ಬೆಂಗಳೂರು: ಬೆಂಗಳೂರು ನಗರದ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ.
"
ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ.
"
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 3 ಸಾವಿರ ಉದ್ದಿಮೆದಾರರು ಮಾತ್ರ 60% ನಿಯಮ ಪಾಲಿಸಬೇಕಿದೆ. ಬೆಂಗಳೂರಿನಲ್ಲಿ 55,178 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. 60% ಕನ್ನಡ ನಿಯಮ ಉಲ್ಲಂಘನೆ ಮಾಡಿರುವ 55,178 ಉದ್ದಿಮೆದಾರರಿಗೆ ನೋಟಿಸ್ ಹೋಗಿದೆ.
ನೋಟಿಸ್ ನೀಡಿದ ಬಳಿಕ ಈ ಉದ್ದಿಮೆದಾರರು 60% ಕನ್ನಡ ನಾಮಫಲಕ ಅಳವಡಿಸಿದ್ದಾರೆ. ನೋಟಿಸ್ ನೀಡಿದ ಬಳಿಕವೂ 60% ನಿಯಮ ಅನುಸರಿಸದ 3,044 ಉದ್ದಿಮೆದಾರರು ಇದ್ದಾರೆ. ಅವರ ವಿರುದ್ಧ ಸರ್ಕಾರ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ ಎಂದಿದ್ದಾರೆ.