್ಧತೆ ಅಚಲವಾದುದು. ಈ ಎಲ್ಲಾ ದಿಟ್ಟ ಹಾಗೂ ದೂರದೃಷ್ಟಿಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ದಕ್ಷ ಹಾಗೂ ಸಂಕಲ್ಪಶಕ್ತಿಯುಳ್ಳ ಆಡಳಿತ ವ್ಯವಸ್ಥೆಯನ್ನು ಹೊಂದುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಸಾಂಸ್ಥಿಕ ಸುಧಾರಣೆಗಳು, ವಿಕೇಂದ್ರೀಕರಣ, ಹೊಣೆಗಾರಿಕೆ ಹಾಗೂ ಫಲಿತಾಂಶ ಆಧಾರಿತ ಆಡಳಿತದ ಮೂಲಕ ಆಡಳಿತ ವ್ಯವಸ್ಥೆಯ ಕುರಿತು ಜನರಲ್ಲಿ ಮತ್ತೆ ವಿಶ್ವಾಸ ಮೂಡಿಸುವುದು ನಮ್ಮ ಆಶಯವಾಗಿದೆ. ಅಭಿವೃದ್ಧಿಯ ಈ ನೀಲ ನಕಾಶೆಯನ್ನು ಯಶಸ್ವಿಯಾಗಿ ವಾಸ್ತವಕ್ಕಿಳಿಸಲು ಅವಿರತವಾಗಿ ಮುಂದಿನ ನಾಲ್ಕು ವರ್ಷ ಶ್ರಮಿಸುತ್ತೇವೆ. ವಿನೂತನ ಚಿಂತನೆಗಳು, ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರ ಹಾದಿಯಲ್ಲಿ ಕ್ರಾಂತಿಕಾರಿ ಹೆಜ್ಜೆಗಳನ್ನಿಡಬೇಕಾಗಿದೆ. ಈ ಆಯವ್ಯಯವು ನಮ್ಮ ರಾಜ್ಯದ ಮುಂದಿನ ನಡೆಯನ್ನು ನಿರೂಪಿಸುತ್ತದೆ. ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಪರ್ವವನ್ನೊಳಗೊಂಡ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ಒಂದು ದಶಕದ ಹಾದಿಯನ್ನು ನಿಚ್ಚಳಗೊಳಿಸಲಿದೆ ಎಂದು ತಿಳಿಸಿದರು.
ಈ ಆಯವ್ಯಯವು ಗ್ಯಾರಂಟಿ ಯೋಜನೆಗಳೊಂದಿಗೆ ಉದ್ಯೋಗ ಸೃಜನೆ, ಶಿಕ್ಷಣ, ಆರೋಗ್ಯ, ಹಸಿವು ನಿವಾರಣೆ, ಕೃಷಿ ಮತ್ತು ನೀರಾವರಿಗೆ ಪೆÇ್ರೀತ್ಸಾಹ, ಮೂಲಸೌಕರ್ಯ ಅಭಿವೃದ್ಧಿ ಮತ್ತಿತರ ವಲಯಗಳ ಅಭಿವೃದ್ಧಿಗೆ ಒತ್ತು ನೀಡಲಿದೆ. ಎಲ್ಲಾ ದುರ್ಬಲ ವರ್ಗದ ಜನರಿಗೆ ಗೌರವಯುತ ಸ್ಥಾನಮಾನ ದೊರಕಿಸಲು ಆದ್ಯತೆ ನೀಡಲಿದೆ. ಈ ಆಯವ್ಯಯವು ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃμÁ್ಟಂತವನ್ನು ರೂಪಿಸಲಿದೆ ಎಂದರು.
ರಾಜ್ಯದ ಆರ್ಥಿಕತೆಯು 2023-24ನೇ ಸಾಲಿನಲ್ಲಿ ಶೇ.6.6ರಷ್ಟು (ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಈ ಶ್ಲಾಘನೀಯ ಬೆಳವಣಿಗೆಯು, ದೇಶದ ಆರ್ಥಿಕತೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂಬುದನ್ನು ದೃಢಪಡಿಸಿದೆ. ಸೇವಾ ಮತ್ತು ಕೈಗಾರಿಕಾ ವಲಯಗಳು ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಕಳೆದ ಸಾಲಿಗೆ ಹೋಲಿಸಿದರೆ, 2023-24ನೇ ಸಾಲಿನಲ್ಲಿ ಸೇವಾ ವಲಯವು ಶೇ.8.7ರಷ್ಟು (ಸ್ಥಿರ ಬೆಲೆಗಳಲ್ಲಿ) ಮತ್ತು ಕೈಗಾರಿಕೆ ವಲಯವು ಶೇ.7.5ರಷ್ಟು (ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆ ಸಾಧಿಸಿದೆ. ಪ್ರಸಕ್ತ ವರ್ಷದಲ್ಲಿ ಮುಂಗಾರು ವೈಫಲ್ಯದಿಂದ ರಾಜ್ಯವು ತೀವ್ರ ಬರಗಾಲವನ್ನು ಎದುರಿಸಬೇಕಾಯಿತು. ಇದರಿಂದಾಗಿ ಕೃಷಿ ಕ್ಷೇತ್ರವು ಶೇ.1.8ರಷ್ಟು (ಸ್ಥಿರ ಬೆಲೆಗಳಲ್ಲಿ) ಋಣಾತ್ಮಕ ಬೆಳವಣಿಗೆ ಹೊಂದಿದೆ. ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿನ ಕುಸಿತ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿನ ಬಡ್ಡಿ ದರಗಳ ಹೆಚ್ಚಳದಿಂದ ಪ್ರಸಕ್ತ ವರ್ಷದ ಮೊದಲ ಆರು ತಿಂಗಳುಗಳಲ್ಲಿ ನಮ್ಮ ದೇಶಕ್ಕೆ ವಿದೇಶಿ ನೇರ ಹೂಡಿಕೆಯ ಕುಸಿತದ ನಡುವೆಯೂ, ರಾಜ್ಯದಲ್ಲಿ ಸೆಪ್ಟೆಂಬರ್ 2023ರ ಅಂತ್ಯದವರೆಗೆ 2.8 ಶತಕೋಟಿ ಅಮೇರಿಕನ್ ಡಾಲರ್ಗಳಷ್ಟು ವಿದೇಶಿ ಹೂಡಿಕೆಯಾಗಿರುತ್ತದೆ. ಇದು ವಿದೇಶಿ ಬಂಡವಾಳದಾರರಿಗೆ ರಾಜ್ಯವು ಆಕರ್ಷಕ ಹೂಡಿಕೆ ಕೇಂದ್ರವಾಗಿರುವುದನ್ನು ಸಾಬೀತುಪಡಿಸಿದೆ ಎಂದರು.
ಕರ್ನಾಟಕ ರಾಜ್ಯವು ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ 2ನೇ ರಾಜ್ಯವಾಗಿದ್ದು, 2022-23ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯು ಶೇ.18ರಷ್ಟು ಹೆಚ್ಚಳ ಕಂಡಿದೆ. ಸ್ವಂತ ತೆರಿಗೆ ರಾಜಸ್ವವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಶೇ.12ರಷ್ಟು ಬೆಳವಣಿಗೆಯನ್ನು ಸಾಧಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಪ್ರಮಾಣ ಹೆಚ್ಚಾಗಿ, ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸುವಲ್ಲಿ ಸಹಕಾರಿಯಾಗಿರುವುದನ್ನು ಇದು ತೋರಿಸುತ್ತದೆ.
ಕೇಂದ್ರ ಹಾಗೂ ರಾಜ್ಯಗಳ ಸಂಬಂಧ ನೌಕರ ಹಾಗೂ ಯಜಮಾನರ ಸಂಬಂಧಗಳಾಗದೆ ಸಂವಿಧಾನದತ್ತ ಅಧಿಕಾರ ವ್ಯಾಪ್ತಿಯೊಳಗೆ ಸ್ವಾಯತ್ತ ಘಟಕಗಳಾಗಿರಬೇಕು. ರಾಜ್ಯಗಳ ಜೊತೆ ಸಮಾನತೆಯ ಆಧಾರದಲ್ಲಿ ವ್ಯವಹರಿಸಬೇಕು.
ಸರಕು ಮತ್ತು ಸೇವಾ ತೆರಿಗೆಯನ್ನು ಪರಿಚಯಿಸುವ ಮೂಲಕ ರಾಜ್ಯಗಳ ತೆರಿಗೆ ಸಂಗ್ರಹಣೆಯು ಶೇ.14ರಷ್ಟು ಬೆಳವಣಿಗೆ ಹೊಂದಲಿದ್ದು, ಒಂದು ವೇಳೆ ಅಂದಾಜಿಗಿಂತ ಕಡಿಮೆ ಸಂಗ್ರಹವಾದಲ್ಲಿ, ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರಗಳಿಗೆ ಭರವಸೆ ನೀಡಲಾಗಿತ್ತು. ಶೇ.14ರಷ್ಟು ಬೆಳವಣಿಗೆ ದರದಂತೆ 2017 ರಿಂದ 2023-24ರವರೆಗೆ ರಾಜ್ಯದಲ್ಲಿ ಒಟ್ಟು 4,92,296 ಕೋಟಿ ರೂ.ಗಳ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ವಾಸ್ತವಿಕವಾಗಿ ರಾಜ್ಯದಲ್ಲಿ 3,26,764 ಕೋಟಿ ರೂ.ಗಳ ಜಿ.ಎಸ್.ಟಿ ತೆರಿಗೆ ಸ್ವೀಕೃತವಾಗಿದೆ. ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿನ ಕೊರತೆ 1,65,532 ಕೋಟಿ ರೂ.ಗಳಿಗೆ ಎದುರಾಗಿ, ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 1,06,258 ಕೋಟಿ ರೂ. ಪರಿಹಾರವನ್ನು ಮಾತ್ರ ಬಿಡುಗಡೆ ಮಾಡಿದೆ. ಜಿ.ಎಸ್.ಟಿ. ತೆರಿಗೆಯ ಈ ಅವೈಜ್ಞಾನಿಕ ಅನುμÁ್ಠನದಿಂದ ರಾಜ್ಯಕ್ಕೆ ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 59,274 ಕೋಟಿ ರೂ.ಗಳ ನಷ್ಟವಾಗಿರುತ್ತದೆ.
15ನೇ ಹಣಕಾಸು ಆಯೋಗವು 2020-21ಕ್ಕೆ ಅನ್ವಯವಾಗುವಂತೆ ನೀಡಿದ್ದ ಮಧ್ಯಂತರ ವರದಿಯ ಶಿಫಾರಸ್ಸಿನಿಂದ ರಾಜ್ಯಕ್ಕಾದ ಅನ್ಯಾಯವನ್ನು ಸರಿಪಡಿಸುವಲ್ಲಿ ಹಿಂದಿನ ಸರ್ಕಾರವು ವಿಫಲವಾಯಿತು. ಹಿಂದಿನ ಸರ್ಕಾರ ಕೈಚೆಲ್ಲಿ ಕೂತಿದ್ದರ ಪರಿಣಾಮವಾಗಿ ಅಂತಿಮ ವರದಿಯ ಶಿಫಾರಸ್ಸಿನಲ್ಲಿಯೂ ಸಹ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅತಿ ಹೆಚ್ಚು ನಷ್ಟ ಅನುಭವಿಸಬೇಕಾಯಿತು. ರಾಜ್ಯದ ಜಿ.ಎಸ್.ಡಿ.ಪಿ ಲೆಕ್ಕಾಚಾರ ಮಾಡುವ ವಿಧಾನದಲ್ಲಿ ಬದಲಾವಣೆ ಹಾಗೂ 1971ರ ಬದಲು 2011ರ ಜನಗಣತಿ ವರದಿಯ ಬಳಕೆಯಿಂದಾಗಿ ಅಭಿವೃದ್ಧಿಶೀಲ ರಾಜ್ಯಗಳಿಗೆ ಭಾರೀ ನಷ್ಟವುಂಟಾಗಿದೆ. 14ನೇ ಹಣಕಾಸು ಆಯೋಗ ಶಿಫಾರಸ್ಸು ನೀಡಿದ್ದ ಹಂಚಿಕೆಯ ಸೂತ್ರವನ್ನು ಪಾಲಿಸಿದ್ದರೆ ಕರ್ನಾಟಕ ರಾಜ್ಯಕ್ಕೆ 2,77,350 ಕೋಟಿ ರೂ.ಗಳ ತೆರಿಗೆ ಪಾಲು ಸ್ವೀಕೃತವಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಿಂದ ರಾಜ್ಯಕ್ಕೆ 2,15,253 ಕೋಟಿ ರೂ.ಗಳು ಮಾತ್ರ ಹಂಚಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.
15ನೇ ಹಣಕಾಸು ಆಯೋಗದ ಆರು ವರ್ಷದ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ಒಟ್ಟು ತೆರಿಗೆ ಹಂಚಿಕೆಯಲ್ಲಿ, ರಾಜ್ಯಕ್ಕೆ 62,098 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 15ನೇ ಹಣಕಾಸು ಆಯೋಗವು ಮೊದಲನೆಯ ವರದಿಯಲ್ಲಿ 2020-21ನೇ ವರ್ಷಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಒದಗಿಸುವಂತೆ ಹಾಗೂ ಅಂತಿಮ ವರದಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 6,000 ಕೋಟಿ ರೂ. ರಾಜ್ಯ ಕೇಂದ್ರಿತ ಅನುದಾನವನ್ನು ಶಿಫಾರಸ್ಸು ಮಾಡಿತ್ತು. ಆದರೆ ಈ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರವು ತಿರಸ್ಕರಿಸಿರುತ್ತದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಎಂದು ಹೇಳಿಕೊಳ್ಳುವ ಸರ್ಕಾರ ಇದ್ದರೂ ಸಹ ಕೇಂದ್ರದಿಂದ ಒಟ್ಟು 11,495 ಕೋಟಿ ರೂ.ಗಳ ವಿಶೇಷ ಅನುದಾನ ಪಡೆಯುವಲ್ಲಿ ಹಿಂದಿನ ಸರ್ಕಾರವು ಅಸಮರ್ಥವಾಗಿರುತ್ತದೆ. 15ನೇ ಹಣಕಾಸು ಆಯೋಗಕ್ಕೆ ಸರಿಯಾದ ವಿಶ್ಲೇಷಣೆಯೊಂದಿಗೆ ಜ್ಞಾಪನಾ ಪತ್ರದ ಮೂಲಕ ಹಕ್ಕೊತ್ತಾಯ ಮಂಡಿಸಿದ್ದರೂ, ರಾಜ್ಯಕ್ಕೆ ನ್ಯಾಯ ಸಿಕ್ಕಿರುವುದಿಲ್ಲ. ಈ ಅನ್ಯಾಯವು ಮರುಕಳಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಸಚಿವ ಸಂಪುಟದ ಮಾರ್ಗದರ್ಶನದೊಂದಿಗೆ ವಿಷಯ ತಜ್ಞರನ್ನು ಒಳಗೊಂಡ ತಾಂತ್ರಿಕಕೋಶವನ್ನು ರಚಿಸಿ ರಾಜ್ಯಕ್ಕೆ ಹೆಚ್ಚು ತೆರಿಗೆ ಪಾಲು ಮತ್ತು ಅನುದಾನಗಳನ್ನು ಪಡೆಯಲು ಒಂದು ಜ್ಞಾಪನಾ ಪತ್ರವನ್ನು ಸಿದ್ಧಪಡಿಸಿ ಸಮರ್ಥವಾದ ಮತ್ತು ವೈಜ್ಞಾನಿಕವಾಗಿ ವಿಶ್ಲೇಷಿಸಿದ ಅಂಕಿಅಂಶಗಳೊಂದಿಗೆ 16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರವು ಸೆಸ್ ಮತ್ತು ಸರ್‍ಚಾಜ್‍ಗಳನ್ನು ಹೆಚ್ಚಿಸುತ್ತಿದ್ದು, ಅವುಗಳನ್ನು ರಾಜ್ಯಗಳೊಂದಿಗೆ ಹಂಚಿಕೆ ಮಾಡುವುದಿಲ್ಲ.
ಕೇಂದ್ರ ಸರ್ಕಾರವು ವಿಧಿಸುವ ಸೆಸ್ ಮತ್ತು ಸರ್ ಚಾರ್ಜ್‍ಗಳು 2017-18 ರಿಂದ 2023-24ರ ಅವಧಿಯಲ್ಲಿ ಶೇ.153 ರಷ್ಟು ಹೆಚ್ಚಾಗಿರುತ್ತದೆ. ಸೆಸ್ ಮತ್ತು ಸರ್ ಚಾರ್ಜ್ ಗಳನ್ನು ರಾಜ್ಯಗಳೊಂದಿಗೆ ಹಂಚಿಕೆ ಮಾಡಿದ್ದರೆ, ರಾಜ್ಯಗಳಿಗೆ ಒಟ್ಟು 11,34,301 ಕೋಟಿ ರೂ.ಗಳು ಹಂಚಿಕೆಯಾಗುತ್ತಿತ್ತು. ಇದರಿಂದ ಕರ್ನಾಟಕ ರಾಜ್ಯಕ್ಕೆ ಮಾತ್ರ ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 45,322 ಕೋಟಿ ರೂ.ಗಳ ನಷ್ಟ ಉಂಟಾಗಿದೆ. ಜಿ.ಎಸ್.ಟಿ.ಯ ಅವೈಜ್ಞಾನಿಕ ಅನುμÁ್ಠನ, ಸೆಸ್ ಮತ್ತು ಸರ್ ಚಾರ್ಜ್ ಗಳ ಹೆಚ್ಚಳ ಮತ್ತು ತೆರಿಗೆ ಹಂಚಿಕೆಯ ಸೂತ್ರ ಬದಲಾವಣೆ - ಕೇಂದ್ರ ಸರ್ಕಾರದ ಈ ಮೂರು ಬಗೆಯ ಅನ್ಯಾಯಗಳಿಂದ ಹಾಗೂ ನ್ಯಾಯಯುತವಾಗಿ ರಾಜ್ಯಗಳಿಗೆ ಹಣ ಬಿಡುಗಡೆ ಮಾಡದ ಕಾರಣದಿಂದಾಗಿ ದೇಶದ ಎಲ್ಲಾ ರಾಜ್ಯಗಳ ಹಣಕಾಸು ಸಾಮಥ್ರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕೇಂದ್ರದಲ್ಲಿ ಆಡಳಿತದಲ್ಲಿರುವ ಪಕ್ಷವೇ, ದೇಶದ ಹಲವು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಕಾರಣ ಅವರಿಗೆ ಈ ಅನ್ಯಾಯಗಳ ವಿರುದ್ಧ ದನಿಯೆತ್ತಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿಯೆತ್ತಿ, ರಾಜ್ಯಗಳ ಹಕ್ಕಿನ ರಕ್ಷಣೆ ಮಾಡುವ ಹೊಣೆಗಾರಿಕೆ ನಮ್ಮದಾಗಿದೆ ಎಂದು ತಿಳಿಸಿದರು.
ಬೆಲೆ ಏರಿಕೆ, ನಿರುದ್ಯೋಗ ಮತ್ತು ಆದಾಯದ ಅಸಮಾನತೆಗಳಿಂದ ರಾಷ್ಟ್ರದ ಜನತೆ ತತ್ತರಿಸಿದ್ದು, ಬಡವರಿಗೆ ನೇರವಾಗಿ ಪ್ರಯೋಜನವಾಗುವ ಕಲ್ಯಾಣ ಯೋಜನೆಗಳಿಗೆ ಆಯವ್ಯಯ ಹಂಚಿಕೆಯನ್ನು ಹೆಚ್ಚಿಸುವುದು ರಾಜ್ಯದ ಕರ್ತವ್ಯವಾಗಿದೆ. ರಾಜಸ್ವ ಕೊರತೆಯಲ್ಲಿ ಹೆಚ್ಚಳವಾದರೂ ಸಹ, ಅಭಿವೃದ್ಧಿಯ ಫಲಗಳು ಬಡಜನತೆಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಅಂತಹ ಕಲ್ಯಾಣ ವೆಚ್ಚಗಳು ಅವಶ್ಯಕ. ಸಂಕಷ್ಟದ ಸಮಯದಲ್ಲಿ ಬಡವರು ಮತ್ತು ನಿರ್ಗತಿಕರ ನೆರವಿಗೆ ರಾಜ್ಯ ಸರ್ಕಾರ ಬರದಿದ್ದರೆ ರಾಜಸ್ವ ಹೆಚ್ಚುವರಿ ಸಾಧನೆಯು ಅರ್ಥಹೀನವಾಗಿರುತ್ತದೆ. ಈ ಹಿನ್ನಲೆಯಲ್ಲಿ, ನಾವು ರಾಜಸ್ವ ಕೊರತೆಯ ಆಯವ್ಯಯವನ್ನು ಮಂಡಿಸಿದ್ದರೂ ಸಹ, 2024-25ರ ಆಯವ್ಯಯದಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ 1,20,373 ಕೋಟಿ ರೂ.ಗಳ ಅನುದಾನವನ್ನು ಹಂಚಿಕೆ ಮಾಡಿರುತ್ತೇವೆ. ಅಲ್ಲದೆ ಬಂಡವಾಳ ವೆಚ್ಚಕ್ಕೆ ಅನುದಾನದ ಕೊರತೆ ಉಂಟಾಗದಂತೆ, ನಾವು ವಿತ್ತೀಯ ಕೊರತೆಯನ್ನು ಜಿ.ಎಸ್.ಡಿ.ಪಿ.ಯ ಶೇ.3 ರೊಳಗೆ ಮತ್ತು ಒಟ್ಟು ಬಾಕಿಯಿರುವ ಹೊಣೆಗಾರಿಕೆಗಳನ್ನು ಜಿ.ಎಸ್.ಡಿ.ಪಿ.ಯ ಶೇ.25ರೊಳಗೆ ಕಾಯ್ದುಕೊಳ್ಳುವ ಮೂಲಕ ವಿತ್ತೀಯ ಹೊಣೆಗಾರಿಕೆಯನ್ನು ಪಾಲಿಸಿರುತ್ತೇವೆ ಎಂದು ನುಡಿದರು.
ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು; ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು. ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು. ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು. ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು. ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು ಎಂದು ತಿಳಿಸಿದರು.
ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುμÁ್ಠನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು. ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು. ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ 1,000 ದಂತೆ ಒಟ್ಟು 5,000 ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು ಎಂದರು.
ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ರೈತರಿಗೆ ಕೀಟ, ರೋಗ ಮತ್ತು ಪೆÇೀಷಕಾಂಶ ನಿರ್ವಹಣೆಯ ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ ಇ- ಸ್ಯಾಪ್ ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು. ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಲಾಗುವುದು.ಎಂದು ತಿಳಿಸಿದರು.
ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು. ರಾಜ್ಯದಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತರ ನಿರ್ವಹಣಾ ಕೇಂದ್ರ ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಏμÁ್ಯದಲ್ಲಿಯೇ ಅತಿ ಹೆಚ್ಚು ರೇμÉ್ಮಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇμÉ್ಮ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ರೇμÉ್ಮ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇμÉ್ಮಗೆ ಪೆÇ್ರೀತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ. ಒದಗಿಸಲಾಗುವುದು. ಬೈವೋಲ್ಟೀನ್ ರೇμÉ್ಮಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪೆÇ್ರೀತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು ಎಂದರು.
ಈ ಆಯವ್ಯಯದಲ್ಲಿ ಘೋಷಿಸಲಾದ ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಈ ಕೆಳಕಂಡ ಯೋಜನೆಗಳನ್ನು ಜಾರಿಗೊಳಿಸಲಾಗುವುದು; ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. ಅಮೃತ ಮಹಲ್/ ಹಳ್ಳಿಕಾರ್/ ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕøಷ್ಟ ಕರುಗಳನ್ನು ಒದಗಿಸಲಾಗುವುದು. ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪೆÇ್ರೀತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡಲಾಗುವುದು. ಹಂದಿ ಮತ್ತು ಕೋಳಿ ಸಾಕಾಣಿಕೆಯನ್ನು ಪೆÇ್ರೀತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುμÁ್ಠನಗೊಳಿಸಲಾಗುವುದು; ಹೊನ್ನಾವರ ತಾಲ್ಲೂಕಿನ ಮಂಕಿ/ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ. ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ. ಆಕ್ವಾ ಪಾರ್ಕ್‍ಗಳ ಸ್ಥಾಪನೆ. ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ. ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ. ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿμÉೀಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು.
ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು. 2024-25ನೇ ಸಾಲಿನಲ್ಲಿ 10,000 ವಸತಿರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.
ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ.
ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು. ಈ ಯೋಜನೆಯಡಿಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು 132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮವಾಗಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಸುಮಾರು 57,000 ರೈತರಿಗೆ ಅನುಕೂಲವಾಗಲಿದೆ. ಇದರಿಂದ ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿರುವುದರಿಂದ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ. ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.
ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳನ್ನು ನಿರ್ಮಿಸಲಾಗುವುದು.ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಮತ್ತು ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣವನ್ನು ಸ್ಥಾಪಿಸಲಾಗುವುದು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟೈಜ್ ಮಾಡಲಾಗುವುದು. ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿ.ಎನ್.ಜಿ. ಪ್ಲಾಂಟ್ ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು. ಎ.ಪಿ.ಎಂ.ಸಿ ಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಹಾಗೂ ಪೆಟ್ರೋಲ್‍ಬಂಕ್ ಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುμÁ್ಠನಕ್ಕಾಗಿ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪ ವಿಭಾಗಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಈ ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥವಾಗಿ ನೀರು ಹರಿಸಿ ಚಾಲನೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲಾಗುವುದರ ಜೊತೆ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯ ಅನುμÁ್ಠನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24ನೇ ಸಾಲಿನ ಆಯವ್ಯಯದಲ್ಲಿ 5,300 ಕೋಟಿ ರೂ. ಅನುದಾನ ಘೋಷಿಸಿಲಾಗಿತ್ತು. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿರುವುದಿಲ್ಲ. ಹಾಗೆಯೇ ಹಿಂದಿನ ರಾಜ್ಯ ಸರ್ಕಾರ ತನ್ನ ಆಯವ್ಯಯ ಘೋಷಣೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾನ್ಯತೆ ನೀಡಲಾಗುತ್ತಿರುವುದರಿಂದ ಮಾನ್ಯ ಪ್ರಧಾನಮಂತ್ರಿಗಳಿಗೆ ಅಭಿನಂದನೆಗಳನ್ನು ತಿಳಿಸಲಾಗಿತ್ತು, ಆದರೆ ಈವರೆಗೆ ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರವು ಘೋಷಿಸದೆ ಇರುವುದರಿಂದ ಇದು ಹುಸಿಯಾದ ಘೋಷಣೆಯಾಗಿದೆ.
ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯಡಿ ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮಥ್ರ್ಯ ಕಲ್ಪಿಸಲು ಯೋಜಿಸಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ಪ್ರತಿಷ್ಠಿತ ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಿಸುವ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯನ್ನು (ವಾಲ್ಮಿ) ಪ್ರಸಕ್ತ ಸಾಲಿನಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಇನ್ ವಾಟರ್ ಮ್ಯಾನೇಜ್‍ಮೆಂಟ್ ಆಗಿ ಉನ್ನತೀಕರಿಸಲಾಗುವುದು. ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್‍ಗಳನ್ನು ಸ್ಥಾಪಿಸುವ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪದ ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ ರಿವರ್ ಫ್ರಂಟ್ ಡೆವಲಫ್‍ಮೆಂಟ್ ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು. ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟಿ ರೂ. ಮೊತ್ತದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು. ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (ಎಸ್.ಡಿ.ಎಂ.ಎಫ್) ಯೋಜನೆ ರೂಪಿಸಲಾಗುವುದು.
ಮಳೆಯ ಕೊರತೆಯಿಂದಾಗಿ ಸಣ್ಣ ನೀರಾವರಿ ಕೆರೆಗಳ ವಿನ್ಯಾಸಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರು ದೊರೆಯುತ್ತಿಲ್ಲ. ಅಲ್ಲದೆ, ಕುಡಿಯುವ ನೀರಿಗೂ ತೊಂದರೆಯಾಗುತ್ತಿದೆ. ಇಂತಹ ಕೆರೆಗಳನ್ನು ಸಮೀಪದ ಜೀವನದಿಗಳಿಂದ ತುಂಬಿಸಲು ಯೋಜನೆಗಳನ್ನು ಕೈಗೊಳ್ಳಲು ಗಣನೀಯ ಪ್ರಮಾಣದ ವೆಚ್ಚ ಮಾಡಲಾಗಿದೆ. ಈ ಯೋಜನೆಗಳಿಂದಾಗಿ ಸ್ಥಳೀಯ ಅಂತರ್ಜಲ ಮಟ್ಟದ ವಸ್ತುಸ್ಥಿತಿ, ಸುತ್ತಲಿನ ರೈತರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳ ಆಧಾರದಲ್ಲಿ ಮೌಲ್ಯಮಾಪನ ಕಾರ್ಯ ಕೈಗೊಳ್ಳಲಾಗುವುದು.
ಕುಡಿಯುವ ನೀರು, ಕೃಷಿ ಹಾಗೂ ಕೈಗಾರಿಕೆಗಳಿಗೆ ನೀರನ್ನು ಸಮರ್ಪಕವಾಗಿ ಪೂರೈಸಲು ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ಮತ್ತು ಬ್ರಿಡ್ಜ್ ಕಂ ಬ್ಯಾರೇಜ್ ನಂತಹ 115 ಕಾಮಗಾರಿಗಳನ್ನು 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು; ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮಥ್ರ್ಯ ಹೆಚ್ಚಿಸಲು ಜೆ-ಪಾಲ್ ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಥ್ರ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು. 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾμÁ ಮಾಧ್ಯಮ (ಕನ್ನಡ ಮತ್ತು ಇಂಗ್ಲೀμï) ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದರು.
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.
ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ, ರಾಜ್ಯದ ಅಸ್ಮಿತೆ ಮತ್ತು ಸಂಸ್ಕøತಿಗೆ ಅನುಗುಣವಾಗಿ, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿದೆ. ಆಯೋಗವು ಶೀಘ್ರದಲ್ಲಿಯೇ ವರದಿಯನ್ನು ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುμÁ್ಠನಗೊಳಿಸಲಾಗುವುದು ಎಂದು ತಿಳಿಸಿದರು.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡುತ್ತಾ ಬಂದಿದೆ. ಹಿಂದಿನ ಅಧಿಕಾರಾವಧಿಯಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಮಹತ್ತರ ತೀರ್ಮಾನವನ್ನು ಕೈಗೊಂಡಿತ್ತು. ಇದೀಗ ಇನ್ನೊಂದು ಹೆಜ್ಜೆ ಮುಂದಿಡುತ್ತಾ ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂ. ಅನುದಾನ ಒದಗಿಸಲಾಗುವುದು.
2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ 250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ ಒದಗಿಸಲಾಗುವುದು. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಅಗತ್ಯತೆಗನುಗುಣವಾಗಿ ತುಂಬಲಾಗುವುದು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು ಎಂದರು.
ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (Uಗಿಅಇ) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ಸ್ಥಾಪಿಸಲಾಗುವುದು.
ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮಥ್ರ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಕೆ.ಆರ್.ಡಿ.ಬಿ ಮೂಲಕ ಸ್ಥಾಪಿಸಲಾಗುವುದು. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲ್ಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು.
ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮೆಮೋಗ್ರಾಫಿ ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪೋಸ್ಕೋಪಿ ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯದಲ್ಲಿಯೂ ವ್ಯಾಪಕ ಬೆಳವಣಿಗೆ ಹೊಂದಿರುವುದರಿಂದ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು. 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆμÁಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
ಮೈಸೂರಿನಲ್ಲಿರುವ 40 ಹಾಸಿಗೆ ಸಾಮಥ್ರ್ಯದ ನೆಪ್ರೋ ಯೂರಾಲಜಿ ಆಸ್ಪತ್ರೆಯನ್ನು 100 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು. ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು. ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು ಹೆಲ್ತ್ ರೆಸ್ಫಿರೇಟರಿಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.
ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ ಎಪಿಎಲ್, ಬಿಪಿಎಲ್, ಎಎವೈ ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. 2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ.
ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮಥ್ರ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೆÇೀನ್‍ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.
ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,447 ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,121 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ.
ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ ಕ್ಲಾಸ್-3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
ಕ್ರೈಸ್ ಅಡಿಯಲ್ಲಿ 2023-24ನೇ ಸಾಲಿನಲ್ಲಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು.
ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 100 ರೂ. ನಂತೆ ಹೆಚ್ಚಿಸಲಾಗುವುದು.
ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿರುವುದರಿಂದ ಬೆಂಗಳೂರು ಪೂರ್ವ ಭಾಗದಲ್ಲಿ 500 ಸಂಖ್ಯೆಯ ಒಂದು ನಿರಾಶ್ರಿತರ ಪರಿಹಾರ ಕೇಂದ್ರವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ. 1 ರಿಂದ 5ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 6ನೇ ತರಗತಿ ಪ್ರಾರಂಭಿಸಲಾಗುವುದು. 1 ರಿಂದ 7ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 8ನೇ ತರಗತಿಯನ್ನು ಪ್ರಾರಂಭಿಸಲಾಗುವುದು. ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25 ರಿಂದ 40ಕ್ಕೆ ಹೆಚ್ಚಿಸಲಾಗುವುದು. ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಇಲ್ಲದಿರುವ 7 ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡರಂತೆ 100 ಸಂಖ್ಯಾಬಲದ ಬಾಲಕ/ಬಾಲಕಿಯರ 14 ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 4 ಕ್ರಮಗಳನ್ನು ಕೈಗೊಳ್ಳಲಾಗುವುದು; 100 ಸಂಖ್ಯಾಬಲದ ಮೆಟ್ರಿಕ್ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಆಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸಲಾಗುವುದು.
ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಲು 'ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗ' ರಚಿಸಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,600 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುμÁ್ಠನಗೊಳಿಸಲಾಗುವುದು.
ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು; 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಪ್ರಾರಂಭಿಸಲಾಗುವುದು. ವಿದ್ಯಾರ್ಥಿನಿಲಯಗಳನ್ನು 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು. ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.
ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನಸಿರ್ಂಗ್/ ಜಿ.ಎನ್.ಎಂ ನಸಿರ್ಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು.
ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು. ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು. ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾμÉಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.
ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು.
ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.
ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ ಐದು ಕೆ.ಜಿ. ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಅಸಹಕಾರ ಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ.ನಂತೆ ಪ್ರತಿ ಮಾಹೆ 170 ರೂ. ನೇರ ನಗದು ವರ್ಗಾವಣೆ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ. ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.
ಅನ್ನ–ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.
ಸರ್ಕಾರವು ಪ್ಲಾಟ್‍ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಬದುಕಿನ ಭದ್ರತೆಗಾಗಿ ಫ್ಲಾಟ್‍ಪಾರಂ ಬೇಸ್ಡ್ ಗಿಗ್ ವರ್ಕ್‍ರ್ಸ್ ಫಂಡ್ ವೆಲ್ಫೆರ್ ಫೀ ಬಿಲ್ ಎಂಬ ಹೊಸ ವಿಧೇಯಕವನ್ನು ಜಾರಿಗೆ ತರಲಿದೆ. ತನ್ಮೂಲಕ ಅರ್ಹ ಆನ್-ಲೈನ್ ವಹಿವಾಟುಗಳ ಮೇಲೆ ಸೆಸ್ ವಿಧಿಸಿ ಗಿಗ್ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.
ಇ.ಎಸ್.ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆμÁಲಿಟಿ ಸೇವೆಗಳು, ಫಾಯಿಂಟ್ ಆಫ್ ಮೊಬೈಲ್ ಡಿಜಿಟಲ್ ಡಯಾಗ್ನಸ್ಟಿಕ್ ಕಿಯೋಸ್ಕ್, ಮೊಬೈಲ್ ಹೆಲ್ತ್ ಯುನಿಟ್ 40 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಸಮಗ್ರ ಆರೋಗ್ಯ ತಪಾಸಣೆ, ಎಲ್ಲಾ ವಿಮಾದಾರರಿಗೆ ಟೆಟ್‍ನಸ್ ಮತ್ತು ಹೆಪಾಟಿಟಿಸ್ ಲಸಿಕೆ ಕಾರ್ಯಕ್ರಮ ಹಾಗೂ ಅತ್ಯಾಧುನಿಕ ರೋಗಪತ್ತೆ ಹಚ್ಚುವ ಕೇಂದ್ರ ಸ್ಥಾಪನೆ ಮುಂತಾದ ಯೋಜನೆಗಳನ್ನು ಅನುμÁ್ಠನಗೊಳಿಸಲಾಗುವುದು.
ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪೆÇ್ಲಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಡಿಬಿಟಿ ಮೂಲಕ ನೆರವು ವರ್ಗಾಯಿಸಲಾಗುತ್ತಿದೆ.
ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು.
ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ನಿಯುಕ್ತಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂವಹನ ಕೌಶಲ್ಯ ತರಬೇತಿಯನ್ನು 5 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು. ಇದರಿಂದ ಸುಮಾರು 40,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳಿಗೆ ಪ್ರಯೋಜನವಾಗಲಿದೆ.
ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ 50,000 ಎಸ್.ಹೆಚ್.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳನ್ನು ಎರಡು ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.
ಐ.ಐ.ಎಂ-ಬಿ ಸಹಯೋಗದೊಂದಿಗೆ ಎಲ್ಲಾ 31 ಜಿಲ್ಲೆಗಳಲ್ಲಿ ಉದ್ಯಮಿಗಳನ್ನು ಉತ್ತೇಜಿಸಲು ಜಿಲ್ಲಾ ಮಟ್ಟದ ಇನ್‍ಕ್ಯೂಬೇಶನ್ ಕೇಂದ್ರಗಳನ್ನು (ಡಿ.ಎಲ್.ಐ.ಸಿ) ಹಂತ ಹಂತವಾಗಿ ಸ್ಥಾಪಿಸಲಾಗುವುದು. ಮೊದಲನೇ ಹಂತದಲ್ಲಿ ಆಯ್ದ 10 ಜಿಲ್ಲೆಗಳಲ್ಲಿ ಇನ್‍ಕ್ಯೂಬೇಶನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಕ್ಕುಟ, ಕುರಿ ಮತ್ತು ಮೇಕೆ ಸಾಕಾಣಿಕೆ, ಜೇನು ಸಾಕಾಣಿಕೆ ಸಂಬಂಧಿಸಿದ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು 100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು.
ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ ಜಿ.ಪಿ.-ಎಸ್.ಹೆಚ್.ಜಿ ಒಗ್ಗೂಡಿಸುವಿಕೆಯ ನೀತಿಯನ್ನು ಜಾರಿಗೊಳಿಸಲಾಗುವುದು.
ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ಪ್ರಗತಿ ಪಥ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸಲಾಗುವುದು. ಈ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ಉದ್ದದ ರಸ್ತೆಗಳಂತೆ, ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲವನ್ನು 5,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಕರ್ನಾಟಕದಲ್ಲಿ ಗ್ರಾಮ ಪಂಚಾಯತಿಗಳು ಆರೋಗ್ಯ ರಕ್ಷಣೆ, ಘನತ್ಯಾಜ್ಯ ನಿರ್ವಹಣೆ, ಗ್ರಂಥಾಲಯ ನವೀಕರಣ ಮುಂತಾದ ಕ್ಷೇತ್ರಗಳಲ್ಲಿ ನಾಯಕತ್ವದ ಸಾಮಥ್ರ್ಯವನ್ನು ಪ್ರದರ್ಶಿಸಿವೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸಾಮಾಜಿಕ ಕಳಕಳಿಯುಳ್ಳ ಸ್ಪಂದನಾಶೀಲ ಹಾಗೂ ಸಮರ್ಥ ಗ್ರಾಮ ಸರ್ಕಾರಗಳನ್ನಾಗಿ ರೂಪಿಸಲು ಕ್ರಮವಹಿಸಲಾಗುವುದು.
ಅರಿವು ಕೇಂದ್ರಗಳನ್ನು ಬಲಪಡಿಸುವ ದೃಷ್ಠಿಯಿಂದ 132 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು ಮತ್ತು ಪುಸ್ತಕಗಳು, ಡಿಜಿಟಲ್ ಉಪಕರಣಗಳು ಹಾಗೂ ವಿಕಲಚೇತನ ಸ್ನೇಹಿ ಉಪಕರಣಗಳನ್ನು ಖರೀದಿಸಲಾಗುವುದು ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು. ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿ ಸ್ವತ್ತುಗಳ ಂsseಣ ಒoಟಿeಣisಚಿಣioಟಿ ನೀತಿಯನ್ನು ಜಾರಿಗೆ ತರಲಾಗುವುದು. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಅನ್ನು ಪ್ರಾರಂಭಿಸಲಾಗುವುದು. ಸೇವಾ ಸಿಂಧು ಪೆÇೀರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲಾಗುವುದು ಎಂದರು
ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ–ಉಪಶಮನ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಪ್ರೇರಣಾ ಕಾರ್ಯಕ್ರಮದಡಿ ಸ್ವಸಹಾಯ ಗುಂಪುಗಳ ಮಹಿಳೆಯರು, ಗ್ರಾಮ ಪಂಚಾಯಿತಿಗಳ ಮಹಿಳಾ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದ ಮುಂಚೂಣಿಯ ಕಾರ್ಯಕರ್ತೆಯರಲ್ಲಿ ಮೆನ್‍ಸ್ಟ್ರಲ್ ಕಫ್ ಬಳಕೆಯನ್ನು ಪೆÇ್ರೀತ್ಸಾಹಿಸಲಾಗುವುದು. ಇದರ ಮೂಲಕ ಗ್ರಾಮದ ಇತರೆ ಮಹಿಳೆಯರನ್ನು ಇವುಗಳನ್ನು ಬಳಕೆ ಮಾಡಲು ಪ್ರೇರೇಪಿಸಲಾಗುವುದು. ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುವುದು. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಲಕ್ಷ ರೂ. ನೆರವಿನೊಂದಿಗೆ ಎಸ್.ಹೆಚ್.ಜಿ.ಗಳ ಸಹಯೋಗದೊಂದಿಗೆ ಎಣ್ಣೆ ಗಾಣವನ್ನು ಸ್ಥಾಪಿಸಲಾಗುವುದು.
ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪೆÇ್ರೀತ್ಸಾಹಧನವನ್ನು 2,000 ರೂ.ಗಳಿಗೆ ಹೆಚ್ಚಿಸಲಾಗುವುದು. ಈ ಪಿಡುಗಿನ ಪರಿಣಾಮಕಾರಿ ನಿರ್ಮೂಲನೆಗೆ ಪೂರಕವಾಗಿ ಸಂಬಂಧಪಟ್ಟ ಇಲಾಖೆಗಳ ಕ್ಷೇತ್ರಮಟ್ಟದ ಅಧಿಕಾರಿಗಳನ್ನು ಜೀತ ಕಾರ್ಮಿಕ ನಿμÉೀಧ ಅಧಿಕಾರಿಗಳಾಗಿ ಅಧಿಸೂಚಿಸಲಾಗುವುದು.
2024-25 ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲು 5,000 ಕೋಟಿ ರೂ.ಗಳ ಯೋಜನೆಗಳನ್ನು ಅನುμÁ್ಠನಗೊಳಿಸಲು ಉದ್ದೇಶಿಸಲಾಗಿದೆ. ಡಾ|| ಡಿ.ಎಂ. ನಂಜುಂಡಪ್ಪ ವರದಿಯನ್ನು 2002 ರಲ್ಲಿ ಸಲ್ಲಿಸಲಾಗಿದ್ದು, ಕಳೆದ 22 ವರ್ಷಗಳಲ್ಲಿ ಈ ವರದಿಯ ಆಧಾರದ ಮೇಲೆ ಹಿಂದುಳಿದ ಪ್ರದೇಶಗಳಲ್ಲಿ ಅಸಮತೋಲನೆಯನ್ನು ನಿವಾರಿಸಲು ಬಹಳಷ್ಟು ಯೋಜನೆಗಳನ್ನು ಮತ್ತು ಬಂಡವಾಳ ಹೂಡಿಕೆಯನ್ನು ಮಾಡಲಾಗಿದೆ. ಇದರಿಂದ ಆಗಿರುವ ಬದಲಾವಣೆಗಳು ಮತ್ತು ಪರಿಣಾಮಗಳನ್ನು ಅಧ್ಯಯನ ಮಾಡಲು ಪ್ರಸಕ್ತ ಸಾಲಿನಲ್ಲಿ ಒಂದು ಉನ್ನತಾಧಿಕಾರಿ ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿಯ ಮೂಲಕ ಪ್ರಸ್ತುತ ರಾಜ್ಯದಲ್ಲಿನ ಆರ್ಥಿಕ ಮತ್ತು ಪ್ರಾದೇಶಿಕ ಅಸಮಾನತೆಯ ಆಧಾರದ ಮೇಲೆ ಜಿಲ್ಲೆ ಮತ್ತು ತಾಲ್ಲೂಕುಗಳನ್ನು ವರ್ಗೀಕರಿಸಿ ಹೊಸ ಅಭಿವೃದ್ಧಿ ಸೂಚ್ಯಂಕಗಳನ್ನು ತಯಾರಿಸಲಾಗುವುದು ಎಂದರು.
ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ. ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೊಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ.
2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ ದಾಖಲೆಯ ತೆರಿಗೆ ಸಂಗ್ರಹ ಮಾಡುವತ್ತ ಮುನ್ನಡೆದಿದೆ. ಇದು 2022-23ನೇ ಸಾಲಿಗಿಂತ 1,000 ಕೋಟಿ ರೂ. ಗಳಷ್ಟು ಹೆಚ್ಚಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ನಿರೀಕ್ಷೆ ಇದೆ. ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Pಡಿemium ಈಂಖ ನೀತಿಯನ್ನು ಜಾರಿಗೆ ತರುವ ಮೂಲಕ ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೇ ಸಾಲಿನಿಂದ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಲಾಗುವುದು ಎಂದು ತಿಳಿಸಿದರು.
ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (ಟನಲ್) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ಅನ್ನು ನಿರ್ಮಿಸಲಾಗುವುದು. ನಾಲಾ ಬಫರ್ ವಲಯದೊಳಗೆ ನಾಲಾ ಬಫರ್ ಅನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ ಹೊಸ ಪರಿಕಲ್ಪನೆಯನ್ನು ಅನುμÁ್ಠನಗೊಳಿಸಲಾಗುತ್ತಿದೆ.
ಸುಗಮ ಸಂಚಾರ-ಬ್ರಾಂಡ್ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಡಿ 73 ಕಿ.ಮೀ. ಉದ್ದದ ರಸ್ತೆಯನ್ನು 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು ಖಈP ಕರೆಯಲಾಗಿದೆ. ಈ ಯೋಜನೆಯನ್ನು ಇದೇ ಸಾಲಿನಲ್ಲಿ ಪ್ರಾರಂಭ ಮಾಡಲು ಉದ್ದೇಶಿಸಿದೆ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ-ಡೆಕ್ ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ವಾಸ್ತುವಿನ್ಯಾಸಗಾರರನ್ನು ಆಹ್ವಾನಿಸಿದೆ. ಇದರಿಂದ ನಗರದ ಒಳಗೆ ಆಕರ್ಷಕವಾದ ಪ್ರವಾಸಿ ತಾಣವನ್ನು ಸೃಜಿಸಿದಂತಾಗುತ್ತದೆ. ದೇಶದ ಅತ್ಯುತ್ತಮ ಮೆಟ್ರೋ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ನಮ್ಮ ಮೆಟ್ರೋ ರೈಲು ಯೋಜನೆಯು ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿದೆ. 8 ಲಕ್ಷಕ್ಕೂ ಹೆಚ್ಚಿನ ಜನರು ಪ್ರತಿನಿತ್ಯ ಮೆಟ್ರೋ ಸೇವೆಯನ್ನು ಬಳಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ.
ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿ ಕಾರ್ಯಾಚರಣೆಯು ಲಾಭದಾಯಕವಾಗಿ ಪರಿಣಮಿಸಿರುವುದು ಹೆಮ್ಮೆಯ ಸಂಕೇತವಾಗಿದೆ. ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆಯಲ್ಲಿದೆ. ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಕುರಿತು ಡಿ.ಪಿ.ಆರ್. ಕರಡು ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ 42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ವಿದ್ಯುತ್ ಚಾಲಿತ ಬಸ್ಸುಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು.
ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಹಿಳಾ ಸುರಕ್ಷತೆಯನ್ನು ಒಳಗೊಂಡ ವೆಹಿಕಲ್ ಟ್ರ್ಯಾಕಿಂಗ್ ಹೊಂದಿರುವ ಮೊಬೈಲ್ ಆಪ್ ಅನ್ನು ಅನುμÁ್ಠನಗೊಳಿಸಲಾಗುತ್ತಿದೆ. ನಗರದ ಅಭಿವೃದ್ಧಿಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳ ಜೊತೆಯಲ್ಲಿ ನಾಗರಿಕರ ಬದುಕಿನ ಗುಣಮಟ್ಟ ಸುಧಾರಣೆಗೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಉತ್ತಮ ಪರಿಸರ, 24x7 ಕುಡಿಯುವ ನೀರಿನ ಪೂರೈಕೆ ಮತ್ತು ಸ್ವಚ್ಛತೆಯ ನಿರ್ವಹಣೆಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ 775 ಎಂ.ಎಲ್.ಡಿ ಸಾಮಥ್ರ್ಯದ ಕಾವೇರಿ ಹಂತ-5 ಯೋಜನೆಯನ್ನು ಮೇ 2024 ರಲ್ಲಿ ಕಾರ್ಯಾರಂಭಗೊಳಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್ 2024 ರಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ 228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಅಳವಡಿಸಲಾಗುವುದು ಮತ್ತು 13 ಎಸ್.ಟಿ.ಪಿ ಘಟಕಗಳಿಂದ 100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಸಾಮಥ್ರ್ಯವನ್ನು ಸೃಜಿಸಲಾಗುವುದು. 07 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ) 441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಿಸಲಾಗುವುದು. ಇದರಿಂದ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ ಮಾಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು 200 ಕೋಟಿ ರೂ.ಗಳ ಮೊತ್ತದಲ್ಲಿ ಪ್ರಾರಂಭಿಸಲಾಗುವುದು. ಮನೆಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕಗಳವರೆಗೂ ತ್ಯಾಜ್ಯಗಳ ವಿಲೇವಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನನ್ನು ಗುರುತಿಸಿ ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು.
ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಲಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಫ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‍ಶಿಫ್ಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಬೆಂಗಳೂರಿನ ಬಿ.ಐ.ಇಸಿ ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆಯನ್ನು ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
ಕೇಂದ್ರ ಪುರಸ್ಕøತ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ಕೇಂದ್ರ ಸರ್ಕಾರದ ಪಾಲು 2,185 ಕೋಟಿ ರೂ.ಗಳನ್ನು ಒಳಗೊಂಡಂತೆ 5,072 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ನಮ್ಮ ಜಲ ಮೂಲಗಳನ್ನು ಮಲಿನಗೊಳಿಸುವ ದ್ರವ ತ್ಯಾಜ್ಯಗಳ ಸಂಸ್ಕರಣೆ, ಲೆಗೆಸಿ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡುವ ಮೂಲಕ ನಗರಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಾಣ ಮಾಡಲು ಒತ್ತು ನೀಡಲಾಗುವುದು ಎಂದು ತಿಳಿಸಿದರು.
ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು. ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು 3ಡಿ ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್ ಮತ್ತು ಮರು ಮೌಲ್ಯಮಾಪನವನ್ನು ಕೈಗೊಳ್ಳಲಾಗುವುದು. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸೇವೆಯನ್ನು ಪಡೆಯಲಾಗುವುದು.
ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ನೇರಪಾವತಿಯಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರಿಗೂ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮವಹಿಸಲಾಗುವುದು.
ಸಮರ್ಪಕ ಹಾಗೂ ಯೋಜಿತ ನಗರೀಕರಣಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲಾ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲು ಕ್ರಮಕೈಗೊಳ್ಳಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮಥ್ರ್ಯದಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಮುಂದಿನ 7 ವರ್ಷಗಳಲ್ಲಿ ಇಂಧನ ವಲಯಕ್ಕೆ ಹೆಚ್ಚಿನ ಬಂಡವಾಳವನ್ನು ಆಕರ್ಷಿಸುವ ಮೂಲಕ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮಥ್ರ್ಯವನ್ನು 32,000 ಮೆಗಾವ್ಯಾಟ್ ನಿಂದ 60,000 ಮೆಗಾವ್ಯಾಟ್ ಗಳಿಗೆ ಹೆಚ್ಚಿಸಲಾಗುವುದು.
ರಾಜ್ಯವು ಉತ್ಪಾದಿಸುತ್ತಿರುವ ವಿದ್ಯುತ್ತಿನ ಶೇ.63 ರಷ್ಟು ಇಂಧನವು ನವೀಕರಿಸಬಹುದಾದ ಇಂಧನದಿಂದ ಆಗಿರುತ್ತದೆ. ನಮ್ಮ ಸರ್ಕಾರದ ಸಕಾರಾತ್ಮಕ ನೀತಿಗಳಿಂದ ಈ ವಲಯದಲ್ಲಿ ಸಾವಿರಾರು ಕೋಟಿ ರೂ. ಖಾಸಗಿ ಹೂಡಿಕೆಯನ್ನು ಮಾಡಲಾಗುತ್ತಿದೆ. ಈ ನೀತಿಗಳನ್ನು ಇನ್ನಷ್ಟು ಹೂಡಿಕೆದಾರರ ಸ್ನೇಹಿಯನ್ನಾಗಿ ಮಾಡಲು ಕ್ರಮವಹಿಸಲಾಗುವುದು. ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಪಿ.ಎಂ. ಕುಸುಮ್ ಕಾಂಪೋನೆಂಟ್-ಬಿ ಯೋಜನೆಯಡಿ 1,174 ಕೋಟಿ ರೂ. ಅಂದಾಜು ವೆಚ್ಚದಲ್ಲಿ 40,000 ಜಾಲ ಮುಕ್ತ ಸೋಲಾರ್ ಪಂಪ್ ಸೆಟ್‍ಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30ರಷ್ಟಿದ್ದು, ರಾಜ್ಯ ಸರ್ಕಾರದ ವತಿಯಿಂದ ನೀಡುವ ಸಹಾಯಧನವನ್ನು ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಲಾಗಿದೆ.
ಕೃಷಿ ಪಂಪ್ಸೆಟ್ ಫೀಡರ್ ಸೌರೀಕರಣ ಯೋಜನೆ ಹಂತ-I ಅಡಿಯಲ್ಲಿ 1,320 ಮೆಗಾ ವ್ಯಾಟ್ ವಿಕೇಂದ್ರೀಕೃತ ಉತ್ಪಾದನೆಗೆ ಕ್ರಮವಹಿಸಲಾಗಿದೆ. ಇದರಿಂದ 3.37 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಇದಲ್ಲದೆ, ಹಂತ-II ಅಡಿಯಲ್ಲಿ 1,192 ಮೆಗಾ ವ್ಯಾಟ್ ಸೌರ ಯೋಜನೆಗಳನ್ನು ಅನುμÁ್ಠನಗೊಳಿಸುವ ಮೂಲಕ 4.30 ಲಕ್ಷ ಐ.ಪಿ. ಸೆಟ್‍ಗಳನ್ನು ಸೌರೀಕರಣಗೊಳಿಸಲು ಉದ್ದೇಶಿಸಲಾಗಿದೆ.
ಗ್ರೀನ್ ಹೈಡ್ರೋಜನ್ ಭವಿಷ್ಯದ ಇಂಧನ. ಖಾಸಗಿ ಬಂಡವಾಳವನ್ನು ಈ ವಲಯಕ್ಕೆ ಆಕರ್ಷಿಸಲು 300 ಕಿಲೋ ವ್ಯಾಟ್ ಸಾಮಥ್ರ್ಯದ ಗ್ರೀನ್ ಹೈಡ್ರೋಜನ್ ಸ್ಥಾವರವನ್ನು ಪ್ರಾಯೋಗಿಕವಾಗಿ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ಒಓಖಇ ನಿಧಿಯಿಂದ ಸ್ವಯಂ-ಸುಸ್ಥಿರ ಘಟಕದ ಆಧಾರದ ಮೇಲೆ ಏಖಇಆಐ ವತಿಯಿಂದ ಅನುμÁ್ಠನಗೊಳಿಸಲಾಗುವುದು ಮತ್ತು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸಲಾಗುವುದು.
ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಲು 2,500 ಇ.ವಿ. ಚಾರ್ಜಿಂಗ್ ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಅಲ್ಲದೇ, ವಿದ್ಯುತ್ ಸರಬರಾಜು ಕಂಪನಿಗಳ ಮೂಲಕ 35 ಕೋಟಿ ರೂ. ವೆಚ್ಚದಲ್ಲಿ 100 ಚಾಜಿರ್ಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಪ್ರಸಕ್ತ ಸಾಲಿನಲ್ಲಿ ಕೆಶಿಪ್-4 ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 875 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಯನ್ನು ಬಾಹ್ಯ ಹಣಕಾಸು ಸಂಸ್ಥೆಯ ನೆರವಿನೊಂದಿಗೆ 5,736 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದಲ್ಲಿನ 1,300 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳನ್ನು 4,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ-5ನ್ನು ಪ್ರಾರಂಭಿಸಲಾಗುವುದು.
ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು. ಬೆಂಗಳೂರು-ಮಂಡ್ಯ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದಲ್ಲಿರುವ ಜಂಕ್ಷನ್ನಲ್ಲಿ ವಾಹನ ಸಂಚಾರ ದಟ್ಟಣೆಯನ್ನು ನೀಗಿಸಲು ಎನ್.ಹೆಚ್.ಎ.ಐ ಸಹಯೋಗದೊಂದಿಗೆ ಮೇಲುಸೇತುವೆ ನಿರ್ಮಾಣ ಮಾಡಲಾಗುವುದು. ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲು ಹಾಗೂ ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.
ಸಮರ್ಪಿತ ಆರ್ಥಿಕ ಕಾರಿಡಾರ್ಗಳು ಆರ್ಥಿಕ ಅಭಿವೃದ್ಧಿಗೆ ಪೂರಕ ಮೂಲಸೌಕರ್ಯ ಜಾಲವನ್ನು ಒದಗಿಸುತ್ತವೆ. ರಾಜ್ಯದ ಮೂಲಕ ಹಾದು ಹೋಗುವ ಮುಂಬೈ-ಚೆನ್ನೈ ಕಾರಿಡಾರ್ನಲ್ಲಿ ನಾವು ಹಲವಾರು ಕೈಗಾರಿಕಾ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡಿದ್ದೇವೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಎರಡು ಆರ್ಥಿಕ ಕಾರಿಡಾರ್ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಒಂದು ಕಾರಿಡಾರ್ ಮಂಗಳೂರು ಬಂದರಿನಿಂದ ಬೆಂಗಳೂರು ವರೆಗೆ ಅಭಿವೃದ್ಧಿಪಡಿಸಲಾಗುವುದು. ಇದರಿಂದ ಬಂದರು ಸಂಪರ್ಕ ಸುಲಭವಾಗುವುದಲ್ಲದೆ, ಯುರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಕು ಸಾಗಾಣಿಕೆ ಅವಧಿ ಗಣನೀಯವಾಗಿ ಕಡಿಮೆಯಾಗಲಿದೆ. ಇನ್ನೊಂದು ಕಾರಿಡಾರ್ ಅನ್ನು ಬೀದರ್ ಹಾಗೂ ಬೆಂಗಳೂರು ನಡುವೆ ಅಭಿವೃದ್ಧಿಪಡಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಚುರುಕುಗೊಳಿಸಲಾಗುವುದು.
ರಾಜ್ಯದಲ್ಲಿ ಅನುμÁ್ಠನಗೊಳಿಸಲಾಗುತ್ತಿರುವ ಮೂಲಸೌಕರ್ಯ ಯೋಜನೆಗಳ ಪ್ರಗತಿ ಮೇಲ್ವಿಚಾರಣೆಗೆ ಹಾಗೂ ಎದುರಾಗುವ ಅಂತರ್ ಇಲಾಖಾ ಮತ್ತು ಹಣಕಾಸಿನ ತೊಡಕುಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಲಾಗುವುದು.
ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು. ಬಂದರು, ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ ಹೊಂದಿದ್ದೇವೆ.
ರಾಜ್ಯದಲ್ಲಿ ಜಲಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆಗಳನ್ನು ಆಕರ್ಷಿಸಲು, ಕರ್ನಾಟಕ ಜಲಸಾರಿಗೆ ಅಭಿವೃದ್ಧಿ ನೀತಿಯನ್ನು ಹಾಗೂ ಒಳನಾಡು ಜಲಸಾರಿಗೆ ನಿಯಮಗಳನ್ನು ರೂಪಿಸಲಾಗುವುದು. ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇವುಗಳ ಪೈಕಿ ರಾಜ್ಯದ ಪಾಲು 530 ಕೋಟಿ ರೂ.ಗಳಾಗಿದೆ. ಮುಂದುವರೆದು, ಇನ್ನೂ 1,145 ಕೋಟಿ ರೂ. ಮೊತ್ತದ 12 ಕಾಮಗಾರಿಗಳ ವಿಸ್ತøತ ಯೋಜನಾ ವರದಿಗಳನ್ನು ಕೇಂದ್ರದ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದರು.
ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 ಎಂ.ಟಿ.ಪಿ.ಎ ಸಾಮಥ್ರ್ಯದ ಮತ್ತು 4,200 ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು 3048 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತರಾಷ್ಟ್ರೀಯ ಟೆಂಡರ್ ಅನ್ನು ಕರೆಯಲಾಗಿದೆ. ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು ಬತ್ರ್ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ. ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ. ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.
ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಹಳೆ ಮಂಗಳೂರು ಮತ್ತು ಹಂಗಾರಕಟ್ಟೆ ಬಂದರುಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಹಡಗು ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಈ ವಲಯದಲ್ಲಿ ಇನ್ನೂ ಹೆಚ್ಚು ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರನ್ನು ಅಭಿವೃದ್ಧಿಪಡಿಸಲು ಐ.ಐ.ಟಿ. ಮದ್ರಾಸ್ ಸಹಯೋಗದೊಂದಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು. ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಅನ್ನು ತಯಾರಿಸಲಾಗುವುದು. ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 2023-24ನೇ ಸಾಲಿನಲ್ಲಿ 55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬಾಕಿ ಇರುವ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. 220 ಕೋಟಿ ರೂ. ವೆಚ್ಚದ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು. ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ಸಿಗ್ನೇಚರ್ ಬಿಸಿನೆಸ್ ಪಾಕ್ನಿರ್ಂದ ಹಣಕಾಸು, ಉದಯೋನ್ಮುಖ ತಂತ್ರಜ್ಞಾನ ವಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳಿಗೆ ಉತ್ತೇಜನ ದೊರೆಯಲಿದೆ. ಒಟ್ಟು 817 ಕೋಟಿ ರೂ. ಯೋಜನಾ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಮುಂದಿನ ದಿನಗಳಲ್ಲಿ 5,000 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ರೈಲ್ವೆ ಇಲಾಖೆಯೊಂದಿಗೆ ವೆಚ್ಚ ಹಂಚಿಕೆ ಆಧಾರದಲ್ಲಿ 12,147 ಕೋಟಿ ರೂ.ಗಳ 9 ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಯೋಜನೆಯ ಕಾಮಗಾರಿಗಳು ಹಾಗೂ ಭೂಸ್ವಾಧೀನಕ್ಕಾಗಿ 9,915 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಭರಿಸಲಿದೆ. 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ರೈಲ್ವೆ ಯೋಜನೆಗಳಿಗಾಗಿ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪಾಲನ್ನು ಕ್ಷಿಪ್ರಗತಿಯಲ್ಲಿ ಪಡೆದು ಆದ್ಯತೆಯನುಸಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಸರ್ಕಾರವು 2023-24ನೇ ಸಾಲಿನಲ್ಲಿ ಸುಮಾರು 88,150 ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸಿದೆ. ಎಲೆಕ್ಟ್ರಾನಿಕ್ ಸಿಸ್ಟಂ ಡಿಸೈನ್ ಅಂಡ್ ಮಾನ್ಯೂಫೆಕ್ಚರಿಂಗ್ ವಿದ್ಯುತ್ ಚಾಲಿತ ವಾಹನಗಳಿಗೆ ಲಿಥಿಯಂ ಅಯಾನ್ ಬ್ಯಾಟರಿ ತಯಾರಿಕೆ, ತಯಾರಿಕಾ ವಲಯ, ಆಟೊಮೊಬೈಲ್, ಡೇಟಾ ಸೆಂಟರ್ ಮತ್ತಿತರ ವಲಯಗಳಲ್ಲಿ ಈ ಹೂಡಿಕೆಗಳನ್ನು ಮಾಡಲಾಗುತ್ತಿದೆ.
ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ನಾಲೆಡ್ಜ್ ಹೇಲ್ತ್ ಕೇರ್ ಇನ್ನೋವೇಷನ್ ಅಂಡ್ ರಿಸರ್ಚ್ ಸಿಟಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದ್ದು, ಈ ಯೋಜನೆಯಿಂದ ಅಂದಾಜು 40,000 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ. ಕೈಗಾರಿಕಾ ಅಭಿವೃದ್ಧಿಯಲ್ಲಿ ಕರ್ನಾಟಕದ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಹಾಗೂ ಇನ್ನೂ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು.
ಯಶವಂತಪುರದಲ್ಲಿ ಕೆ.ಎಸ್.ಡಿ.ಎಲ್ ವತಿಯಿಂದ ಜಮೀನಿನಲ್ಲಿ ವಿವಿಧ ಸರ್ಕಾರಿ ಇಲಾಖೆಗಳನ್ನು ನಿರ್ವಹಿಸಲು ಸುಸಜ್ಜಿತ ಕಛೇರಿ ಸಂಕೀರ್ಣವನ್ನು ನಿರ್ಮಿಸಲಾಗುವುದು. ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಕೈಗಾರಿಕಾ ವಸಾಹತುಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ನಿಗಮದ ಮೂಲಕ ಮೇಲ್ದರ್ಜೆಗೇರಿಸಲಾಗುವುದು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಬೆಂಗಳೂರು-ಮುಂಬಯಿ ಎಕನಾಮಿಕ್ ಕಾರಿಡಾರ್ ಯೋಜನೆಯಡಿ ಧಾರವಾಡ ಸಮೀಪ ಸುಮಾರು 6,000 ಎಕರೆ ಜಮೀನಿನಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡುವ ಸಂಬಂಧ ಕೈಗಾರಿಕಾ ನೋಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಉತ್ತರ ಕರ್ನಾಟಕದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ಆರ್ಥಿಕ ಬೆಳವಣಿಗೆಗಳಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ.
ರಾಜ್ಯದಲ್ಲಿನ ಕಟ್ಟಡಕಲ್ಲು ಸೇರಿದಂತೆ ಎಲ್ಲಾ ಉಪ ಖನಿಜಗಳ ಅನಧಿಕೃತ ಗಣಿಗಾರಿಕೆಯನ್ನು ನಿಯಂತ್ರಿಸುವ ಜೊತೆಗೆ ಸಂಪೂರ್ಣ ಖನಿಜ ಬಳಕೆ ಪ್ರಮಾಣವನ್ನು ಡ್ರೋನ್ ಸರ್ವೆ ಮೂಲಕ ವೈಜ್ಞಾನಿಕವಾಗಿ ಅಂದಾಜಿಸುವ ವ್ಯವಸ್ಥೆಯನ್ನು ರಾಜ್ಯಾದ್ಯಂತ ಅನುμÁ್ಠನಗೊಳಿಸಿ, ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸಲಾಗುವುದು. ಇದರಿಂದ ಉದ್ಯಮ ಸ್ನೇಹಿ, ಸರಳ ಮತ್ತು ಉತ್ತರದಾಯಿತ್ವ ಹೊಂದಿರುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸ್‍ಟೈಲ್ ಫಾರ್ಕ್‍ನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
ಸ್ಟಾರ್ಟಪ್ ವಲಯದಲ್ಲಿ ಕರ್ನಾಟಕದ ಮುಂಚೂಣಿಯನ್ನು ಕಾಯ್ದುಕೊಳ್ಳಲು ಮೂರು ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಂದ ಪ್ರಾರಂಭವಾದ ನವೀನ ಪ್ರಯತ್ನಗಳು, ಸ್ಟಾರ್ಟಅಪ್‍ಗಳನ್ನು ಉತ್ತೇಜಿಸಲು ರಾಜೀವ್ ಗಾಂಧಿ ವಾಣಿಜ್ಯೋದ್ಯಮ ಕಾರ್ಯಕ್ರಮಗಳಡಿ ಜ್ಞಾನಾಧಾರಿತ ಮತ್ತು ತಂತ್ರಜ್ಞಾನ ಚಾಲಿತ ಪರಿಕಲ್ಪನೆಗಳು ಮತ್ತು ನಾವೀನ್ಯತೆಗಳನ್ನು ಪೆÇೀಷಿಸಲಾಗುವುದು. ಮಹಿಳಾ ಉದ್ಯಮಿಗಳನ್ನು ಬೆಂಬಲಿಸಲು ಮಹಿಳಾ ಉತ್ಕøಷ್ಟತೆ ಮತ್ತು ಉದ್ಯಮಶೀಲತೆಯಲ್ಲಿ ಬೆಂಬಲ ಕಾರ್ಯಕ್ರಮ ಪ್ರಾರಂಭಿಸಲಾಗುವುದು. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಗ್ರಿ ಇನ್ನೋವೇಶನ್ ಸ್ಟಾರ್ಟಅಪ್‍ಗಳನ್ನು ಸ್ಥಾಪಿಸಲು ಸಿ-ಕ್ಯಾಂಪ್ನ ಅಗ್ರಿ ಇನ್ನೋವೇಶನ್ ಪಾರ್ಕ್‍ಗೆ 5 ಎಕರೆ ಭೂಮಿಯನ್ನು ಮೀಸಲಿಡಲು ಉದ್ದೇಶಿಸಲಾಗಿದೆ.
ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗಾಗಿ ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಮತ್ತು ಕಿಯೋನಿಕ್ಸ್ ಸಹಯೋಗದೊಂದಿಗೆ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಚಟುವಟಿಕೆ ಆಧಾರಿತ ಪರಿಸರವನ್ನು ಒದಗಿಸಲು 3 ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಅನುಮೋದನೆಗೊಂಡಿರುವ ಚಾಮರಾಜನಗರ, ಹಾಸನ, ಮಡಿಕೇರಿ, ಶಿರಸಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಧಾರವಾಡದಲ್ಲಿ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಉಡುಪಿ, ಹಾವೇರಿ, ಚಿತ್ತಾಪುರ, ಆದಿಚುಂಚನಗಿರಿ, ತುಮಕೂರಿನಲ್ಲಿ ವಿಜ್ಞಾನ ಕೇಂದ್ರಗಳ ಕಾಮಗಾರಿಯು ಪ್ರಗತಿಯಲ್ಲಿದ್ದು, ಇದನ್ನು ಪೂರ್ಣಗೊಳಿಸಲಾಗುವುದು. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 170 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
12ನೇ ಶತಮಾನದಲ್ಲಿ ಸಾಮಾಜಿಕ ಮತ್ತು ಲಿಂಗ ಸಮಾನತೆಗಾಗಿ ಮತ್ತು ವರ್ಗಬೇಧ ಹಾಗೂ ವರ್ಣಬೇಧ ವಿರುದ್ಧವಾಗಿ ಶೋಷಿತ ವರ್ಗದ ಜನರಲ್ಲಿ ಆತ್ಮಸ್ಥೈರ್ಯವನ್ನು ತುಂಬಿ, ಸಮಾಜೋಧಾರ್ಮಿಕ ಕ್ರಾಂತಿಯನ್ನು ಮಾಡಿದ ಶ್ರೇಯಸ್ಸು ವಿಶ್ವಗುರು ಬಸವಣ್ಣನವರಿಗೆ ಸಲ್ಲುತ್ತದೆ. ಜಗತ್ತಿನಲ್ಲಿ ಪ್ರಜಾಪ್ರಭುತ್ವಕ್ಕೆ ಅನುಭವ ಮಂಟಪ ಸ್ಥಾಪನೆ ಮೂಲಕ ಬುನಾದಿಯನ್ನು ಶ್ರೀ ಬಸವೇಶ್ವರರು ಹಾಕಿರುವುದು ಕನ್ನಡಿಗರು ಮತ್ತು ಭಾರತೀಯರ ಹೆಮ್ಮೆಯಾಗಿದೆ. ಇಂತಹ ಅಪೂರ್ವ ವ್ಯಕ್ತಿತ್ವದ ವಿಶ್ವಗುರು ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕ ಸರ್ಕಾರ ಸಾಂಸ್ಕøತಿಕ ನಾಯಕ ಎಂದು ಘೋಷಿಸಿದೆ. ಎಲ್ಲಾ ಸರ್ಕಾರಿ ಕಛೇರಿಗಳಲ್ಲಿರುವ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಭಾವ ಚಿತ್ರದಲ್ಲಿ ವಿಶ್ವಗುರು ಬಸವಣ್ಣ - ಸಾಂಸ್ಕøತಿಕ ನಾಯಕ ಎಂದು ಮುದ್ರಿಸಲಾಗುವುದು.
12ನೇ ಶತಮಾನದಲ್ಲಿ ಬಸವಾದಿ ಶರಣರು ಸಮ ಸಮಾಜದ ನಿರ್ಮಾಣಕ್ಕೆ ಬುನಾದಿ ಹಾಕಿದರು. ಇವರು ತಮ್ಮ ವಚನ ಸಾಹಿತ್ಯದ ಮೂಲಕ ಕಾಯಕ - ದಾಸೋಹದ ತತ್ವವನ್ನು ಪ್ರಸಾರ ಮಾಡಿದರು. ಈ ಹಿನ್ನೆಲೆಯಲ್ಲಿ ಶರಣರ ಜೀವನ ಚರಿತ್ರೆ, ಅವರು ನಡೆದು ಬಂದ ದಾರಿ ಮತ್ತು ವಚನ ಸಾಹಿತ್ಯ ಕುರಿತು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಬಸವಣ್ಣನವರ ಬದುಕು, ಸಂದೇಶ, ಚಿಂತನೆಯನ್ನು ವ್ಯಾಪಕವಾಗಿ ಪ್ರಚುರಪಡಿಸುವ ನಿಟ್ಟಿನಲ್ಲಿ ಸರ್ವ ಧರ್ಮ ಸಂಸತ್ತನ್ನು ಬಸವ ಜಯಂತಿಯಂದು ಆಯೋಜಿಸಲಾಗುವುದು. ಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿಯ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು. ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಸಂಗ್ರಹಾಲಯ/ವಚನ ಮಂಟಪವನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ಅಭಿಯಾನದಡಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ವರ್ಷಪೂರ್ತಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾμÉಯಾಗಿದ್ದು, ಎಲ್ಲಾ ಕಛೇರಿಗಳು, ಅಂಗಡಿ-ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾμÁ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಡಿಭಾಗದಲ್ಲಿ ಕನ್ನಡ ಶಾಲೆಗಳ ಅಭಿವೃದ್ಧಿ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಕನ್ನಡ ಭಾμÉ ಅಭಿವೃದ್ಧಿ ಮಾಡಲಾಗುವುದು. ತುಳು, ಕೊಡವ, ಬ್ಯಾರಿ ಮತ್ತು ಕೊಂಕಣಿ ಕರ್ನಾಟಕದ ಪ್ರಾದೇಶಿಕ ಭಾμÉಗಳಾಗಿದ್ದು, ಅವುಗಳ ಅಭಿವೃದ್ಧಿಗಾಗಿ ಅಕಾಡೆಮಿಗಳ ಮೂಲಕ ಭಾμÉ, ಸಂಸ್ಕøತಿ, ಸಾಹಿತ್ಯವನ್ನು ಪೆÇ್ರೀತ್ಸಾಹಿಸಲಾಗುವುದು ಎಂದು ತಿಳಿಸಿದರು.
ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೆÇಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.
ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯವನ್ನು ಒಳಗೊಂಡ ಕ್ರೀಡಾ ನಗರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 04 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.
ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು. ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಕೊಡಗು ಜಿಲ್ಲೆಯ ಪೆÇನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ನಿರ್ಮಿಸಲಾಗುವುದು. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿμÁ್ಠನದ ನಿಧಿಯಿಂದ 10 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕøತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು.
ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು. ಸಾಹಸ ಪ್ರವಾಸೋದ್ಯವನ್ನು ಉತ್ತೇಜಿಸಲು ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ ರೋಪ್ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು.
ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‍ಪ್ರಿಟೇಷನ್ ಸೆಂಟರ್‍ಗಳನ್ನು ಜೆ.ಎಲ್.ಆರ್ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುವುದು. ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು ನಾಗರಿಕರು, ಸ್ವತಃ ಆನ್‍ಲೈನ್‍ಲ್ಲಿ ಪಡೆದುಕೊಳ್ಳಲು ಅನುವಾಗುವಂತೆ ಭೂ ಸುರಕ್ಷಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು.
ಆಕಾರ್‍ಬಂದ್ ಮತ್ತು ಆರ್.ಟಿ.ಸಿ. ಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್‍ಬಂದ್‍ಗಳ ಗಣಕೀಕರಣ ಕಾರ್ಯವನ್ನು ಕೈಗೊಳ್ಳಲಾಗುವುದು. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಹು ಮಾಲೀಕತ್ವವುಳ್ಳ ಪಹಣಿಗಳನ್ನು ಅಳತೆಗೆ ಒಳಪಡಿಸುವ ಮೂಲಕ ಪ್ರತಿ ಹಿಡುವಳಿದಾರರಿಗೆ ಪೆÇೀಡಿ ಮಾಡಿ ಪ್ರತ್ಯೇಕ ಆರ್.ಟಿ.ಸಿ.ಯನ್ನು ವಿತರಿಸುವ ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ಬಾಕಿ ಉಳಿದಿರುವ ಗ್ರಾಮಗಳನ್ನು ಪೆÇೀಡಿ ಅಭಿಯಾನ 2.0 ರಡಿ ಪೆÇೀಡಿ ಮುಕ್ತ ಮಾಡಲು ಆದ್ಯತೆ ಮೇರೆಗೆ ಕ್ರಮ ವಹಿಸಲಾಗುವುದು.
ರಾಜ್ಯದಲ್ಲಿನ ಸುಮಾರು 30,700 ಗ್ರಾಮ ಠಾಣಾ ಪ್ರದೇಶಗಳನ್ನು ಹಂತ ಹಂತವಾಗಿ ಡ್ರೋನ್ ಮುಖಾಂತರ ಸರ್ವೆ ಮಾಡಿಸಿ ಆಸ್ತಿ ಮತ್ತು ಹಕ್ಕು ದಾಖಲಾತಿಗಳನ್ನು ಭೂ ಮಾಲೀಕರಿಗೆ ವಿತರಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ನೋಟೀಸುರಹಿತ ಮ್ಯುಟೇಷನ್‍ಗಳು (ಪೌತಿ ಖಾತೆ ಮತ್ತು ಜೆ-ಸ್ಲಿಪ್ ಮುಖಾಂತರ ಆಗುವ ಮ್ಯುಟೇಷನ್‍ಗಳು ಹೊರತುಪಡಿಸಿ) ನಿಗದಿತ ತಂತ್ರಾಂಶದಲ್ಲಿ ಸ್ವಯಂ-ಚಾಲಿತವಾಗಿ ಅನುಮೋದನೆಯಾಗುವಂತೆ ಕ್ರಮವಹಿಸಲಾಗುವುದು. ಆಧುನಿಕ ಉಪಕರಣಗಳ ಮುಖಾಂತರ ಕಡಿಮೆ ಅವಧಿಯಲ್ಲಿ ಭೂಮಾಪನ ಕಾರ್ಯಗಳನ್ನು ಕೈಗೊಂಡು ನಿಖರವಾದ ಡಿಜಿಟಲ್ ದಾಖಲೆಗಳನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ಒದಗಿಸಲಾಗುವುದು ಮತ್ತು ಇದಕ್ಕೆ ಅಗತ್ಯವಾದ ಡ್ರೋನ್ ಮತ್ತಿತರ ಉಪಕರಣಗಳನ್ನು ಎಲ್ಲಾ ಜಿಲ್ಲೆಗಳಲ್ಲಿನ ಭೂಮಾಪನಾ ಕಛೇರಿಗಳಿಗೆ ನೀಡಲಾಗುವುದು.
ಡಿಜಿ ಕಂದಾಯ ಯೋಜನೆಯಡಿ ಕಂದಾಯ ಇಲಾಖೆಯು ನೀಡುವ ಎಲ್ಲಾ ಸೇವೆಗಳನ್ನು ಪಾರದರ್ಶಕವಾಗಿ ಮತ್ತು ತ್ವರಿತವಾಗಿ ಡಿಜಿಟಲ್ ಪ್ಲಾಟ್ಫಾರಂ ಮೂಲಕ ಸಾರ್ವಜನಿಕರಿಗೆ ಒದಗಿಸಲು ಕ್ರಮ ವಹಿಸಲಾಗುವುದು. ಇ-ಆಫೀಸ್ ವ್ಯವಸ್ಥೆಯನ್ನು, ಇಲಾಖೆಯ ಗ್ರಾಮಮಟ್ಟದವರೆಗೆ ವಿಸ್ತರಿಸಲಾಗುವುದು ಮತ್ತು ಇದಕ್ಕಾಗಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರಿಗೆ ಲ್ಯಾಪ್ಟಾಪ್ ನೀಡಲಾಗುವುದು. ಸರ್ಕಾರವು ದಾಖಲೆ ರಹಿತ ಜನವಸತಿ ಪ್ರದೇಶಗಳಾದ ತಾಂಡ, ಹಟ್ಟಿ, ಹಾಡಿ, ದೊಡ್ಡಿ, ಪಾಳ್ಯ, ಮಜರೆ, ಕ್ಯಾಂಪ್, ಕಾಲೋನಿ ಇತ್ಯಾದಿಗಳನ್ನು ಗುರುತಿಸಿ ಹೊಸ ಕಂದಾಯ ಗ್ರಾಮ ಹಾಗೂ ಉಪ ಗ್ರಾಮಗಳೆಂದು ಘೋಷಿಸಿದ್ದು, ಅಲ್ಲಿನ ಸುಮಾರು 2 ಲಕ್ಷ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲು ಕ್ರಮವಹಿಸಲಾಗುವುದು ಎಂದರು.
2023-24 ರಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ ರೈತರಿಗೆ ತುಸು ನೆಮ್ಮದಿ ನೀಡಲು ಎನ್.ಡಿ.ಆರ್.ಎಫ್ ನಿಧಿಯಿಂದ 18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೋರಿ ಕೇಂದ್ರ ಸರ್ಕಾರಕ್ಕೆ 3 ಮೆಮೊರಾಂಡಮ್‍ಗಳನ್ನು ಸಲ್ಲಿಸಿದ್ದರೂ ಸಹ ಕೇಂದ್ರ ಸರ್ಕಾರವು ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರುವುದಿಲ್ಲ. ಆದಾಗ್ಯೂ ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಬರವನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. 33.19 ಲಕ್ಷ ರೈತರಿಗೆ ತಲಾ 2,000 ರೂ.ಗಳವರೆಗೆ ಇನ್‍ಪುಟ್ ಸಬ್ಸಿಡಿ 629 ಕೋಟಿ ರೂ. ಅನುದಾನವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಬರದ ತೀವ್ರತೆಯನ್ನು ತಗ್ಗಿಸಲು 20 ಕೋಟಿ ರೂ.ಗಳ ವೆಚ್ಚದಲ್ಲಿ ಮಿನಿ ಮೇವಿನ ಕಿಟ್ ವಿತರಿಸಲಾಗುತ್ತಿದೆ. ಅಂತರ್ಜಲ ಮಟ್ಟ ವೃದ್ಧಿಸಲು ಕೃಷಿ ಭಾಗ್ಯ ಯೋಜನೆಯಡಿಯಲ್ಲಿ 200 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಸಣ್ಣ ನೀರಾವರಿ ಇಲಾಖೆಯ ಮೂಲಕ 100 ಕೋಟಿ ರೂ.ಗಳ ವೆಚ್ಚದ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿಪತ್ತು ಉಪಶಮನ ನಿಧಿಯಿಂದ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಬರ ಉಪಶಮನ ಕ್ರಮಗಳನ್ನು ತೆಗೆದುಕೊಳ್ಳಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪರಿಣಾಮದ ದೃಶ್ಯಗಳು ಮತ್ತು ಹವಾಮಾನ ಬದಲಾವಣೆ ಪರಿಹಾರಗಳ ಕುರಿತು ಅರಿವು ಮೂಡಿಸಲು ಹವಾಮಾನ ಬದಲಾವಣೆ ಅನುಭವ ಕೇಂದ್ರವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ನೋಂದಣಿ ಪ್ರಕ್ರಿಯೆಯಲ್ಲಿ ನಾಗರಿಕ ಸ್ನೇಹಿ ಸುಧಾರಣೆಗಳನ್ನು ತರಲು ಈ ಕೆಳಕಂಡ ಉಪಕ್ರಮಗಳನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಕಡ್ಡಾಯವಾಗಿ ನೋಂದಾಯಿಸಬಹುದಾದ ಆಯ್ದ ದಾಖಲೆಗಳ ಇ-ನೋಂದಣಿಯನ್ನು ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ಎರಡು ಪಕ್ಷಗಳ ಉಪಸ್ಥಿತಿಯಿಲ್ಲದೆ ನೋಂದಣಿ ಮಾಡಲು ಕ್ರಮ. ಎನಿ ಟೈಮ್ ಎನಿವೇರ್ ರಿಜಿಸ್ಟ್ರೇಷನ್ ಕಾರ್ಯಕ್ರಮವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ನೋಂದಣಿ ಮತ್ತು ಮುದ್ರಾಂಕ ಕಾಯ್ದೆಗಳಿಗೆ ತಿದ್ದುಪಡಿ. ಸ್ಥಿರಾಸ್ತಿ ನೋಂದಣಿಗೆ ಸಂಬಂಧಿಸಿದ ಎಲ್ಲಾ ತಂತ್ರಾಂಶಗಳ ಏಕೀಕರಣ. ನಾಗರಿಕರ ಅನುಕೂಲಕ್ಕಾಗಿ ಭಾನುವಾರ ಸಹ ಆಯ್ದ ಉಪ ನೋಂದಣಾಧಿಕಾರಿ ಕಛೇರಿಯನ್ನು ತೆರೆಯಲಾಗುವುದು.
ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ. ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು. ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ ವಿಷನ್ ಗ್ರೂಫ್ ರಚಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7,214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ. ಈವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅಹವಾಲುಗಳನ್ನೂ ಸಹ ನಿಗದಿತ ಕಾಲಮಿತಿಯಲ್ಲಿ ಬಗೆಹರಿಸಲಾಗುವುದು ಎಂದರು.
ಕುಟುಂಬ ದತ್ತಾಂಶದ ಮೂಲಕ ರಾಷ್ಟ್ರದ ಅತಿದೊಡ್ಡ ಜನಕಲ್ಯಾಣ ಕಾರ್ಯಕ್ರಮಗಳಾದ 5 ಗ್ಯಾರಂಟಿ ಯೋಜನೆಗಳನ್ನು ಕೇವಲ 3 ತಿಂಗಳಲ್ಲಿ 5 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ತಲುಪಿಸಲು ಸಾಧ್ಯವಾಗಿದೆ. ಪ್ರಸಕ್ತ ಸಾಲಿನಲ್ಲಿ 36,000 ಕೋಟಿ ರೂ.ಗಳಷ್ಟು ಬೃಹತ್ ಮೊತ್ತವನ್ನು ಅರ್ಹ ಫಲಾನುಭವಿಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ತಂತ್ರಾಂಶವನ್ನು ಇನ್ನಷ್ಟು ಬಲಪಡಿಸಲು ಆದ್ಯತೆ ನೀಡಲಾಗುವುದು. ವಿವಿಧ ಫಲಾನುಭವಿ-ಆಧಾರಿತ ಯೋಜನೆಗಳ ಅಡಿಯಲ್ಲಿ ನಗದು ವರ್ಗಾವಣೆಯನ್ನು ರಾಜ್ಯ ಡಿ.ಬಿ.ಟಿ. ವೇದಿಕೆಯ ಮೂಲಕ ಜಾರಿಗೊಳಿಸಲಾಗುತ್ತಿದೆ. ಫಲಾನುಭವಿಗಳಿಗೆ ನೀಡುತ್ತಿರುವ ನಗದುರಹಿತ ಪ್ರಯೋಜನಗಳನ್ನೂ ಸಹ ಹಂತ ಹಂತವಾಗಿ ರಾಜ್ಯ ಡಿ.ಬಿ.ಟಿ. ವೇದಿಕೆಯ ಅಡಿಯಲ್ಲಿ ತರಲಾಗುವುದು.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿಗಳು, ವಾರ್ತಾ ಇಲಾಖೆಯು ಪ್ರಕಟಿಸುತ್ತಿರುವ ವಾರ್ತಾ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸ ಪತ್ರಿಕೆಗಳನ್ನು ಡಿಜಿಟೈಸ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಜನರಿಗೆ ತಲುಪಿಸಲು ಕ್ರಮವಹಿಸಲಾಗುವುದು. ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು. ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ” ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು ಎಂದು ತಿಳಿಸಿದರು.
ಸಮಾಜದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ಸಾರ್ವಜನಿಕರಲ್ಲಿ ಅಭದ್ರತೆ ಮತ್ತು ಭಯವನ್ನು ಉಂಟು ಮಾಡುವವರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಐ.ಟಿ.ಬಿ.ಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡಗಳನ್ನು ರಚಿಸಲಾಗುವುದು ಮತ್ತು ಒಳಾಡಳಿತ ಇಲಾಖೆಯಲ್ಲಿ ಒಂದು ವಿಶೇಷ ಕೋಶವನ್ನು ರಚಿಸಿ ಅದಕ್ಕೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಲಾಗುವುದು. ಡೀಪ್ ಫೇಕ್ ಮತ್ತಿತರ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಗ್ಧ ಸಾರ್ವಜನಿಕರನ್ನು ವಂಚಿಸುವ ಕೃತ್ಯ ಎಸಗುವವರ ವಿರುದ್ಧ ತನಿಖೆ ನಡೆಸಿ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಸೈಬರ್ ಕ್ರೈಮ್ ವಿಭಾಗವನ್ನು ಬಲಪಡಿಸಲು ಒಟ್ಟು 43 ಸಿ.ಇ.ಎನ್. ಪೆÇಲೀಸ್ ಠಾಣೆಗಳನ್ನು ಉನ್ನತೀಕರಿಸಲಾಗುವುದು ಎಂದರು.
ಪೆÇಲೀಸ್ ಗೃಹ-2025 ಯೋಜನೆಯಡಿ ಇದುವರೆಗೆ 800 ಕೋಟಿ ರೂ.ಗಳ ವೆಚ್ಚದಲ್ಲಿ 1,128 ವಸತಿಗೃಹಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗಿದ್ದು, 2,956 ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು. ಕಟ್ಟಡ ರಹಿತ ಠಾಣೆ ಮತ್ತು ಪೆÇಲೀಸ್ ಕಛೇರಿಗಳಿಗೆ 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಿಸಲಾಗುವುದು. ಬೆಂಗಳೂರಿನ ಪೆÇಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣವನ್ನು ನಿರ್ಮಿಸಲಾಗುವುದು.
ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಹಾಗೂ ದೇವನಹಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟು 10 ಕೋಟಿ ರೂ.ಗಳ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್‍ಗಳನ್ನು ನಿರ್ಮಿಸಲಾಗುವುದು. ಅರ್ಹತಾ ಪತ್ರ ನವೀಕರಣಕ್ಕೆ ಬರುವಂತಹ ಎಲ್ಲಾ ಸಾರಿಗೆ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ವಯಂಚಾಲಿತ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
ಸಾರಿಗೆ ಇಲಾಖೆಯಲ್ಲಿ ನೋಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಒಂದು ಯೋಜನೆಯನ್ನು ಜಾರಿಗೊಳಿಸಲಾಗುವುದು. 2024-25ನೇ ಸಾಲಿನಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ, ಬೆಳಗಾವಿ, ಮಂಗಳೂರು ಹಾಗೂ ಭಾಲ್ಕಿಯ ಕಛೇರಿಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು.
ರಾಜ್ಯದಲ್ಲಿನ ಕಾನೂನು ನ್ಯಾಯಾಲಯಗಳು ಮತ್ತು ಶಾಸನಬದ್ಧ ನ್ಯಾಯಮಂಡಳಿಗಳ ಮುಂದೆ ಸರ್ಕಾರಿ ವ್ಯಾಜ್ಯಗಳನ್ನು ನಿರ್ವಹಿಸುವ ವಿಷಯದಲ್ಲಿ ಸಮರ್ಥ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ಕಾನೂನಿನ ಮೂಲಕ ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ ಅಧಿನಿಯಮ, 2023 ನ್ನು ಜಾರಿಗೆ ತರಲಾಗಿದೆ. ರೈತರು ಮತ್ತು ಆರ್ಥಿಕವಾಗಿ ದುರ್ಬಲ ವ್ಯಕ್ತಿಗಳಿಗೆ ತ್ವರಿತ ನ್ಯಾಯ ಒದಗಿಸಲು ಸಿವಿಲ್ ಪ್ರಕ್ರಿಯೆ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2023 ನ್ನು ಜಾರಿಗೆ ತರಲು ಕ್ರಮವಹಿಸಲಾಗಿದೆ. ರಾಜ್ಯದ ಉಚ್ಛ ನ್ಯಾಯಾಲಯಗಳಲ್ಲಿ ಮತ್ತು ಸಿವಿಲ್ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಕರ್ನಾಟಕ ಉಚ್ಚ ನ್ಯಾಯಾಲಯ ಕಾಯ್ದೆ ಮತ್ತು ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಕಾಯ್ದೆಗೆ ತಿದ್ದುಪಡಿ ತರಲು ಕ್ರಮವಹಿಸಲಾಗಿದೆ ಎಂದು ಹೇಳಿದರು.
2023-24ನೇ ಸಾಲಿನಲ್ಲಿ 175 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ರಾಜ್ಯದ ವಿವಿಧ ನ್ಯಾಯಾಲಯ ಕಟ್ಟಡಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ಅಭಿವೃಧ್ಧಿಪಡಿಸಲಾಗುತ್ತಿದ್ದು, 2024-25ನೇ ಸಾಲಿನಲ್ಲಿ ಈ ಉದ್ದೇಶಕ್ಕಾಗಿ 175 ಕೋಟಿ ರೂ. ಅನುದಾನ ಒದಗಿಸಲಾಗುವುದು. ರಾಜ್ಯದ ಎಲ್ಲಾ ನ್ಯಾಯಾಲಯಗಳ ಕಲಾಪಗಳ ನೇರ ಪ್ರಸಾರ ಮಾಡಲು ಮತ್ತು ನ್ಯಾಯಾಲಯಗಳ ಆಡಳಿತ ವ್ಯವಸ್ಥೆಯನ್ನು ಆಧುನೀಕರಿಸಲು 94 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕೆ 180 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ವಿರಾಜಪೇಟೆಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಪೂರ್ಣವಾಗಿರುವ ಮೈಸೂರಿನ ವಕೀಲರ ಭವನವನ್ನು ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ನ್ಯಾಯವಾದಿಗಳ ಮೇಲಿನ ಹಿಂಸೆಯನ್ನು ತಡೆಯಲು ಮತ್ತು ನಿರ್ಭೀತರಾಗಿ ಕರ್ತವ್ಯ ನಿರ್ವಹಿಸಲು ಅನುವಾಗುವಂತೆ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿμÉೀಧ ವಿಧೇಯಕ, 2023 ಅನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದರು.